Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:43 - ಪರಿಶುದ್ದ ಬೈಬಲ್‌

43 ಆದರೆ ನೀವು ಅವರಂತಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮ್ಮ ಸೇವಕನಾಗಿರಲಿ;;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ತೆ ರಾಂವ್ದಿತ್, ಖರೆ ತುಮ್ಚ್ಯೆ ಮದ್ದಿ ತಸೆ ರ್‍ಹಾವ್ಚೆ ನ್ಹಯ್, ತುಮ್ಚ್ಯೆ ಮದ್ದಿ ಕೊನ್ ಮೊಟೊ ಹೊವ್ಚೆ ಮನುನ್ ಯವಜ್ತಾ ತೊ ಸಗ್ಳ್ಯಾಂಚೊ ಸೆವಕ್ ಹೊವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:43
15 ತಿಳಿವುಗಳ ಹೋಲಿಕೆ  

ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು. ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”


ಯೇಸು ಕುಳಿತುಕೊಂಡು, ಹನ್ನೆರಡು ಜನ ಅಪೊಸ್ತಲರನ್ನು ತನ್ನ ಬಳಿಗೆ ಕರೆದು ಅವರಿಗೆ, “ನಿಮ್ಮಲ್ಲಿ ಅತ್ಯಂತ ಪ್ರಮುಖ ವ್ಯಕ್ತಿಯಾಗಬೇಕೆಂದು ಬಯಸುವವನು ಉಳಿದ ಎಲ್ಲರನ್ನು ತನಗಿಂತಲೂ ಹೆಚ್ಚು ಪ್ರಮುಖರೆಂದು ಭಾವಿಸಿಕೊಂಡು ಎಲ್ಲರ ಸೇವೆಮಾಡಬೇಕು” ಎಂದು ಹೇಳಿದನು.


ಬಳಿಕ ಯೇಸು ತನ್ನ ಶಿಷ್ಯರಿಗೆ, “ಒಬ್ಬನು ನನ್ನ ಹೆಸರಿನಲ್ಲಿ ಒಂದು ಚಿಕ್ಕ ಮಗುವನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ಒಬ್ಬನು ನನ್ನನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನು ಕಳುಹಿಸಿದಾತನನ್ನೇ (ದೇವರನ್ನು) ಸ್ವೀಕರಿಸಿಕೊಂಡಂತಾಯಿತು. ನಿಮ್ಮಲ್ಲಿ ಯಾವನು ದೀನನಾಗಿದ್ದಾನೋ ಅವನೇ ನಿಮ್ಮಲ್ಲಿ ಪ್ರಮುಖನಾಗಿದ್ದಾನೆ” ಎಂದು ಹೇಳಿದನು.


ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ನನ್ನ ಸಹೋದರ ಸಹೋದರಿಯರೇ, ನೀವು ಸ್ವತಂತ್ರರಾಗಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾನೆ. ಆದರೆ ಪಾಪಮಯವಾದ ನಿಮ್ಮ ಸ್ವಭಾವವನ್ನು ಮೆಚ್ಚಿಸುವುದಕ್ಕಾಗಿ ನಿಮ್ಮ ಸ್ವತಂತ್ರವನ್ನು ನೆಪಮಾಡಿಕೊಳ್ಳಬೇಡಿ. ಆದರೆ ಪ್ರೀತಿಯಿಂದ ಒಬ್ಬರ ಸೇವೆಯನ್ನೊಬ್ಬರು ಮಾಡಿರಿ.


ಯೇಸು, “ನನ್ನ ರಾಜ್ಯವು ಈ ಲೋಕಕ್ಕೆ ಸೇರಿದ್ದಲ್ಲ. ಅದು ಈ ಲೋಕಕ್ಕೆ ಸೇರಿದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಸಿಗದಂತೆ ನನ್ನ ಸೇವಕರು ಹೋರಾಡುತ್ತಿದ್ದರು. ಆದರೆ ನನ್ನ ರಾಜ್ಯವು ಮತ್ತೊಂದು ಸ್ಥಳದ್ದು” ಎಂದನು.


ಅವನು ಪ್ರಾರ್ಥಿಸಿದ ಬಳಿಕ ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ಮನೆಗೆ ಹೋದನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಆ ಫರಿಸಾಯನು ನೀತಿವಂತನೆಂದು ನಿರ್ಣಯಿಸಲ್ಪಡಲಿಲ್ಲ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”


ಯೇಸು ಎಲ್ಲಾ ಶಿಷ್ಯರನ್ನು ಒಟ್ಟಾಗಿ ಕರೆದು, “ಯೆಹೂದ್ಯರಲ್ಲದವರು ಅಧಿಪತಿಗಳನ್ನು ಹೊಂದಿದ್ದಾರೆ. ಆ ಅಧಿಪತಿಗಳು ಜನರ ಮೇಲೆ ತಮಗಿರುವ ಅಧಿಕಾರವನ್ನು ತೋರಿಸಲು ಇಷ್ಟಪಡುತ್ತಾರೆಂಬುದು ನಿಮಗೆ ತಿಳಿದಿದೆ. ಅವರ ಪ್ರಮುಖ ನಾಯಕರುಗಳು ಜನರ ಮೇಲೆ ತಮಗಿರುವ ಅಧಿಕಾರವನ್ನೆಲ್ಲಾ ಉಪಯೋಗಿಸಲು ಇಷ್ಟಪಡುತ್ತಾರೆ.


ನಿಮ್ಮಲ್ಲಿ ಪ್ರಮುಖನಾಗಬೇಕೆಂದು ಬಯಸುವವನು ಸೇವಕನಂತೆ ಮತ್ತು ಗುಲಾಮನಂತೆ ನಿಮ್ಮೆಲ್ಲರ ಸೇವೆಮಾಡಬೇಕು.


ಆದರೆ ನೀವು ಹಾಗಾಗಬಾರದು. ಅತ್ಯಂತ ದೊಡ್ಡ ವ್ಯಕ್ತಿಯು ಅತ್ಯಂತ ಚಿಕ್ಕ ವ್ಯಕ್ತಿಯಾಗಬೇಕು. ನಾಯಕರು ಸೇವಕರಂತಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು