ಮಾರ್ಕ 12:2 - ಪರಿಶುದ್ದ ಬೈಬಲ್2 “ತರುವಾಯ ಫಲಕಾಲವು ಬಂದಾಗ ತನ್ನ ಪಾಲಿನ ದ್ರಾಕ್ಷಿಯನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಸೇವಕನನ್ನು ಗುತ್ತಿಗೆದಾರರ ಬಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಗೇಣಿದಾರರ ಬಳಿಗೆ ಕಳುಹಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಫಲಕಾಲ ಬಂದಾಗ ದ್ರಾಕ್ಷೆಯ ತೋಟದ ಹಣ್ಣಿನ ಪಾಲನ್ನು ಆ ಒಕ್ಕಲಿಗರಿಂದ ತೆಗೆದುಕೊಂಡು ಬರುವದಕ್ಕಾಗಿ ಒಬ್ಬ ಆಳನ್ನು ಅವರ ಬಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಫಲದ ಕಾಲ ಬಂದಾಗ ಅವನು ದ್ರಾಕ್ಷಿತೋಟದ ಫಲವನ್ನು ರೈತರಿಂದ ಪಡೆಯುವುದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕನನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ದರಾಕ್ಷಿ ಗೊಳಾ ಕರ್‍ತಲಿ ಸುಗ್ಗಿಚಿ ದಿಸಾ ಯೆಲ್ಲ್ಯಾ ತನ್ನಾ; ಅಪ್ನಾಚೊ ವಾಟೊ ಮಾಗುನ್ ಹಾನುಕ್ ಮನುನ್ ತ್ಯಾ ಮಳ್ಯಾಚ್ಯಾ ಸಾವ್ಕಾರಾನ್ ಅಪ್ನಾಚ್ಯಾ ಎಕ್ ಸೆವಕಾಕ್ ಧಾಡುನ್ ದಿಲ್ಲ್ಯಾನ್. ಅಧ್ಯಾಯವನ್ನು ನೋಡಿ |
ಇದನ್ನು ತಿಳಿಸುವುದಕ್ಕಾಗಿಯೇ ದೇವರು ಹಿಂದಿನ ಕಾಲದಲ್ಲಿ ಪ್ರವಾದಿಗಳನ್ನು ಉಪಯೋಗಿಸಿದ್ದನು. ಜೆರುಸಲೇಮ್ ಜನಭರಿತವಾದ ಪಟ್ಟಣವಾಗಿದ್ದಾಗ ದೇವರು ಇದನ್ನು ಜನರಿಗೆ ತಿಳಿಸಿದ್ದನು. ಜೆರುಸಲೇಮಿನ ಸುತ್ತಮುತ್ತ ಇರುವ ಪಟ್ಟಣಗಳಲ್ಲಿ ಜನರು ವಾಸಿಸುತ್ತಿದ್ದ ಸಮಯದಲ್ಲಿ ದೇವರು ಇದನ್ನು ತಿಳಿಸಿದ್ದನು. ನೆಗೆವ್‌ನಲ್ಲಿಯೂ ಪಶ್ಚಿಮದ ಪರ್ವತಗಳ ಬುಡದಲ್ಲಿಯೂ ದೇವರು ಇದನ್ನು ಜನರಿಗೆ ತಿಳಿಸಿದ್ದನು.”
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.