ಮಾರ್ಕ 11:20 - ಪರಿಶುದ್ದ ಬೈಬಲ್20 ಮರುದಿನ ಬೆಳಿಗ್ಗೆ, ಯೇಸು ತನ್ನ ಶಿಷ್ಯರೊಂದಿಗೆ ಹೋಗುತ್ತಿದ್ದನು. ಹಿಂದಿನ ದಿನ ಯೇಸು ಶಪಿಸಿದ ಅಂಜೂರದ ಮರವನ್ನು ಶಿಷ್ಯರು ನೋಡಿದರು. ಅಂಜೂರದ ಮರವು ಬೇರುಸಹಿತ ಒಣಗಿಹೋಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಬೆಳಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಬೆಳಿಗ್ಗೆ ಅವರೆಲ್ಲರೂ ಅದೇ ಮಾರ್ಗವಾಗಿ ಹಿಂದಿರುಗುವಾಗ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಬೆಳಿಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬುಡದಿಂದಲೂ ಒಣಗಿ ಹೋಗಿರುವದನ್ನು ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಬೆಳಿಗ್ಗೆ ಅವರು ಅದೇ ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರ ಮರವು ಬೇರುಸಹಿತವಾಗಿ ಒಣಗಿರುವುದನ್ನು ಕಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಸಕ್ಕಾಳ್ಚೆ ತೆನಿ ವಾಟೆನ್ ಜಾತಾನಾ ಅದ್ಲ್ಯಾ ದಿಸಿ ಜೆಜುನ್ ಸರಾಪ್ ದಿಲ್ಲ್ಯಾ ಅಂಜುರಾಚ್ಯಾ ಝಾಡಾಕ್ ಬಗಟ್ಲ್ಯಾನಿ ತೆ ಝಾಡ್ ಬೆರಾ ಸಮೆತ್ ವಾಳುನ್ ಗೆಲ್ಲೆ. ಅಧ್ಯಾಯವನ್ನು ನೋಡಿ |
ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ.