ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.
ಜನಸಮೂಹದ ಮುಂದಿದ್ದ ಜನರು ಕುರುಡನನ್ನು ಗದರಿಸಿ, ಅವನಿಗೆ ಮಾತಾಡಕೂಡದೆಂದು ಹೇಳಿದರು. ಆದರೆ ಆ ಕುರುಡನು ಮತ್ತಷ್ಟು ಗಟ್ಟಿಯಾಗಿ, “ದಾವೀದನ ಕುಮಾರನೇ, ದಯಮಾಡಿ ನನಗೆ ಸಹಾಯಮಾಡು!” ಎಂದು ಕೂಗಿದನು.
ಯೇಸು ಅಲ್ಲಿ ಇನ್ನೂ ಮಾತನಾಡುತ್ತಿದ್ದನು. ಅಷ್ಟರಲ್ಲಿ ಕೆಲವು ಜನರು ಸಭಾಮಂದಿರದ ಅಧಿಕಾರಿಯಾದ ಯಾಯಿರನ ಮನೆಯಿಂದ ಬಂದು ಯಾಯಿರನಿಗೆ, “ನಿನ್ನ ಮಗಳು ಸತ್ತುಹೋದಳು. ಈಗ ಬೋಧಕನಿಗೆ ತೊಂದರೆ ಕೊಡುವ ಅಗತ್ಯವಿಲ್ಲ” ಎಂದು ಹೇಳಿದರು.
ಬಳಿಕ ಜನರು ಯೇಸುವಿನ ಬಳಿಗೆ ಬಂದು ತಮ್ಮ ಚಿಕ್ಕ ಮಕ್ಕಳನ್ನು ತಂದು ಅವರಿಗಾಗಿ ಪ್ರಾರ್ಥಿಸಬೇಕೆಂದು ಆತನನ್ನು ಬೇಡಿಕೊಂಡರು. ಇದನ್ನು ಕಂಡ ಶಿಷ್ಯರು ಚಿಕ್ಕ ಮಕ್ಕಳನ್ನು ಆತನ ಬಳಿಗೆ ತರಕೂಡದೆಂದು ಗದರಿಸಿದರು.
ನೀವು ಪವಿತ್ರಾತ್ಮನ ಸಹಾಯದಿಂದ ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಾ ಸಕಲವಿಧವಾದ ವಿಜ್ಞಾಪನೆಗಳನ್ನು ಮಾಡಿರಿ ಮತ್ತು ನಿಮಗೆ ಅಗತ್ಯವಾದವುಗಳಿಗಾಗಿ ಬೇಡಿಕೊಳ್ಳಿರಿ. ಇದಕ್ಕಾಗಿ ಯಾವಾಗಲೂ ಸಿದ್ಧರಾಗಿರಿ. ಪ್ರಾರ್ಥನೆಯನ್ನು ಬಿಟ್ಟುಕೊಡಬೇಡಿರಿ. ದೇವಜನರೆಲ್ಲರಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ.