ಮಾರ್ಕ 10:4 - ಪರಿಶುದ್ದ ಬೈಬಲ್4 ಫರಿಸಾಯರು, “ಒಬ್ಬನು ತನ್ನ ಹೆಂಡತಿಗೆ ವಿಚ್ಛೇದನ ಪತ್ರ ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಹೇಳಿದ್ದಾನೆ” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅದಕ್ಕೆ ಅವರು, “ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅನುಮತಿ ಕೊಟ್ಟನು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅದಕ್ಕೆ ಅವರು, “ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಹೆಂಡತಿಯನ್ನು ಬಿಟ್ಟುಬಿಡಲು ಮೋಶೆ ಅನುಮತಿ ಇತ್ತಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅಪ್ಪಣೆಕೊಟ್ಟನು ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅದಕ್ಕೆ ಅವರು, “ವಿವಾಹ ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅನುಮತಿ ಕೊಟ್ಟನು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತನ್ನಾ ಫಾರಿಜೆವಾನಿ “ಎಕ್ಲ್ಯಾನ್ ಅಪ್ನಾಚ್ಯಾ ಬಾಯ್ಕೊಕ್ ಸೊಡ್ ಪತ್ರ್ ಲಿವ್ನ್ ದಿವ್ನ್ ಸೊಡುನ್ ದಿವ್ಕ್ ಹೊತಾ ಮನುನ್ ಮೊಯ್ಜೆನ್ ಸಾಂಗ್ಲ್ಯಾನಾಯ್” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.
ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.