ಮಾರ್ಕ 12:28 - ಪರಿಶುದ್ದ ಬೈಬಲ್28 ಈ ವಾದವಿವಾದವನ್ನು ಕೇಳುತ್ತಿದ್ದ ಧರ್ಮೋಪದೇಶಕರಲ್ಲಿ ಒಬ್ಬನು ಯೇಸು ಸದ್ದುಕಾಯರಿಗೆ ಹಾಗೂ ಫರಿಸಾಯರಿಗೆ ಒಳ್ಳೆಯ ಉತ್ತರ ಕೊಟ್ಟದ್ದನ್ನು ಗಮನಿಸಿ, ಆತನ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಅತ್ಯಂತ ಮುಖ್ಯವಾದ ಆಜ್ಞೆ ಯಾವುದು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಶಾಸ್ತ್ರಿಗಳಲ್ಲಿ ಒಬ್ಬನು ಅವರ ವಾದವನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರ ಕೊಟ್ಟನೆಂದು ತಿಳಿದು ಆತನ ಹತ್ತಿರಕ್ಕೆ ಬಂದು, “ಎಲ್ಲಾ ಆಜ್ಞೆಗಳಲ್ಲಿ ಮುಖ್ಯವಾದ್ದದು ಯಾವುದು?” ಎಂದು ಆತನನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಈ ತರ್ಕವನ್ನು ಕೇಳುತ್ತಿದ್ದ ಧರ್ಮಶಾಸ್ತ್ರಿ ಒಬ್ಬನು, ಯೇಸುಸ್ವಾಮಿ ಸದ್ದುಕಾಯರಿಗೆ ಸಮರ್ಪಕವಾದ ಉತ್ತರವನ್ನು ಕೊಟ್ಟಿದ್ದನ್ನು ಮೆಚ್ಚಿ, ಅವರ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಪ್ರಪ್ರಥಮ ಆಜ್ಞೆ ಯಾವುದು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಶಾಸ್ತ್ರಿಗಳಲ್ಲಿ ಒಬ್ಬನು ಅವರ ತರ್ಕವನ್ನು ಕೇಳಿ ಯೇಸು ಅವರಿಗೆ ಒಳ್ಳೆಯ ಉತ್ತರ ಕೊಟ್ಟನೆಂದು ತಿಳಿದು ಹತ್ತಿರಕ್ಕೆ ಬಂದು - ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಆತನನ್ನು ಕೇಳಿದ್ದಕ್ಕೆ ಯೇಸು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನಿಯಮ ಬೋಧಕರಲ್ಲಿ ಒಬ್ಬನು ಬಂದು ಅವರು ಕೂಡಿಕೊಂಡು ತರ್ಕಿಸುತ್ತಿರುವುದನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಅವರಿಗೆ, “ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು ಯಾವುದು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಖಾಯ್ದೆ ಸಿಕ್ವುತಲ್ಯಾಂಚ್ಯಾ ಮದ್ಲ್ಯಾ ಎಕ್ ಮಾನ್ಸಾನ್ ಜೆಜು ಸಾದುಸೆವಾಕ್ನಿ ಸಮಾ ಜಬಾಬ್ ದಿತಲೆ ಅಯ್ಕ್ಲ್ಯಾನ್, ಅನಿ ಜೆಜುಕ್ಡೆ ಯೆವ್ನ್ “ಸಗ್ಳ್ಯಾ ಉಪಾದೆಸಾನ್ಕಿ ಮೊಟೊ ಉಪಾದೆಸ್ ಖಲೊ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |
“ಮನುಷ್ಯನು ಪ್ರತಿ ಆಜ್ಞೆಗೂ, ಅಂದರೆ ಸಣ್ಣಸಣ್ಣ ಆಜ್ಞೆಗೂ ವಿಧೇಯನಾಗಿರಬೇಕು. ಒಬ್ಬನು ಯಾವ ಆಜ್ಞೆಗಾದರೂ ಅವಿಧೇಯನಾಗಿ ಜೀವಿಸುತ್ತಾ ಆ ಆಜ್ಞೆಗೆ ಬೇರೆಯವರೂ ಅವಿಧೇಯರಾಗಿರಬೇಕೆಂದು ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅತ್ಯಲ್ಪನಾಗಿರುವನು. ಆದರೆ ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ಜೀವಿಸುತ್ತಾ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ಬೇರೆಯವರಿಗೂ ಬೋಧಿಸುವವನು ಪರಲೋಕರಾಜ್ಯದಲ್ಲಿ ಪ್ರಮುಖನಾಗಿರುವನು.
“ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದೇವರಿಗೆ ನಿಮ್ಮಲ್ಲಿರುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ನಿಮ್ಮ ತೋಟದಲ್ಲಿ ಬೆಳೆಯುವ ಮರುಗ, ಸದಾಪು ಮುಂತಾದ ಚಿಕ್ಕ ಸಸಿಗಳಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ಆದರೆ ಬೇರೆಯವರಿಗೆ ನ್ಯಾಯತೋರಿಸುವುದನ್ನೂ ದೇವರನ್ನು ಪ್ರೀತಿಸುವುದನ್ನೂ ಮರೆತುಬಿಟ್ಟಿದ್ದೀರಿ. ನೀವು ಮೊದಲು ಇವುಗಳನ್ನು ಮಾಡಬೇಕು ಮತ್ತು ಉಳಿದವುಗಳನ್ನು ಕಡೆಗಣಿಸಬಾರದು.
“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮಲ್ಲಿರುವ ಪ್ರತಿಯೊಂದರಲ್ಲೂ ನಿಮ್ಮ ಪುದೀನ, ಸಬ್ಬಸ್ಸಿಗೆ ಸೊಪ್ಪು, ಜೀರಿಗೆ ಗಿಡಗಳಲ್ಲಿಯೂ ಸಹ ಹತ್ತರಲ್ಲೊಂದು ಪಾಲನ್ನು ದೇವರಿಗೆ ಕೊಡುತ್ತೀರಿ. ಆದರೆ ಧರ್ಮಶಾಸ್ತ್ರದ ಬೋಧನೆಗಳಲ್ಲಿ ನಿಜವಾಗಿಯೂ ಪ್ರಾಮುಖ್ಯವಾದ ಆಜ್ಞೆಗಳನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ಯಥಾರ್ಥತೆಯನ್ನೂ ನೀವು ತೊರೆದುಬಿಟ್ಟಿದ್ದೀರಿ. ಈ ಆಜ್ಞೆಗಳಿಗೆ ನೀವು ಮೊದಲು ವಿಧೇಯರಾಗಿ, ಈಗ ಮಾಡುತ್ತಿರುವಂಥ ಕಾರ್ಯಗಳನ್ನು ಮಾಡಬೇಕಿತ್ತು.