Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:1 - ಪರಿಶುದ್ದ ಬೈಬಲ್‌

1 ಯೇಸು ಜನರಿಗೆ ಸಾಮ್ಯಗಳ ಮೂಲಕ ಉಪದೇಶಿಸುತ್ತಾ ಅವರಿಗೆ ಹೇಳಿದ್ದೇನೆಂದರೆ: “ಒಬ್ಬನು ದ್ರಾಕ್ಷಿಯ ತೋಟವನ್ನು ಮಾಡಿ, ಸುತ್ತಲೂ ಗೋಡೆ ಹಾಕಿಸಿ, ದ್ರಾಕ್ಷಾರಸವನ್ನು ತೆಗೆಯಲು ಅಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದನು. ಅವನು ಕೆಲವು ರೈತರಿಗೆ ತೋಟವನ್ನು ಗುತ್ತಿಗೆಗೆ ಕೊಟ್ಟು ಪ್ರವಾಸಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಯೇಸು ಅವರೊಂದಿಗೆ ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷಿಯ ಆಲೆಗಾಗಿ ಒಂದು ಗುಂಡಿಯನ್ನು ತೆಗೆಸಿ ಕಾವಲು ಗೋಪುರವನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ದ್ರಾಕ್ಷಿಯ ತೋಟಗಾರರಿಗೆ ಗುತ್ತಿಗೆಗೆ ಕೊಟ್ಟು, ಹೊರದೇಶಕ್ಕೆ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನಂತರ ಯೇಸುಸ್ವಾಮಿ ಅವರೊಡನೆ ಸಾಮತಿಗಳ ರೂಪದಲ್ಲಿ ಮಾತನಾಡತೊಡಗಿದರು: “ಒಬ್ಬನು ದ್ರಾಕ್ಷಿಯತೋಟ ಒಂದನ್ನು ಮಾಡಿ, ಅದರ ಸುತ್ತ ಬೇಲಿ ಹಾಕಿಸಿದ; ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಬಳಿಕ ತೋಟವನ್ನು ಗೇಣಿದಾರರಿಗೆ ವಹಿಸಿ, ಹೊರನಾಡಿಗೆ ಹೊರಟುಹೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಯೇಸು ಅವರ ಕೂಡ ಸಾಮ್ಯರೂಪವಾಗಿ ಮಾತಾಡುವದಕ್ಕೆ ತೊಡಗಿ - ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಸುತ್ತಲು ಬೇಲಿಹಾಕಿಸಿ ದ್ರಾಕ್ಷೆಯ ಆಲೆಗಾಗಿ ಒಂದು ಗುಂಡಿಯನ್ನು ತೆಗಿಸಿ ಹೂಡೆಯನ್ನು ಕಟ್ಟಿಸಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದರು: “ಒಬ್ಬಾನೊಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿದನು. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ವಹಿಸಿಬಿಟ್ಟು ದೂರದೇಶಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾನಾ ಜೆಜು ತೆಂಚೆಕ್ಡೆ ಕಾನಿಯಾಂಚ್ಯಾ ವೈನಾ ಬೊಲುಕ್ಲಾಗ್ಲೊ. ಎಕ್ ಮಾನ್ಸಾನ್ ದ್ರಾಕ್ಷಿಚೊ ಮ್ಹಳೊ ಕರುನ್, ಭೊತ್ಯಾನಿ ಕುಪ್ ಘಾಟ್ಲ್ಯಾನ್, ದ್ರಾಕ್ಷಿಚೊ ರೊಸ್ ಕಾಡುಕ್ ಘಾನ್ಯಾಚೊ ಖಡ್ಡೊ ಖಂಡ್ಲ್ಯಾನ್, ಅನಿ ಶೆತ್ ರಾಕುಕ್ ಮನುನ್ ಶೆತಾತ್ ಎಕ್ ಬರೊ ಮಾಳೊ ಭಾಂದ್ಲ್ಯಾನ್, ಮಾನಾ ತೆ ಶೆತ್ ರೈತಾಕ್ನಿ ಗುತ್ಕ್ಯಾನಿ ದಿಲ್ಯಾನ್ ಅನಿ ತೊ ಧುರ್‍ಲ್ಯಾ ದೆಸಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:1
38 ತಿಳಿವುಗಳ ಹೋಲಿಕೆ  

“ತನ್ನ ಮನೆಯನ್ನು ಬಿಟ್ಟು ಪ್ರವಾಸಕ್ಕಾಗಿ ಹೋದ ಮನುಷ್ಯನಿಗೆ ಇದು ಹೋಲಿಕೆಯಾಗಿದೆ. ಅವನು ತನ್ನ ಮನೆಯನ್ನು ನೋಡಿಕೊಳ್ಳುವುದಕ್ಕಾಗಿ ಸೇವಕರಿಗೆ ಒಪ್ಪಿಸಿಕೊಟ್ಟನು. ಅವನು ಪ್ರತಿಯೊಬ್ಬ ಸೇವಕನಿಗೂ ಒಂದೊಂದು ವಿಶೇಷ ಕೆಲಸವನ್ನು ಕೊಟ್ಟು ದ್ವಾರಪಾಲಕನಿಗೆ, ‘ನೀನು ಯಾವಾಗಲೂ ಸಿದ್ಧವಾಗಿರು’ ಎಂದು ಹೇಳಿದನು. ಅಂತೆಯೇ ನಾನೂ ನಿಮಗೆ ಹೇಳುವುದೇನೆಂದರೆ,


ಯೇಸು ದೋಣಿಯಲ್ಲಿ ಕುಳಿತುಕೊಂಡು ಅವರಿಗೆ ಅನೇಕ ಸಾಮ್ಯಗಳ ಮೂಲಕ ಉಪದೇಶಿಸಿದನು. ಆತನು ಹೇಳಿದ್ದೇನೆಂದರೆ:


“ಪರಲೋಕರಾಜ್ಯವು, ತನ್ನ ಮನೆಯನ್ನು ಬಿಟ್ಟು ಬೇರೆ ಸ್ಥಳವನ್ನು ಸಂದರ್ಶಿಸುವುದಕ್ಕೆ ಪ್ರಯಾಣ ಮಾಡಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ. ಆ ಮನುಷ್ಯನು ತಾನು ಹೊರಡುವುದಕ್ಕೆ ಮುಂಚೆ ತನ್ನ ಸೇವಕರೊಂದಿಗೆ ಮಾತನಾಡಿ, ತನ್ನ ಆಸ್ತಿಯನ್ನು ನೋಡಿಕೊಳ್ಳಲು ಅವರಿಗೆ ಹೇಳಿದನು.


ಅರಣ್ಯದಲ್ಲಿ ಯೆಹೂದ್ಯರ ಸಮೂಹದೊಂದಿಗೆ ಇದ್ದವನು ಈ ಮೋಶೆಯೇ. ಸಿನಾಯ್ ಬೆಟ್ಟದ ಬಳಿ ತನ್ನೊಂದಿಗೆ ಮಾತಾಡಿದ ದೇವದೂತನೊಂದಿಗೆ ಅವನಿದ್ದನು. ಅಲ್ಲದೆ ಅವನು ನಮ್ಮ ಪಿತೃಗಳೊಂದಿಗೆ ಇದ್ದನು. ಜೀವಕರವಾದ ಆಜ್ಞೆಗಳನ್ನು ಮೋಶೆಯು ದೇವರಿಂದ ಸ್ವೀಕರಿಸಿಕೊಂಡು ಅವುಗಳನ್ನು ನಮಗೆ ಕೊಟ್ಟನು.


ಜನರ ಈ ಭಾವನೆಯು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಈ ಸಾಮ್ಯವನ್ನು ಹೇಳಿದನು: “ಬಹಳ ಪ್ರಾಮುಖ್ಯನಾದ ಒಬ್ಬನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರುವುದಕ್ಕಾಗಿ ದೂರದೇಶಕ್ಕೆ ಹೊರಟನು. ರಾಜ್ಯಾಧಿಕಾರವನ್ನು ಪಡೆದುಕೊಂಡ ಮೇಲೆ ಹಿಂತಿರುಗಿ ಬಂದು ತನ್ನ ಜನರನ್ನು ಆಳಬೇಕೆಂಬುದು ಅವನ ಬಯಕೆಯಾಗಿತ್ತು.


“ಆಗ ಕಿರಿಮಗನು ತನಗೆ ದೊರೆತ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿದನು. ಅಲ್ಲಿ ಅವನು ಪಟಿಂಗನಾಗಿ ಬದುಕಿ ತನ್ನ ಹಣವನ್ನೆಲ್ಲಾ ಹಾಳುಮಾಡಿಕೊಂಡನು.


ಯೇಸು, “ನೀವು ದೇವರ ರಾಜ್ಯದ ಗುಟ್ಟುಗಳನ್ನು ತಿಳಿದುಕೊಳ್ಳಬೇಕೆಂದು ನಿಮ್ಮನ್ನು ಆರಿಸಿಕೊಳ್ಳಲಾಗಿದೆ. ಆದರೆ ಬೇರೆ ಜನರೊಂದಿಗೆ ನಾನು ಸಾಮ್ಯಗಳ ಮೂಲಕ ಮಾತಾಡುತ್ತೇನೆ, ಏಕೆಂದರೆ, ‘ಅವರು ನೋಡಿದರೂ ಕಾಣುವುದಿಲ್ಲ, ಕೇಳಿದರೂ ಗ್ರಹಿಸಿಕೊಳ್ಳುವುದಿಲ್ಲ.’


“ಒಬ್ಬ ಮನುಷ್ಯನಿಗೆ ಇಬ್ಬರು ಗಂಡುಮಕ್ಕಳಿದ್ದರು. ಆ ಮನುಷ್ಯನು ಮೊದಲನೆಯ ಮಗನ ಬಳಿಗೆ ಹೋಗಿ, ‘ಮಗನೇ ಈ ದಿನ ನೀನು ಹೋಗಿ, ನನ್ನ ದ್ರಾಕ್ಷಿತೋಟದಲ್ಲಿ ಕೆಲಸ ಮಾಡು’ ಎಂದು ಹೇಳಿದನು.


ಆಗ ನಾನು (ಯೆಹೆಜ್ಕೇಲ್), “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಇದನ್ನೆಲ್ಲಾ ಹೇಳಿದರೆ, ನಿಗೂಢವಾದ ಕಥೆಗಳನ್ನು ಹೇಳುತ್ತಿದ್ದೇನೆಂದು ಹೇಳುವರು. ಮತ್ತು ನನಗೆ ಇನ್ನೆಂದಿಗೂ ಕಿವಿಗೊಡುವದಿಲ್ಲ” ಎಂದು ಹೇಳಿದೆನು.


ಯೆಹೂದವೇ, ನಾನು ನಿನ್ನನ್ನು ಅತ್ಯುತ್ತಮ ದ್ರಾಕ್ಷಾಲತೆಯಂತೆ ನೆಟ್ಟೆ. ನೀನು ಒಳ್ಳೆಯ ಬೀಜದಂತಿದ್ದಿ. ನೀನು ಕೆಟ್ಟ ಫಲಗಳನ್ನು ಫಲಿಸುವ ಬೇರೆ ದ್ರಾಕ್ಷಿಯ ಬಳ್ಳಿಯಾದದ್ದು ಹೇಗೆ?


ಒಂದುಸಾವಿರ ದ್ರಾಕ್ಷಾಲತೆಗಳಿರುವ ತೋಟಗಳಿರುತ್ತವೆ. ಪ್ರತಿಯೊಂದು ದ್ರಾಕ್ಷಾಲತೆಯು ಒಂದುಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವಂಥದ್ದಾಗಿರುತ್ತದೆ. ಆದರೆ ಅಂಥ ತೋಟಗಳು ಹಣಜಿಗಳಿಂದಲೂ ಮುಳ್ಳುಗಿಡಗಳಿಂದಲೂ ತುಂಬಿಕೊಂಡಿರುವವು.


ಪೇತ್ರ ಮತ್ತು ಯೋಹಾನರು, “ಊಟವನ್ನು ಎಲ್ಲಿ ಸಿದ್ಧಮಾಡಬೇಕು?” ಎಂದು ಯೇಸುವಿಗೆ ಕೇಳಿದರು.


ಆಗ ಯೇಸು ಸಾಮ್ಯಗಳ ಮೂಲಕ ಅನೇಕ ವಿಷಯಗಳನ್ನು ಅವರಿಗೆ ಬೋಧಿಸಿದನು. ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ರೈತನು ಬೀಜ ಬಿತ್ತುವುದಕ್ಕೆ ಹೋದನು.


“ಈ ಸಾಮ್ಯವನ್ನು ಕೇಳಿರಿ: ಒಬ್ಬ ಮನುಷ್ಯನಿಗೆ ಒಂದು ಸ್ವಂತ ತೋಟವಿತ್ತು. ಅವನು ತೋಟದಲ್ಲಿ ದ್ರಾಕ್ಷಿಯನ್ನು ಬೆಳೆಸಿದನು; ತೋಟದ ಸುತ್ತಲೂ ಗೋಡೆ ಕಟ್ಟಿ ದ್ರಾಕ್ಷಾರಸ ತಯಾರಿಸಲು ಆಲೆಯನ್ನು ಹೂಡಿಸಿದನು. ಕಾವಲಿಗಾಗಿ ಅಟ್ಟಣೆಯನ್ನೂ ಕಟ್ಟಿಸಿದನು. ಅವನು ಆ ತೋಟವನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟು ವಿದೇಶಕ್ಕೆ ಹೊರಟುಹೋದನು.


ದ್ರಾಕ್ಷಿಹಣ್ಣನ್ನು ಕೀಳುವ ಸಮಯ ಬಂದಾಗ ತನ್ನ ಪಾಲನ್ನು ತೆಗೆದುಕೊಂಡು ಬರಲು ಸೇವಕರನ್ನು ರೈತರ ಬಳಿಗೆ ಕಳುಹಿಸಿದನು.


ಆದ್ದರಿಂದ ಯೇಸು ಜನರನ್ನು ಒಟ್ಟಿಗೆ ಕರೆದು, ಅವರಿಗೆ ಸಾಮ್ಯಗಳ ಮೂಲಕ ಬೋಧಿಸಿ, “ಸೈತಾನನು ತನ್ನ ದೆವ್ವಗಳನ್ನು ಜನರಿಂದ ಬಲವಂತವಾಗಿ ಹೊರಡಿಸುವುದಿಲ್ಲ.


ಆದಕಾರಣ ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ” ಎಂದು ಉತ್ತರಿಸಿದರು. ಯೇಸು ಅವರಿಗೆ, “ಹಾಗಾದರೆ ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತಿದ್ದೇನೆಂದು ನಿಮಗೆ ಹೇಳುವುದಿಲ್ಲ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು