16 ಅವರು ಆತನಿಗೆ ಒಂದು ನಾಣ್ಯವನ್ನು ಕೊಟ್ಟರು. ಯೇಸು ಅವರಿಗೆ, “ನಾಣ್ಯದ ಮೇಲೆ ಯಾರ ಚಿತ್ರವಿದೆ? ಮತ್ತು ಅದರ ಮೇಲೆ ಯಾರ ಹೆಸರಿದೆ?” ಎಂದು ಕೇಳಿದನು. ಅವರು, “ಇದು ಸೀಸರನ ಚಿತ್ರ ಮತ್ತು ಸೀಸರನ ಹೆಸರು” ಎಂದು ಉತ್ತರಿಸಿದರು.
ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.
ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.
ಈ ಜನರು ನಿಜವಾಗಿಯೂ ತನ್ನನ್ನು ವಂಚಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ನನ್ನ ಮಾತಿನಲ್ಲಿ ತಪ್ಪನ್ನು ಕಂಡುಹಿಡಿಯಲು ಏಕೆ ಪ್ರಯತ್ನಿಸುತ್ತೀರಿ? ನನಗೆ ಒಂದು ಬೆಳ್ಳಿನಾಣ್ಯವನ್ನು ಕೊಡಿರಿ, ನಾನು ಅದನ್ನು ನೋಡಬೇಕು” ಎಂದನು.