ಮಾರ್ಕ 12:37 - ಪರಿಶುದ್ದ ಬೈಬಲ್37 ದಾವೀದನೇ ಕ್ರಿಸ್ತನನ್ನು ‘ಪ್ರಭು’ ಎಂದು ಕರೆದಿರುವಾಗ ಕ್ರಿಸ್ತನು ದಾವೀದನ ಮಗನಾಗುವುದು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದನು. ಯೇಸುವಿನ ಮಾತನ್ನು ಕೇಳಿ, ಅನೇಕ ಜನರು ಬಹಳ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ದಾವೀದನೇ ಆತನನ್ನು ‘ಕರ್ತನೆಂದು’ ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಪ್ರಶ್ನಿಸಿದನು. ಜನರ ದೊಡ್ಡ ಸಮೂಹವು ಆತನ ಮಾತನ್ನು ಸಂತೋಷದಿಂದ ಕೇಳುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ದಾವೀದನೇ, ಕ್ರಿಸ್ತನನ್ನು ‘ನನ್ನ ಪ್ರಭು’ ಎಂದು ಕರೆದಿರುವಲ್ಲಿ ಆತನು ದಾವೀದನ ಪುತ್ರನಾಗಿರುವುದು ಹೇಗೆ?” ಎಂದು ಪ್ರಶ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ದಾವೀದನೇ ಆತನನ್ನು ಒಡೆಯನೆಂದು ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವದು ಹೇಗೆ? ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಆದ್ದರಿಂದ ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರೇ’ ಎಂದು ಕರೆಯುವಾಗ, ಆತನು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದರು. ಜನಸಮೂಹವು ಸಂತೋಷದಿಂದ ಯೇಸುವಿನ ಮಾತುಗಳನ್ನು ಆಲಿಸುತ್ತಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 “ಅಶೆ ಸ್ವತಾ ದಾವಿದುಚ್ ಮೆಸ್ಸಿಯಾಕ್ ಧನಿ ಮನುನ್ ಬಲ್ವುತಾ ತರ್, ಮೆಸ್ಸಿಯಾ ದಾವಿದಾಚೊ ಲೆಕ್ ಕಸೊ ಹೊವ್ಕ್ ಹೊತಾ?” ಮಟ್ಲ್ಯಾನ್. ಥೈ ಲೈ ಲೊಕಾ ಹೊತ್ತಿ ತಿ ಲೊಕಾ ಜೆಜು ಸಾಂಗ್ತಲೆ ಕುಶಿನ್ ಅಯ್ಕುಲಾಗಲ್ಲಿ. ಅಧ್ಯಾಯವನ್ನು ನೋಡಿ |
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.