Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:20 - ಪರಿಶುದ್ದ ಬೈಬಲ್‌

20 ದೇವರು ಆ ಭಯಂಕರ ಕಾಲವನ್ನು ಕಡಿಮೆಗೊಳಿಸಲು ನಿರ್ಧರಿಸಿದ್ದಾನೆ. ಇಲ್ಲವಾಗಿದ್ದರೆ, ಯಾವ ಮನುಷ್ಯನೂ ಬದುಕಿ ಉಳಿಯಲು ಸಾಧ್ಯವಿಲ್ಲ. ಆದರೆ ದೇವರು ತಾನು ಆರಿಸಿಕೊಂಡ ವಿಶೇಷ ಜನರಿಗೆ ಸಹಾಯ ಮಾಡಲು ಆ ಸಮಯವನ್ನು ಕಡಿಮೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರ ಆ ದಿನಗಳ ಅವಧಿಯನ್ನು ಕಡಿಮೆಮಾಡದಿದ್ದರೆ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ತಾವು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳ ಅವಧಿಯನ್ನು ಅವರು ಕಡಿಮೆಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕರ್ತನು ಆ ದಿನಗಳನ್ನು ಕಡಿಮೆಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯದು; ಆದರೆ ತಾನು ಆದುಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾರೂ ತಪ್ಪಿಹೋಗುವುದಿಲ್ಲ. ಆದರೆ ತಾನು ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ದೆವಾನ್ ಹಿ ಸಂಕಟಾಚಿ ದಿಸಾ ಕಮಿ ಕರಿನಸ್ಲ್ಯಾರ್,ಎಕ್ಲೊಬಿ ಮಾನುಸ್ ಬಚಾವ್ ಹೊವ್ಕ್ ಸಾದ್ಯ್ ನತ್ತೆ, ಖರೆ ದೆವಾನ್ ಅಪ್ನಿ ಯೆಚುನ್ ಕಾಡಲ್ಲ್ಯಾ ಲೊಕಾಂಚ್ಯಾ ಸಾಟ್ನಿ ತಿ ದಿಸಾ ಕಮಿ ಕರ್‍ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:20
10 ತಿಳಿವುಗಳ ಹೋಲಿಕೆ  

“ದೇವರು ಭಯಂಕರವಾದ ಆ ಸಮಯವನ್ನು ಕಡಿಮೆಗೊಳಿಸಲು ತೀರ್ಮಾನಿಸಿದ್ದಾನೆ. ಇಲ್ಲವಾದರೆ, ಜೀವದಿಂದ ಉಳಿಯಲು ಯಾರಿಗೂ ಸಾಧ್ಯವಿಲ್ಲ. ತಾನು ಆರಿಸಿಕೊಂಡ ಜನರ ನಿಮಿತ್ತ ದೇವರು ಆ ಸಮಯವನ್ನು ಕಡಿಮೆ ಮಾಡಿದ್ದಾನೆ.


ಆದರೆ ದೇಶದಲ್ಲಿ ಹತ್ತನೆ ಒಂದು ಭಾಗದಷ್ಟು ಜನರು ಮಾತ್ರ ಉಳಿಯುವರು. ಇವರು ನಾಶವಾಗುವುದಿಲ್ಲ. ಯಾಕೆಂದರೆ ಇವರು ಯೆಹೋವನ ಬಳಿಗೆ ಹಿಂತಿರುಗಿ ಬಂದವರು. ಇವರು ಓಕ್ ಮರದಂತಿರುವರು. ಆ ಮರವು ಕಡಿಯಲ್ಪಟ್ಟರೂ ಅದರ ಬುಡವು ಹಾಗೆಯೇ ಉಳಿಯುವದು. ಈ ಕಾಂಡದ ಬುಡವು ಬಹು ವಿಶೇಷವಾದ ಬೀಜವಾಗಿರುವದು ಮತ್ತು ಅದು ಪುನಃ ಬೆಳೆಯುವುದು.


ಆದರೆ ಸರ್ವಶಕ್ತನಾದ ಯೆಹೋವನು ಸ್ವಲ್ಪ ಮಂದಿಯನ್ನಾದರೂ ಉಳಿಸಿ ಅಲ್ಲಿ ವಾಸಿಸುವಂತೆ ಮಾಡಿದ್ದಾನೆ. ನಾವು ಸೊದೋಮ್ ಗೊಮೋರ ಪಟ್ಟಣಗಳಂತೆ ಸಂಪೂರ್ಣವಾಗಿ ನಾಶವಾಗಲಿಲ್ಲ.


ಏಕೆಂದರೆ ಆ ದಿನಗಳು ಬಹಳ ಸಂಕಟದಿಂದ ತುಂಬಿರುತ್ತವೆ. ದೇವರು ಈ ಲೋಕವನ್ನು ಸೃಷ್ಟಿಮಾಡಿದಂದಿನಿಂದ ಅಂಥ ಸಂಕಟ ಇದುವರೆಗೂ ಆಗಿಲ್ಲ, ಇನ್ನು ಮುಂದೆಯೂ ಆಗುವುದಿಲ್ಲ.


“ಆ ಸಮಯದಲ್ಲಿ, ಯಾರಾದರೂ ನಿಮಗೆ ‘ಕ್ರಿಸ್ತನು ಅಲ್ಲಿದ್ದಾನೆ, ನೋಡು’ ಎನ್ನಬಹುದು. ಅಥವಾ ಇನ್ನೊಬ್ಬನು, ‘ಆತನು ಇಲ್ಲಿದ್ದಾನೆ’ ಎನ್ನಬಹುದು. ಆದರೆ ಅವರನ್ನು ನಂಬಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು