Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:11 - ಪರಿಶುದ್ದ ಬೈಬಲ್‌

11 ಇದು ಪ್ರಭುವಿನಿಂದ ಆಯಿತು. ಇದು ನಮಗೆ ಆಶ್ಚರ್ಯವಾಗಿ ತೋರುತ್ತದೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದು ಕರ್ತನಿಂದಲೇ ಆಯಿತು, ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರುತ್ತದೆ ಎಂಬ ಶಾಸ್ತ್ರವಚನಗಳನ್ನೂ ನೀವು ಓದಲಿಲ್ಲವೇ?’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದು ಕರ್ತನಿಂದಲೇ ಆಯಿತು. ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ,’” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಹೆ ದೆವಾನ್ ಕರಲ್ಲೆ ಕಾಮ್, ಅಮ್ಕಾ ಹೆ ಅಜಾಪ್ ಸರ್ಕೆ ದಿಸ್ತಾ. ಮನುನ್ ವಾಚ್ವುಕ್‍ನ್ಯಾಶಿ ಕಾಯ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:11
13 ತಿಳಿವುಗಳ ಹೋಲಿಕೆ  

ಇದು ಯೆಹೋವನಿಂದಲೇ ಆಯಿತು. ನಮಗಂತೂ ಇದು ಆಶ್ಚರ್ಯಕರವಾಗಿದೆ!


ಯೆಹೋವನು ಉತ್ತರಿಸುತ್ತಾ, “ಇತರ ದೇಶಗಳನ್ನು ನೋಡು, ಅವರನ್ನು ಗಮನಿಸು. ನೀನು ಆಶ್ಚರ್ಯಪಡುವೆ. ನೀನು ನಿನ್ನ ಜೀವಮಾನದಲ್ಲಿಯೇ ಅಚ್ಚರಿಪಡುವಂಥ ವಿಷಯವನ್ನು ನಾನು ನಡಿಸುತ್ತೇನೆ. ನೀನು ಅದನ್ನು ನೋಡಿ ನಂಬುವೆ. ನಿನಗೆ ಅದರ ವಿಷಯವಾಗಿ ತಿಳಿಸಲ್ಪಟ್ಟರೂ ನೀನು ನಂಬುವದಿಲ್ಲ.


ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ಮಹಿಮಾತಿಶಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲು ದೇವರು ತೀರ್ಮಾನಿಸಿದನು. ಈ ಮಹಾಸತ್ಯವು ಎಲ್ಲಾ ಜನರಿಗಾಗಿ ಪ್ರಕಟವಾಯಿತು. ನಿಮ್ಮಲ್ಲಿರುವ ಕ್ರಿಸ್ತನೇ ಆ ಸತ್ಯವಾಗಿದ್ದಾನೆ. ದೇವರ ಮಹಿಮೆಯಲ್ಲಿ ಪಾಲುಹೊಂದಲು ಆತನೇ ನಮಗಿರುವ ಏಕೈಕ ನಿರೀಕ್ಷೆ.


ಜನರೆಲ್ಲರೂ ವಿಸ್ಮಯಗೊಂಡರು ಮತ್ತು ಗಲಿಬಿಲಿಯಾದರು. ಅವರು, “ಏನು ನಡೆಯುತ್ತಿದೆ?” ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು.


ನಿಜವಾಗಿಯೂ ಯಾಕೋಬನ ಜನರ ಮಧ್ಯದಲ್ಲಿ ಶಕುನ ನೋಡುವವರು ಇಲ್ಲ. ಇಸ್ರೇಲಿನಲ್ಲಿ ಕಣಿ ಹೇಳುವವರು ಇಲ್ಲ. ಜನರು, ಯಾಕೋಬನ ಮತ್ತು ಇಸ್ರೇಲರ ಬಗ್ಗೆ ಹೀಗೆ ಹೇಳುವರು: ‘ದೇವರು ಮಾಡಿದ ಮಹಾಕಾರ್ಯಗಳನ್ನು ನೋಡಿರಿ!’


ಅದಕ್ಕೆ ಲಾಬಾನನು ಮತ್ತು ಬೆತೂವೇಲನು, “ನಿನ್ನನ್ನು ಯೆಹೋವನೇ ಕಳುಹಿಸಿದ್ದಾನೆ. ನಡೆಯತಕ್ಕದ್ದನ್ನು ಬದಲಾಯಿಸಲು ನಮಗೆ ಸಾಧ್ಯವಿಲ್ಲ.


ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು.


ಯೇಸು ಅವರಿಗೆ, “ಖಂಡಿತವಾಗಿಯೂ ನೀವು ಇದನ್ನು ಪವಿತ್ರ ಗ್ರಂಥದಲ್ಲಿ ಓದಿದ್ದೀರಿ: ‘ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು. ಪ್ರಭುವು ಇದನ್ನು ಮಾಡಿದನು. ಇದು ನಮಗೆ ಆಶ್ಚರ್ಯಕರವಾಗಿದೆ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು