Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:28 - ಪರಿಶುದ್ದ ಬೈಬಲ್‌

28 “ಇವುಗಳನ್ನೆಲ್ಲ ಮಾಡಲು ನಿನಗೆ ಯಾವ ಅಧಿಕಾರವಿದೆ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು? ನಮಗೆ ತಿಳಿಸು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವುದಕ್ಕೆ ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಆತನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವದಕ್ಕೆ ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು ಎಂದು ಆತನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೇಸುವಿಗೆ, “ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಇವುಗಳನ್ನು ಮಾಡುವುದಕ್ಕೆ ನಿನಗೆ ಅಧಿಕಾರ ಕೊಟ್ಟವರು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 “ಹೆ ಸಗ್ಳೆ ತಿಯಾ ಕಸ್ಲ್ಯಾ ಅದಿಕಾರಾನ್ ಕರುಕ್ ಲಾಗ್ಲೆ? ಹೆ ಸಗ್ಳೆ ಕರುಕ್ ತುಕಾ ಕೊನ್ ಅದಿಕಾರ್ ದಿಲಾ?” ಮನುನ್ ಸಾಂಗ್ ಅಮ್ಕಾ! ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:28
8 ತಿಳಿವುಗಳ ಹೋಲಿಕೆ  

ಅದಕ್ಕೆ ಆ ಮನುಷ್ಯನು, “ನಿನ್ನನ್ನು ನಮ್ಮ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು? ನಿನ್ನೆ ಆ ಈಜಿಪ್ಟಿನವನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿರುವಿಯೋ?” ಎಂದು ಉತ್ತರಿಸಿದನು. ಆಗ ಮೋಶೆಗೆ ಭಯವಾಯಿತು. ಮೋಶೆಯು ತನ್ನೊಳಗೆ, “ನಾನು ಮಾಡಿದ್ದು ಪ್ರತಿಯೊಬ್ಬರಿಗೂ ತಿಳಿದಿದೆ” ಅಂದುಕೊಂಡನು.


ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!


ನೀನು ಹಾಲೂ ಜೇನೂ ಹರಿಯುವ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದು ಮರಳುಗಾಡಿನಲ್ಲಿ ಸಾಯಿಸುವುದು ಸಾಕಾಗಲಿಲ್ಲವೆಂದು ಭಾವಿಸಿ ನಮ್ಮ ಮೇಲೆ ದೊರೆತನ ಮಾಡಲು ಅಪೇಕ್ಷಿಸುತ್ತಿರುವೆಯೋ?


ಅವರು ಮೋಶೆ ಮತ್ತು ಆರೋನರ ವಿರುದ್ಧ ಒಟ್ಟಾಗಿ ಸೇರಿಬಂದು, ಅವರಿಗೆ, “ನೀವು ಅಧಿಕಾರವನ್ನು ಮತ್ತು ಘನತೆಯನ್ನು ಅತಿಯಾಗಿ ಅಪೇಕ್ಷಿಸುತ್ತಿರುವಿರಿ. ಈ ಸಮೂಹದವರಲ್ಲಿರುವ ಪ್ರತಿಯೊಬ್ಬನೂ ದೇವರಿಗೆ ಪ್ರತಿಷ್ಠಿತನೇ. ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಜನರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇನು?” ಎಂದು ಕೇಳಿದರು.


ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮಿಗೆ ಮತ್ತೆ ಹೋದರು. ಯೇಸು ದೇವಾಲಯದಲ್ಲಿ ತಿರುಗಾಡುತ್ತಿದ್ದಾಗ, ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯನಾಯಕರು ಆತನ ಬಳಿಗೆ ಬಂದು,


ಯೇಸು, “ನಾನೂ ನಿಮಗೊಂದು ಪ್ರಶ್ನೆಯನ್ನು ಕೇಳುತ್ತೇನೆ. ನೀವು ನನ್ನ ಪ್ರಶ್ನೆಗೆ ಉತ್ತರಿಸಿದರೆ ನಾನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿದ್ದೇನೆ ಎಂಬುದನ್ನು ನಿಮಗೆ ತಿಳಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು