ಮಾರ್ಕ 10:21 - ಪರಿಶುದ್ದ ಬೈಬಲ್21 ಯೇಸು ಆ ಮನುಷ್ಯನನ್ನು ಪ್ರೀತಿಯಿಂದ ದೃಷ್ಟಿಸಿನೋಡಿ, “ನೀನು ಮಾಡಬೇಕಾದ ಕಾರ್ಯವೊಂದಿದೆ. ಹೋಗಿ, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ಇರುವುದು. ನಂತರ ಬಂದು, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆಗ ಯೇಸು ಅವನನ್ನು ಮಮತೆಯಿಂದ ಈಕ್ಷಿಸಿ, “ನೀನು ಮಾಡಬೇಕಾದ ಕಾರ್ಯವೊಂದು ಬಾಕಿಯಿದೆ. ಹೋಗು, ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೇಸು ಅವನನ್ನು ದೃಷ್ಟಿಸಿನೋಡಿ ಪ್ರೀತಿಸಿ ಅವನಿಗೆ - ನಿನಗೆ ಒಂದು ಕಡಿಮೆಯಾಗಿದೆ; ಹೋಗು, ನಿನ್ನ ಬದುಕನ್ನೆಲ್ಲಾ ಮಾರಿ ಬಡವರಿಗೆ ಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಜೆಜುನ್ ಪ್ರೆಮಾನ್ ತ್ಯಾ ಮಾನ್ಸಾಕ್ ಬಗಟ್ಲ್ಯಾನ್ ಅನಿ “ತಿಯಾ ಎಕ್ ಕರ್‍ತಲೆ ಹಾಯ್, ಜಾ ಅನಿ ತುಜೆಕ್ಡೆ ಹೊತ್ತೆ ಸಗ್ಳೆ ಇಕ್, ಅನಿ ಯೆಲ್ಲೆ ಪೈಸೆ ಗರಿಬಾಕ್ನಿ ದಿ, ಅನಿ ಸರ್‍ಗಾತ್ ತುಕಾ ಖರಿ ಸಾವ್ಕಾರ್ಕಿ ರ್‍ಹಾತಾ, ಮಾನಾ ಯೆ ಅನಿ ಮಾಜ್ಯಾ ಫಾಟ್ನಾ ಯೆ,” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |
ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.
“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.