Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:41 - ಪರಿಶುದ್ದ ಬೈಬಲ್‌

41 ಯೇಸು ದೇವಾಲಯದಲ್ಲಿ ಕಾಣಿಕೆ ಪೆಟ್ಟಿಗೆಗಳ ಎದುರಿನಲ್ಲಿ ಕುಳಿತಿದ್ದಾಗ, ಜನರು ಪೆಟ್ಟಿಗೆಯಲ್ಲಿ ಹಣ ಹಾಕುವುದನ್ನು ಗಮನಿಸಿದನು. ಅನೇಕ ಶ್ರೀಮಂತ ಜನರು ಹೆಚ್ಚು ಹಣವನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಯೇಸುಸ್ವಾಮಿ ದೇವಾಲಯದಲ್ಲಿ ಕಾಣಿಕೆಪೆಟ್ಟಿಗೆಗಳಿಗೆ ಎದುರಾಗಿ ಕುಳಿತಿದ್ದರು. ಜನರು ಅದರಲ್ಲಿ ಹಣಹಾಕುವ ರೀತಿ ಅವರ ಕಣ್ಣಿಗೆ ಬಿತ್ತು. ಧನವಂತರನೇಕರು ಹೆಚ್ಚು ಹೆಚ್ಚು ಹಣವನ್ನು ಹಾಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಯೇಸು ಬೊಕ್ಕಸದ ಮನೆಗೆ ಎದುರಾಗಿ ಕೂತುಕೊಂಡು ಜನರು ಬೊಕ್ಕಸದಲ್ಲಿ ಹಣ ಹಾಕುವದನ್ನು ನೋಡುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಬಹಳ ಬಹಳ ಹಾಕುತ್ತಿರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಯೇಸು ಕಾಣಿಕೆ ಪೆಟ್ಟಿಗೆಯ ಎದುರಾಗಿ ಕುಳಿತುಕೊಂಡು ಜನರು ಹೇಗೆ ಅದರಲ್ಲಿ ಹಣ ಹಾಕುತ್ತಿದ್ದಾರೆಂಬುದನ್ನು ಗಮನಿಸುತ್ತಿದ್ದರು. ಅನೇಕ ಐಶ್ವರ್ಯವಂತರು ಹೆಚ್ಚು ಹಣ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಜೆಜು ಗುಡಿತ್ ಕಾನ್ಕಿಚ್ಯಾ ಡಬ್ಬ್ಯಾಚ್ಯಾ ಜಗ್ಗೊಳ್ ಬಸುನ್ ಬಗುನ್ಗೆತ್ ಹೊತ್ತ್ಯಾ ತನ್ನಾ, ತ್ಯಾ ಡಬ್ಬ್ಯಾತ್ ಲೊಕಾ ಪೈಸೆ ಘಾಲಿತ್, ಸುಮಾರ್ ಸಾವ್ಕಾರ್ ಲೊಕಾ ಲೈ-ಲೈ ಪೈಸೆ ಘಾಲಿತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:41
5 ತಿಳಿವುಗಳ ಹೋಲಿಕೆ  

ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು, ಅದರ ಮೇಲೆ ಒಂದು ರಂಧ್ರ ಮಾಡಿದನು. ನಂತರ ಯೆಹೋಯಾದಾವನು ಆ ಪೆಟ್ಟಿಗೆಯನ್ನು ಯಜ್ಞವೇದಿಕೆಯ ಬಲಗಡೆಯಲ್ಲಿ ಇಟ್ಟನು. ದೇವಾಲಯಕ್ಕೆ ಜನರು ಬರುವ ಬಾಗಿಲಿನಲ್ಲಿ ಈ ಪೆಟ್ಟಿಗೆಯಿತ್ತು. ಕೆಲವು ಮಂದಿ ಯಾಜಕರು ಆಲಯದ ಬಾಗಿಲಿನಲ್ಲಿ ರಕ್ಷಕರಾಗಿ ನಿಂತರು. ಆ ಯಾಜಕರು ಜನರು ಯೆಹೋವನಿಗೆಂದು ಕೊಡುವ ಆ ಹಣವನ್ನು ಪೆಟ್ಟಿಗೆಯಲ್ಲಿ ಹಾಕಿದರು.


ಯೇಸುವು ದೇವಾಲಯದಲ್ಲಿ ಉಪದೇಶಿಸುತ್ತಿದ್ದಾಗ ಈ ಮಾತುಗಳನ್ನು ಹೇಳಿದನು. ಜನರು ಕೊಡುವ ಕಾಣಿಕೆಯನ್ನು ಇಟ್ಟಿದ್ದ ಸ್ಥಳದ ಸಮೀಪದಲ್ಲಿ ಆತನಿದ್ದನು. ಆದರೆ ಆತನನ್ನು ಯಾರೂ ಬಂಧಿಸಲಿಲ್ಲ. ಏಕೆಂದರೆ ಆತನನ್ನು ಬಂಧಿಸತಕ್ಕ ಸಮಯ ಇನ್ನೂ ಬಂದಿರಲಿಲ್ಲ.


ಮಹಾಯಾಜಕರು ದೇವಾಲಯದಲ್ಲಿದ್ದ ಬೆಳ್ಳಿಯ ನಾಣ್ಯಗಳನ್ನು ಆಯ್ದುಕೊಂಡು, “ಈ ಹಣವನ್ನು ಒಬ್ಬ ಮನುಷ್ಯನ ಹತ್ಯೆಗಾಗಿ ಕೊಟ್ಟಿದ್ದ ಕಾರಣ ಇದನ್ನು ದೇವಾಲಯದ ಹಣದೊಂದಿಗೆ ಸೇರಿಸುವುದು ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧ” ಎಂದು ಹೇಳಿದರು.


ನಂತರ ಒಬ್ಬ ಬಡವಿಧವೆ ಬಂದು, ಎರಡು ತಾಮ್ರದ ನಾಣ್ಯಗಳನ್ನು ಅಂದರೆ ಒಂದು ಪೈಸೆಯನ್ನು ಹಾಕಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು