Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:10 - ಪರಿಶುದ್ದ ಬೈಬಲ್‌

10 “ನಮ್ಮ ಪಿತೃವಾದ ದಾವೀದನ ರಾಜ್ಯವು ಬರಲಿ! ಮೇಲೋಕಗಳಲ್ಲಿ ದೇವರಿಗೆ ಜಯವಾಗಲಿ” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದವುಂಟಾಗಲಿ; ಮೇಲಣ ಲೋಕಗಳಲ್ಲಿ ಹೊಸನ್ನ” ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಮ್ಮ ಪೂರ್ವಜ ದಾವೀದನ ಸಾಮ್ರಾಜ್ಯ ಉದಯವಾಗಲಿದೆ; ಅದಕ್ಕೆ ಶುಭವಾಗಲಿ ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ !” ಎಂದು ಘೋಷಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದ; ಮೇಲಣ ಲೋಕಗಳಲ್ಲಿ ಜಯ ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಬರಲಿರುವ ನಮ್ಮ ತಂದೆಯಾದ ದಾವೀದನ ರಾಜ್ಯವು ಆಶೀರ್ವಾದ ಹೊಂದಲಿ!” “ಉನ್ನತದಲ್ಲಿ ಹೊಸನ್ನ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ದೆವ್ ಅಮ್ಚ್ಯಾ ಬಾಬಾ ದಾವಿದಾಚೆ ರಾಜಾಕ್ ಅಶಿರ್ವಾದ್ ದಿಂವ್ದಿ! ತೆ ರಾಜ್ ಯೆವ್ಲಾ, ಸರ್‍ಗಾ ವೈಲ್ಯಾ ದೆವಾಕ್ ಮಹಿಮಾ ಹೊಂವ್ದಿ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:10
13 ತಿಳಿವುಗಳ ಹೋಲಿಕೆ  

“ಮೇಲಿನಲೋಕಗಳಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದವರಿಗೆ ಸಮಾಧಾನ” ಎಂದು ಹೇಳುತ್ತಾ ದೇವರನ್ನು ಸ್ತುತಿಸಿದರು.


ಯೆಹೋವನಿಗೆ ಸ್ತೋತ್ರವಾಗಲಿ! ಮೇಲೋಕದಲ್ಲಿರುವ ದೇವದೂತರೇ, ಆಕಾಶಮಂಡಲದಿಂದ ಯೆಹೋವನನ್ನು ಸ್ತುತಿಸಿರಿ!


ಹೀಗೆ ಇದ್ದ ಬಳಿಕ ಇಸ್ರೇಲರು ಹಿಂತಿರುಗಿ ಬರುವರು. ಆಗ ಅವರು ತಮ್ಮ ದೇವರಾದ ಯೆಹೋವನನ್ನೂ ಅವರ ಅರಸನಾದ ದಾವೀದನನ್ನೂ ಹುಡುಕುವರು. ಕೊನೆಯ ದಿವಸಗಳಲ್ಲಿ ತಮ್ಮ ದೇವರಾದ ಯೆಹೋವನನ್ನೂ ಆತನ ಒಳ್ಳೆಯತನವನ್ನೂ ಗೌರವಿಸಲು ಬರುವರು.


ಅವರನ್ನು ತ್ಯಜಿಸಬಹುದೇನೋ! ಯಾಕೋಬನ ಸಂತಾನದವರನ್ನು ತ್ಯಜಿಸಿ ದಾವೀದನ ವಂಶದವರು ಅಬ್ರಹಾಮ, ಇಸಾಕ ಮತ್ತು ಯಾಕೋಬರ ಸಂತತಿಯವರನ್ನು ಆಳದಂತೆ ಮಾಡಬಹುದೇನೋ! ಆದರೆ ದಾವೀದನು ನನ್ನ ಸೇವಕ. ನಾನು ಅವರಿಗೆ ಕರುಣೆ ತೋರೇ ತೋರುವೆನು; ಅವರಿಗೆ ಒಳ್ಳೆಯದಾಗುವಂತೆ ಮಾಡೇ ಮಾಡುವೆನು.”


‘ಅಬ್ರಹಾಮನು ನಮ್ಮ ತಂದೆ’ ಎಂದು ನೀವು ಜಂಬಪಡುವುದೇಕೆ? ದೇವರು ಅಬ್ರಹಾಮನಿಗಾಗಿ ಇಲ್ಲಿರುವ ಬಂಡೆಗಳಿಂದಲೂ ಮಕ್ಕಳನ್ನು ಸೃಷ್ಟಿಸಬಲ್ಲನು ಎಂದು ನಾನು ನಿಮಗೆ ಹೇಳುತ್ತೇನೆ.


ಕೆಲವರು ಯೇಸುವಿನ ಮುಂದೆ ನಡೆದು ಹೋಗುತ್ತಿದ್ದರು. ಕೆಲವರು ಯೇಸುವಿನ ಹಿಂದೆ ನಡೆದು ಬರುತ್ತಿದ್ದರು. ಜನರೆಲ್ಲರೂ ಹೀಗೆ ಆರ್ಭಟಿಸಿದರು: “ದಾವೀದನ ಕುಮಾರನನ್ನು ಕೊಂಡಾಡಿರಿ! ‘ಪ್ರಭುವಿನ ಹೆಸರಿನಲ್ಲಿ ಬರುವವನನ್ನು ದೇವರು ಆಶೀರ್ವದಿಸಲಿ!’ ಪರಲೋಕದ ದೇವರನ್ನು ಕೊಂಡಾಡಿರಿ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು