Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:10 - ಪರಿಶುದ್ದ ಬೈಬಲ್‌

10 ಈ ಸಂಗತಿಗಳು ಸಂಭವಿಸುವುದಕ್ಕಿಂತ ಮೊದಲು ನೀವು ಜನರಿಗೆಲ್ಲ ಸುವಾರ್ತೆಯನ್ನು ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈ ಮೊದಲು ಎಲ್ಲಾ ಜನಾಂಗಗಳಿಗೆ ಶುಭಸಂದೇಶವನ್ನು ಪ್ರಕಟಿಸಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರುವುದು ಅಗತ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಂತ್ಕಾಲ್ ಯೆವ್ಚ್ಯಾ ಅದ್ದಿ ತುಮಿ ಸಗ್ಳ್ಯಾ ದೆಸಾನಿತ್ಲ್ಯಾ ಸಗ್ಳ್ಯಾ ಲೊಕಾಕ್ನಿ ಬರಿ ಖಬರ್ ಸಾಂಗುಕುಚ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:10
10 ತಿಳಿವುಗಳ ಹೋಲಿಕೆ  

ದೇವರ ರಾಜ್ಯದ ಶುಭವಾರ್ತೆಯನ್ನು ಲೋಕದಲ್ಲೆಲ್ಲಾ ಪ್ರತಿ ಜನಾಂಗಕ್ಕೂ ಸಾರಲಾಗುವುದು. ಆಗ ಅಂತ್ಯವು ಬರುತ್ತದೆ.


ನೀವು ಕೇಳಿದ ಸುವಾರ್ತೆಯ ಮೇಲೆ ನಿಮಗಿರುವ ನಂಬಿಕೆಯಲ್ಲಿ ದೃಢವಾಗಿ ನೆಲೆಗೊಂಡಿದ್ದು ಅದರಿಂದುಂಟಾಗುವ ನಿರೀಕ್ಷೆಯನ್ನು ಬಿಟ್ಟು ಹೋಗದಿದ್ದರೆ ಇದು ಸಾಧ್ಯ. ಈ ಸುವಾರ್ತೆಯನ್ನು ಪ್ರಪಂಚದ ಜನರಿಗೆಲ್ಲ ಸಾರಲಾಗಿದೆ. ಪೌಲನಾದ ನಾನು ಈ ಸುವಾರ್ತೆಯನ್ನು ಸಾರುವ ಸೇವಕನಾದೆನು.


ನಂತರ ಇನ್ನೊಬ್ಬ ದೇವದೂತನು ವಾಯುಮಂಡಲದಲ್ಲಿ ಅತಿ ಎತ್ತರದಲ್ಲಿ ಹಾರುತ್ತಿರುವುದನ್ನು ನಾನು ನೋಡಿದೆನು. ಭೂಮಿಯ ಮೇಲೆ ವಾಸಿಸುವ ಸಕಲ ಜನಾಂಗ, ಕುಲ, ಪ್ರಜೆ, ಭಾಷೆಗಳ ಜನರಿಗೆಲ್ಲಾ ಬೋಧಿಸುವುದಕ್ಕೆ ನಿತ್ಯವಾದ ಸುವಾರ್ತೆಯು ಆ ದೇವದೂತನಲ್ಲಿತ್ತು.


ಆದರೆ, “ಜನರು ಸುವಾರ್ತೆಯನ್ನು ಕೇಳಲಿಲ್ಲವೇ?” ಎಂದು ನಾನು ಪ್ರಶ್ನಿಸುತ್ತೇನೆ. ಹೌದು, ಅವರು ಕೇಳಿದರು ಪವಿತ್ರ ಗ್ರಂಥ ಹೇಳುವಂತೆ: “ಅವರ ಸ್ವರಗಳು ಲೋಕದಲ್ಲೆಲ್ಲಾ ಪ್ರಸಾರಗೊಂಡವು. ಅವರ ಮಾತುಗಳು ಪ್ರಪಂಚದ ಎಲ್ಲಾ ಕಡೆಗಳಿಗೂ ಹೋದವು.”


ಯೇಸು ಶಿಷ್ಯರಿಗೆ, “ಪ್ರಪಂಚದ ಎಲ್ಲಾ ಕಡೆಗೆ ಹೋಗಿರಿ. ಪ್ರತಿಯೊಬ್ಬನಿಗೂ ಸುವಾರ್ತೆಯನ್ನು ಹೇಳಿರಿ.


ಅದ್ಭುತಕಾರ್ಯಗಳ ಶಕ್ತಿಯನ್ನು ಮತ್ತು ಮಹಾಕಾರ್ಯಗಳನ್ನು ನೋಡಿದ್ದರಿಂದಲೂ ಪವಿತ್ರಾತ್ಮನ ಶಕ್ತಿಯ ನಿಮಿತ್ತದಿಂದಲೂ ಅವರು ದೇವರಿಗೆ ವಿಧೇಯರಾದರು. ನಾನು ಜೆರುಸಲೇಮಿನಿಂದ ಇಲ್ಲುರಿಕ ಪ್ರಾಂತ್ಯದವರೆಗೂ ಸುವಾರ್ತೆಯನ್ನು ಬೋಧಿಸಿ, ನನ್ನ ಆ ಕರ್ತವ್ಯವನ್ನು ಪೂರೈಸಿದ್ದೇನೆ.


ಮೊದಲನೆಯದಾಗಿ, ನಾನು ನಿಮ್ಮೆಲ್ಲರ ವಿಷಯದಲ್ಲಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ಏಕೆಂದರೆ ನಿಮ್ಮ ನಂಬಿಕೆಯು ಲೋಕದಲೆಲ್ಲಾ ಪ್ರಖ್ಯಾತವಾಗಿದೆ.


ನ್ಯಾಯವಿಚಾರಣೆಯ ದಿನದಂದು ನಿನೆವೆ ಪಟ್ಟಣದ ಜನರು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ನಿಂತುಕೊಂಡು ನಿಮ್ಮನ್ನು ಅಪರಾಧಿಗಳೆಂದು ಘೋಷಿಸುವರು. ಏಕೆಂದರೆ ಯೋನನು ಬೋಧಿಸಿದಾಗ ಅವರು ತಮ್ಮ ಜೀವಿತವನ್ನು ಬದಲಾವಣೆ ಮಾಡಿಕೊಂಡರು. ಆದರೆ ನಾನು ನಿಮಗೆ ಹೇಳುವುದೇನೆಂದರೆ ನಾನು ಯೋನನಿಗಿಂತಲೂ ಹೆಚ್ಚಿನವನಾಗಿರುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು