Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:4 - ಪರಿಶುದ್ದ ಬೈಬಲ್‌

4 ಶಿಷ್ಯರು ಊರಿನೊಳಗೆ ಹೋದಾಗ ರಸ್ತೆಯಲ್ಲಿನ ಒಂದು ಮನೆಯ ಬಾಗಿಲಿನ ಪಕ್ಕದಲ್ಲಿ ಕಟ್ಟಿಹಾಕಿದ್ದ ಕತ್ತೆಮರಿಯೊಂದನ್ನು ಕಂಡರು. ಶಿಷ್ಯರು ಹೋಗಿ ಆ ಕತ್ತೆಯನ್ನು ಬಿಚ್ಚಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಶಿಷ್ಯರು ಹೋಗಿ ಬೀದಿಯಲ್ಲಿ ಹೊರಗೆ ಬಾಗಿಲಿನ ಹತ್ತಿರ ಕತ್ತೆಮರಿಯನ್ನು ಕಟ್ಟಿರುವುದನ್ನು ಕಂಡು ಅದನ್ನು ಬಿಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಶಿಷ್ಯರು ಹೋಗಿ ಬೀದಿಯಲ್ಲಿದ್ದ ಹೇಸರಗತ್ತೆಯ ಮರಿಯೊಂದನ್ನು ಕಂಡರು. ಬಾಗಿಲಿನ ಬಳಿ ಕಟ್ಟಿಹಾಕಿದ್ದ ಅದನ್ನು ಶಿಷ್ಯರು ಬಿಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಶಿಷ್ಯರು ಹೋಗಿ ಬೀದಿಯಲ್ಲಿ ಹೊರಗೆ ಬಾಗಿಲಿನ ಹತ್ತಿರ ಒಂದು ಕತ್ತೇಮರಿ ಕಟ್ಟಿರುವದನ್ನು ಕಂಡು ಅದನ್ನು ಬಿಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಅವರು ಹೊರಟುಹೋಗಿ ಬೀದಿಯಲ್ಲಿದ್ದ ಒಂದು ಮನೆಯ ಬಾಗಿಲಿನ ಹತ್ತಿರ ಕಟ್ಟಿದ್ದ ಕತ್ತೆಮರಿಯನ್ನು ಕಂಡರು. ಅವರು ಅದನ್ನು ಬಿಚ್ಚುತ್ತಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆನಿ ತ್ಯಾ ಗಾಂವಾತ್ ಜಾವ್ನ್ ಪಾವಲ್ಲ್ಯಾ ತನ್ನಾ, ಥೈ ಎಕ್ ಘರಾಚ್ಯಾ ದಾರಾಕ್ ಭಾಂದುನ್ ಘಾಟಲ್ಲೆ ಗಾಡಾವ್ ತೆಂಕಾ ದಿಸ್ಲೆ. ತೆನಿ ಜಾವ್ನ್ ತ್ಯಾ ಗಾಡ್ವಾಕ್ ಸೊಡ್ಸುತಾನಾ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:4
8 ತಿಳಿವುಗಳ ಹೋಲಿಕೆ  

ದೇವರು ತಾನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದ ಸ್ಥಳಕ್ಕೆ ಪ್ರಯಾಣ ಮಾಡಬೇಕೆಂದು ಅಬ್ರಹಾಮನನ್ನು ಕರೆದನು. ಆ ಸ್ಥಳವು ಎಲ್ಲಿದೆಯೆಂಬುದು ಅವನಿಗೆ ತಿಳಿದಿರಲಿಲ್ಲ. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ, ದೇವರಿಗೆ ವಿಧೇಯನಾಗಿ ಪ್ರಯಾಣ ಮಾಡಲಾರಂಭಿಸಿದನು.


ಯೇಸುವಿನ ತಾಯಿ ಸೇವಕರಿಗೆ, “ಯೇಸು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದು ಹೇಳಿದಳು.


ಯೇಸು ಹೇಳಿದಂತೆಯೇ ಶಿಷ್ಯರು ಮಾಡಿ ಪಸ್ಕಹಬ್ಬದ ಊಟವನ್ನು ಏರ್ಪಡಿಸಿದರು.


ಅಲ್ಲಿ ಯೇಸು ತನ್ನ ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮ ಎದುರಿನಲ್ಲಿ ಇರುವ ಪಟ್ಟಣದೊಳಕ್ಕೆ ಹೋಗಿ. ನೀವು ಅದನ್ನು ಪ್ರವೇಶಿಸಿದಾಗ, ಅಲ್ಲೇ ಕಟ್ಟಿರುವ ಒಂದು ಕತ್ತೆಯನ್ನು ಕಾಣುತ್ತೀರಿ. ಆ ಕತ್ತೆಯ ಜೊತೆಯಲ್ಲಿ ಒಂದು ಕತ್ತೆಮರಿಯನ್ನು ಸಹ ನೀವು ಕಾಣುವಿರಿ. ಆ ಎರಡು ಕತ್ತೆಗಳನ್ನು ಬಿಚ್ಚಿ ಅವುಗಳನ್ನು ನನ್ನ ಬಳಿಗೆ ತನ್ನಿರಿ.


ಯಾವನಾದರೂ ‘ಆ ಕತ್ತೆಯನ್ನು ಏಕೆ ತೆಗೆದುಕೊಂಡು ಹೋಗುತ್ತಿದ್ದೀರಿ’ ಎಂದು ನಿಮ್ಮನ್ನು ಕೇಳಿದರೆ, ‘ಒಡೆಯನಿಗೆ ಈ ಕತ್ತೆ ಬೇಕಾಗಿದೆ. ಆತನು ಇದನ್ನು ಬೇಗನೆ ಕಳುಹಿಸಿಕೊಡುವನು’ ಎಂದು ಅವನಿಗೆ ಹೇಳಿರಿ” ಎಂದನು.


ಅಲ್ಲಿ ನಿಂತಿದ್ದ ಕೆಲವು ಜನರು, “ನೀವು ಮಾಡುತ್ತಿರುವುದೇನು? ಆ ಕತ್ತೆಯನ್ನು ಏಕೆ ಬಿಚ್ಚುತ್ತಿದ್ದೀರಿ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು