ಮಾರ್ಕ 11:33 - ಪರಿಶುದ್ದ ಬೈಬಲ್33 ಆದಕಾರಣ ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ” ಎಂದು ಉತ್ತರಿಸಿದರು. ಯೇಸು ಅವರಿಗೆ, “ಹಾಗಾದರೆ ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತಿದ್ದೇನೆಂದು ನಿಮಗೆ ಹೇಳುವುದಿಲ್ಲ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಹೀಗಿರಲಾಗಿ ಅವರು, “ನಮಗೆ ಗೊತ್ತಿಲ್ಲ” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ, “ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆದುದರಿಂದ ಅವರು, “ನಮಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟರು. ಅದಕ್ಕೆ ಯೇಸು, “ಹಾಗಾದರೆ ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಹೀಗಿರಲಾಗಿ ಅವರು - ನಾವು ಅರಿಯೆವು ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ - ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವದಿಲ್ಲ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ,” ಎಂದು ಉತ್ತರಕೊಟ್ಟರು. ಅದಕ್ಕೆ ಯೇಸು, “ಹಾಗಾದರೆ ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದು ಅವರಿಗೆ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತಸೆ ಮನುನ್ ತೆನಿ ಜೆಜುಕ್ “ಅಮ್ಕಾ ಗೊತ್ತ್ ನಾ” ಮನುನ್ ಸಾಂಗ್ಲ್ಯಾನಿ. ತನ್ನಾ ಜೆಜುನ್ ತೆಂಕಾ “ತಸೆ ಜಾಲ್ಯಾರ್ ಮಿಯಾಬಿ ಹೆ ಸಗ್ಳೆ ಕಸ್ಲ್ಯಾ ಅದಿಕಾರ್‍ಯಾನ್ ಕರುಕ್ ಲಾಗ್ಲಾ ಮನುನ್ ತುಮ್ಕಾ ಸಾಂಗಿನಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |