Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:6 - ಪರಿಶುದ್ದ ಬೈಬಲ್‌

6 ಆದರೆ ದೇವರು ಪ್ರಪಂಚವನ್ನು ಸೃಷ್ಟಿಸಿದಾಗ, ‘ಮನುಷ್ಯರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ನಿರ್ಮಿಸಿದನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರಾದರೋ ಸೃಷ್ಟಿಯ ಮೊದಲಿನಿಂದಲೇ ಮನುಷ್ಯರನ್ನು ಗಂಡುಹೆಣ್ಣಾಗಿ ಉಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೆ ಸೃಷ್ಟಿಯ ಆರಂಭದಿಂದಲೇ ‘ದೇವರು ಮನುಷ್ಯರನ್ನು ಗಂಡುಹೆಣ್ಣಾಗಿ ನಿರ್ಮಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವರಾದರೋ ಸೃಷ್ಟಿಯ ಮೊದಲಿನಿಂದಲೇ ಮನುಷ್ಯರನ್ನು ಗಂಡುಹೆಣ್ಣಾಗಿ ನಿರ್ಮಿಸಿದನೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು, ‘ಅವರನ್ನು ಗಂಡು ಹೆಣ್ಣಾಗಿ ಮಾಡಿದರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ, ದೆವಾನ್ ಹಿ ಸಗ್ಳಿ ದುನಿಯಾ ರಚ್ತಾನಾ ಮಾನ್ಸಾಕ್ನಿ ಘೊಮಾನುಸ್ ಅನಿ ಬಾಯ್ಕೊಮನುಸ್ ಕರುನ್ ರಚ್ಲ್ಯಾನ್.” ಮನುನ್ ಪವಿತ್ರ್ ಪುಸ್ತಕ್ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:6
9 ತಿಳಿವುಗಳ ಹೋಲಿಕೆ  

ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾಗಿ ಸೃಷ್ಟಿಸಿದನು. ಆತನು ಅವರನ್ನು ಗಂಡು ಮತ್ತು ಹೆಣ್ಣುಗಳಾಗಿ ರೂಪಿಸಿದನು.


ದೇವರು ಅವರನ್ನು ಗಂಡು ಮತ್ತು ಹೆಣ್ಣುಗಳಾಗಿ ಉಂಟುಮಾಡಿದನು. ಆತನು ಅವರನ್ನು ನಿರ್ಮಿಸಿದ ದಿನದಲ್ಲೇ ಅವರನ್ನು ಆಶೀರ್ವದಿಸಿ ಅವರಿಗೆ, “ಮನುಷ್ಯ” ಎಂದು ಹೆಸರಿಟ್ಟನು.


ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.


ಆ ಜನರು, “ಆತನು ಮತ್ತೆ ಬರುವುದಾಗಿ ವಾಗ್ದಾನ ಮಾಡಿದ್ದನು. ಆತನು ಎಲ್ಲಿದ್ದಾನೆ? ನಮ್ಮ ಪಿತೃಗಳು ಸತ್ತುಹೋದರು. ಆದರೆ ಈ ಲೋಕವು ಆದಿಯಿಂದಲೂ ಇದ್ದ ರೀತಿಯಲ್ಲಿಯೇ ಇದೆ” ಎಂದು ಹೇಳುವರು.


ಏಕೆಂದರೆ ಆ ದಿನಗಳು ಬಹಳ ಸಂಕಟದಿಂದ ತುಂಬಿರುತ್ತವೆ. ದೇವರು ಈ ಲೋಕವನ್ನು ಸೃಷ್ಟಿಮಾಡಿದಂದಿನಿಂದ ಅಂಥ ಸಂಕಟ ಇದುವರೆಗೂ ಆಗಿಲ್ಲ, ಇನ್ನು ಮುಂದೆಯೂ ಆಗುವುದಿಲ್ಲ.


ಜನರು ದೇವರ ನಿತ್ಯಶಕ್ತಿಯನ್ನಾಗಲಿ ಆತನ ದೈವತ್ವಗಳನ್ನಾಗಲಿ ಕಾಣಲಾರರು. ಆದರೆ ಲೋಕದ ಆರಂಭದಿಂದಲೂ ಆ ಸಂಗತಿಗಳು ಜನರಿಗೆ ಸುಲಭವಾಗಿ ಅರ್ಥವಾಗುತ್ತವೆ. ದೇವರು ಮಾಡಿದ ಸೃಷ್ಟಿಗಳಲ್ಲಿ ಆ ಸಂಗತಿಗಳು ಸ್ಪಷ್ಟವಾಗಿವೆ. ಆದ್ದರಿಂದ ಜನರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ನೆವ ಹೇಳಲು ಸಾಧ್ಯವಿಲ್ಲ.


ಆ ಯುವತಿಯರ ತಂದೆಗಳಾಗಲಿ ಸಹೋದರರಾಗಲಿ ನಮ್ಮಲ್ಲಿಗೆ ಬಂದು ದೂರು ಹೇಳುತ್ತಾರೆ. ಆಗ ನಾವು ಅವರಿಗೆ, ‘ಬೆನ್ಯಾಮೀನ್ಯರ ಗಂಡಸರಿಗೆ ದಯೆತೋರಿಸಿರಿ; ಅವರು ಆ ಸ್ತ್ರೀಯರನ್ನು ಮದುವೆಯಾಗಲಿ. ಅವರು ನಿಮ್ಮಿಂದ ನಿಮ್ಮ ಹೆಣ್ಣುಮಕ್ಕಳನ್ನು ತೆಗೆದುಕೊಂಡು ಹೋಗಿರುವರೇ ಹೊರತು ಯುದ್ಧವೇನೂ ಮಾಡಿಲ್ಲ. ಅವರು ಕನ್ಯೆಯರನ್ನು ತೆಗೆದುಕೊಂಡು ಹೋದದ್ದರಿಂದ ನೀವು ದೇವರೆದುರಿಗೆ ಮಾಡಿದ ಪ್ರತಿಜ್ಞೆಯನ್ನು ಮುರಿದಂತಾಗುವುದಿಲ್ಲ. ನಿಮ್ಮ ಕನ್ಯೆಯರನ್ನು ಅವರಿಗೆ ಕೊಡುವುದಿಲ್ಲವೆಂದು ನೀವು ಪ್ರತಿಜ್ಞೆ ಮಾಡಿದ್ದೀರಿ. ನೀವು ಬೆನ್ಯಾಮೀನ್ಯರಿಗೆ ನಿಮ್ಮ ಕನ್ಯೆಯರನ್ನು ಕೊಟ್ಟಿಲ್ಲ. ಆದರೆ ಅವರು ನಿಮ್ಮ ಕನ್ಯೆಯರನ್ನು ತೆಗೆದುಕೊಂಡು ಹೋದರು. ಆದ್ದರಿಂದ ನೀವು ನಿಮ್ಮ ಪ್ರತಿಜ್ಞೆಯನ್ನು ಮುರಿಯಲಿಲ್ಲ’ ಎಂದು ಹೇಳುತ್ತೇವೆ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು