ಮಾರ್ಕ 10:37 - ಪರಿಶುದ್ದ ಬೈಬಲ್37 ಅವರು, “ನೀನು ನಿನ್ನ ರಾಜ್ಯದಲ್ಲಿ ವೈಭವದಿಂದಿರುವಾಗ ನಮ್ಮಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ಅನುಗ್ರಹಿಸು” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅವರು ಆತನಿಗೆ, “ನಾವು ಪರಲೋಕದಲ್ಲಿ ಮಹಾಪದವಿಯನ್ನು ಪಡೆದಾಗ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 “ತಮ್ಮ ಮಹಿಮಾಸ್ಥಾನದಲ್ಲಿ ನಮ್ಮಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ಎಡಗಡೆಯಲ್ಲೂ ಆಸೀನರಾಗುವಂತೆ ಅನುಗ್ರಹಿಸಬೇಕು,” ಎಂದು ತಮ್ಮ ಬಯಕೆಯನ್ನು ತೋಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ನಿನಗೆ ಮಹಾಪದವಿ ಬಂದಾಗ ನಮ್ಮಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕೂತುಕೊಳ್ಳುವಂತೆ ನಮಗೆ ಅನುಗ್ರಹಮಾಡಬೇಕು ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅವರು ಯೇಸುವಿಗೆ, “ನಾವು ನಿನ್ನ ಮಹಿಮೆಯಲ್ಲಿ ಒಬ್ಬನು ನಿಮ್ಮ ಬಲಗಡೆಯಲ್ಲೂ ಇನ್ನೊಬ್ಬನು ನಿಮ್ಮ ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ತನ್ನಾ ತೆನಿ “ತಿಯಾ ವೈಭವಾನ್ ತುಜ್ಯಾ ರಾಜ್ಜ್ಯಾತ್ ಸಿವಾಸನಾರ್ ಬಸ್ತಾನಾ, ಅಮ್ಕಾ ದೊಗ್ಯಾಕ್ನಿ ಎಕ್ಲ್ಯಾಕ್ ತುಜ್ಯಾ ಉಜ್ವ್ಯಾ ಬಾಜುಕ್ ಅನಿ ಅನ್ಯೆಕ್ಲ್ಯಾಕ್ ಡಾವ್ಯಾ ಬಾಜುಕ್ ಬಸುಕ್ ಅವ್ಕಾಸ್ ಕರುನ್ ದಿ” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |
ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.