Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:27 - ಪರಿಶುದ್ದ ಬೈಬಲ್‌

27 ದೇವರು ತನ್ನನ್ನು ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಎಂದು ಹೇಳಿಕೊಂಡಿರುವುದರಿಂದ ಇವರು ನಿಜವಾಗಿಯೂ ಸತ್ತಿಲ್ಲ. ಏಕೆಂದರೆ, ದೇವರು ಜೀವಿತರಿಗೆ ದೇವರಾಗಿದ್ದಾನೆಯೇ ಹೊರತು ಸತ್ತವರಿಗೆ ಅಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆತನು ಜೀವಂತರಿಗೆ ದೇವರಾಗಿದ್ದಾನೆ ಹೊರತು ಸತ್ತವರಿಗಲ್ಲ. ಈ ವಿಷಯದಲ್ಲಿ ನೀವು ಬಹು ತಪ್ಪಾದ ಅಭಿಪ್ರಾಯವುಳ್ಳವರಾಗಿದ್ದಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ದೇವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ, ನಿಮ್ಮ ಅಭಿಪ್ರಾಯ ತೀರಾ ತಪ್ಪಾಗಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆತನು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ; ನೀವು ಹಿಡಿದ ಅಭಿಪ್ರಾಯವು ಬಹು ತಪ್ಪಾಗಿದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ, ಆದ್ದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪುಮಾಡುತ್ತೀರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 “ದೆವ್ ಮಿಯಾ ಅಬ್ರಾಹಾಮ್, ಇಸಾಕ್, ಜಾಕೊಬಾಚೊ ದೆವ್ ಮನುನ್ ಸಾಂಗ್ತಾ ಜಾಲ್ಯಾರ್, ತೆನಿ ಝಿತ್ತೆ ಹಾತ್ ಮನುನ್ ಅರ್ತ್‍, ತುಮಿ ಲೈ ಚುಕ್ ಯೌಜುನ್‍ಘೆವ್ನ್ ಹಾಸಿ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:27
9 ತಿಳಿವುಗಳ ಹೋಲಿಕೆ  

ಆದಕಾರಣ, ಮತ್ತೆ ಜೀವಿಸುವುದಕ್ಕಾಗಿಯೇ ಕ್ರಿಸ್ತನು ಸತ್ತು ಸಮಾಧಿಯೊಳಗಿಂದ ಜೀವಂತನಾಗಿ ಎದ್ದುಬಂದನು. ಸತ್ತುಹೋದ ಜನರಿಗೂ ಬದುಕಿರುವ ಜನರಿಗೂ ತಾನು ಪ್ರಭುವಾಗಿರಬೇಕೆಂದು ಆತನು ಹೀಗೆ ಮಾಡಿದನು.


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆಯನ್ನಾಗಿ ಮಾಡಿದ್ದೇನೆ” ಎಂದು ಪವಿತ್ರ ಗ್ರಂಥದಲ್ಲೇ ಬರೆದಿದೆ. ಇದು ದೇವರ ಸನ್ನಿಧಿಯಲ್ಲಿ ಸತ್ಯವಾಗಿದೆ. ಸತ್ತವರಿಗೆ ಜೀವವನ್ನು ಕೊಡುವವನೂ ಇನ್ನೂ ಸಂಭವಿಸಿಲ್ಲದ ಕಾರ್ಯಗಳನ್ನು ಮಾಡುವವನೂ ಆಗಿರುವ ದೇವರನ್ನು ಅಬ್ರಹಾಮನು ನಂಬಿದನು.


ಯೇಸು, “ನೀವು ಇಂಥಾ ತಪ್ಪನ್ನು ಮಾಡುವುದೇಕೆ? ಪವಿತ್ರಗ್ರಂಥವಾಗಲಿ, ದೇವರ ಶಕ್ತಿಯಾಗಲಿ ನಿಮಗೆ ಗೊತ್ತಿಲ್ಲ.


ಆದ್ದರಿಂದ ಅವರ ಮೇಲೆ ನಾನು ಕೋಪಗೊಂಡಿದ್ದೆನು. ‘ಅವರ ಆಲೋಚನೆಗಳು ಯಾವಾಗಲೂ ತಪ್ಪಾಗಿವೆ. ನನ್ನ ಮಾರ್ಗವನ್ನು ಅವರು ಅರ್ಥಮಾಡಿಕೊಳ್ಳಲೇ ಇಲ್ಲ’ ಎಂದು ನಾನು ಹೇಳಿದೆನು.


ನೀನು ಬುದ್ಧಿವಾದವನ್ನು ಕೇಳದಿದ್ದರೆ, ನಿನ್ನ ತಪ್ಪುಗಳಲ್ಲಿಯೇ ಮುಂದುವರಿಯುವೆ.


ಯೇಸು, “ನೀವು ತಪ್ಪಾಗಿ ತಿಳಿದುಕೊಂಡಿರಲು ಕಾರಣವೇನೆಂದರೆ, ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ತಿಳಿದಿಲ್ಲ ಮತ್ತು ದೇವರ ಶಕ್ತಿಯ ಬಗ್ಗೆಯೂ ನಿಮಗೆ ಗೊತ್ತಿಲ್ಲ.


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿರುವುದನ್ನು ನೀವು ಓದಿಲ್ಲವೇ? ಹೀಗಿರುವಲ್ಲಿ, ದೇವರು ಜೀವಿತರಿಗೆ ಮಾತ್ರ ದೇವರೇ ಹೊರತು ಸತ್ತವರಿಗಲ್ಲಾ” ಅಂದನು.


ದೇವರು ಅವರೆಲ್ಲರಿಗೆ ದೇವರಾಗಿರುವುದರಿಂದ ಅವರೆಲ್ಲರು ನಿಜವಾಗಿಯೂ ಸತ್ತಿಲ್ಲ. ಏಕೆಂದರೆ ದೇವರು ಜೀವಿಸುವ ಜನರಿಗೇ ದೇವರಾಗಿದ್ದಾನೆ. ದೇವರಿಗೆ ಸೇರಿದವರೆಲ್ಲರೂ ಜೀವಂತರಾಗಿದ್ದಾರೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು