ಮಾರ್ಕ 12:7 - ಪರಿಶುದ್ದ ಬೈಬಲ್7 “ಆದರೆ ರೈತರು ಒಬ್ಬರಿಗೊಬ್ಬರು, ‘ಇವನು ಯಜಮಾನನ ಮಗನು. ಈ ದ್ರಾಕ್ಷಿತೋಟದ ಹಕ್ಕುದಾರ. ನಾವು ಇವನನ್ನು ಕೊಂದರೆ, ದ್ರಾಕ್ಷಿತೋಟ ನಮ್ಮದಾಗುತ್ತದೆ’ ಎಂದುಕೊಂಡು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ಆ ಗುತ್ತಿಗೆದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು’ ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದರೆ ಆ ಗೇಣಿದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ, ಇವನನ್ನು ಮುಗಿಸಿಬಿಡೋಣ. ಆಗ ಈ ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಹೂಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದರೆ ಆ ಒಕ್ಕಲಿಗರು - ಇವನೇ ಬಾಧ್ಯಸ್ಥನು; ಬನ್ನಿ, ಇವನನ್ನು ಕೊಂದುಹಾಕೋಣ; ಆಗ ಸ್ವಾಸ್ತ್ಯ ನಮ್ಮದಾಗುವದು ಎಂದು ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಆದರೆ ಆ ರೈತರು, ‘ಇವನೇ ಬಾಧ್ಯಸ್ಥನು, ಬನ್ನಿರಿ, ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು,’ ಎಂದು ತಮ್ಮ ತಮ್ಮಲ್ಲಿ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಖರೆ ತ್ಯಾ ಗುತ್ಕೆ ಘೆಟಲ್ಲ್ಯಾನಿ ತೆಕಾ ಬಗುನ್,“ಹ್ಯೊ ಸಾವ್ಕಾರಾಚೊ ಲೆಕ್, ಹ್ಯಾ ಅಸ್ತಿಚೊ ವಾರಿಸ್ದಾರ್, ಹೆಕಾ ಜಿವಾನಿ ಮಾರುನ್ ಟಾಕುವಾ, ತನ್ನಾ ಹಿ ಆಸ್ತಿ ಅಮ್ಕಾಚ್ ಹೊತಾ” ಮನುನ್ ಬೊಲುನ್ ಘೆವ್ನ್ ಅಧ್ಯಾಯವನ್ನು ನೋಡಿ |
ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.
ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.