ಮಾರ್ಕ 10:45 - ಪರಿಶುದ್ದ ಬೈಬಲ್45 ಅದೇ ರೀತಿ ಮನುಷ್ಯಕುಮಾರನು ಜನರಿಂದ ಸೇವೆ ಮಾಡಿಸಿಕೊಳ್ಳಲು ಬರದೆ, ಜನರ ಸೇವೆಮಾಡಲು ಬಂದನು. ಮನುಷ್ಯಕುಮಾರನು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ನರಪುತ್ರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆ ಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಬೋಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ತಸೆಚ್ ಮಾನ್ಸಾಚೊ ಲೆಕ್ ಲೊಕಾನಿಕ್ನಾ ಸೆವಾ ಕರುನ್ ಘೆವ್ಕ್ ಯೆವ್ಕ್ ನಾ, ಸೆವಾ ಕರುಕ್ ಅನಿ ಅಪ್ನಾಚೊ ಜಿವ್ ದಿವ್ನ್ ಸುಮಾರ್ ಜನಾಕ್ನಿ ಸುಟ್ಕಾ ಕರುಕ್ ಮನುನ್ ಯೆಲಾ”. ಅಧ್ಯಾಯವನ್ನು ನೋಡಿ |
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.