Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:26 - ಪರಿಶುದ್ದ ಬೈಬಲ್‌

26 “ಆಗ ಮನುಷ್ಯಕುಮಾರನು ಅಧಿಕಾರದಿಂದಲೂ ಮಹಾಮಹಿಮೆಯೊಡನೆಯೂ ಮೇಘಗಳಲ್ಲಿ ಬರುವುದನ್ನು ಜನರು ನೋಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮೆಯಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವದನ್ನು ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಆಗ ಮನುಷ್ಯಪುತ್ರನಾದ ನಾನು ಬಹು ಶಕ್ತಿಯಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಹೆ ಹೊಲ್ಲ್ಯಾ ಮಾನಾ ಮಾನ್ಸಾಚೊ ಲೆಕ್ ಅದಿಕಾರ್‍ಯಾನ್ ಅನಿ ಮಹಿಮೆನ್ ಭರುನ್ ಮೊಡಾಂಚ್ಯಾ ವೈನಾ ಯೆತಲೊ ದಿಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:26
15 ತಿಳಿವುಗಳ ಹೋಲಿಕೆ  

ಇಗೋ, ಯೇಸು ಮೋಡಗಳ ಸಂಗಡ ಬರುತ್ತಿದ್ದಾನೆ. ಪ್ರತಿಯೊಬ್ಬರು ಆತನನ್ನು ನೋಡುವರು, ಆತನನ್ನು ಇರಿದವರು ಸಹ ನೋಡುವರು. ಆತನನ್ನು ಕಂಡು ಲೋಕದ ಜನರೆಲ್ಲರೂ ಎದೆಬಡಿದುಕೊಂಡು ಗೋಳಾಡುವರು. ಹೌದು, ಇದು ಸಂಭವಿಸುತ್ತದೆ! ಆಮೆನ್.


ಯೇಸು, “ಹೌದು, ನಾನೇ ದೇವರ ಮಗನು. ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀನು ಕಾಣುವೆ” ಎಂದು ಉತ್ತರಿಸಿದನು.


“ಆಗ ಮನುಷ್ಯಕುಮಾರನ ಆಗಮನದ ಸೂಚನೆಯು ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಲೋಕದ ಜನರೆಲ್ಲಾ ಗೋಳಾಡುವರು. ಆಕಾಶದಲ್ಲಿ ಮೇಘಗಳ ಮೇಲೆ ಆತನು ಬರುವುದನ್ನು ಜನರೆಲ್ಲರೂ ನೋಡುವರು. ಆತನು ಶಕ್ತಿಸಾಮರ್ಥ್ಯದಿಂದಲೂ ಮಹಿಮೆಯಿಂದಲೂ ಬರುವನು.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.


“ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಮತ್ತೆ ಬರುವಾಗ ರಾಜನಾಗಿ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಾನೆ.


ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯವರಲ್ಲಿ ಯಾವನಾದರೂ ನನಗೂ ನನ್ನ ಉಪದೇಶಕ್ಕೂ ನಾಚಿಕೊಂಡರೆ, ಮನುಷ್ಯಕುಮಾರನಾದ ನಾನು ನನ್ನ ತಂದೆಯ ಮಹಿಮೆಯೊಂದಿಗೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವ ಸಮಯದಲ್ಲಿ ಅವನ ಬಗ್ಗೆ ನಾಚಿಕೆಪಡುವೆನು” ಎಂದು ಹೇಳಿದನು.


ಪ್ರಭುವು ತಾನೇ ಪರಲೋಕದಿಂದ ಇಳಿದುಬರುವನು. ಆಗ ಪ್ರಧಾನ ದೇವದೂತನು ದೇವರ ತುತೂರಿ ಧ್ವನಿಯೊಡನೆ ಆಜ್ಞಾಘೋಷ ಮಾಡುವನು. ಕೂಡಲೇ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದುಬರುವರು.


“ಗಲಿಲಾಯದವರೇ, ಏಕೆ ಆಕಾಶವನ್ನೇ ನೋಡುತ್ತಾ ನಿಂತುಕೊಂಡಿದ್ದೀರಿ? ಯೇಸು ನಿಮ್ಮ ಕಣ್ಣೆದುರಿನಲ್ಲಿ ಪರಲೋಕಕ್ಕೆ ಹೇಗೆ ಏರಿ ಹೋದನೋ ಅದೇ ರೀತಿಯಲ್ಲಿ ಹಿಂತಿರುಗಿ ಬರುತ್ತಾನೆ” ಎಂದು ಹೇಳಿದರು.


ಯೇಸು, “ಯೋನನ ಮಗನಾದ ಸೀಮೋನನೇ ನೀನು ಧನ್ಯನು. ಅದನ್ನು ನಿನಗೆ ತಿಳಿಸಿಕೊಟ್ಟವನು ಯಾವ ಮನುಷ್ಯನೂ ಅಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ನಿನಗೆ ತಿಳಿಸಿಕೊಟ್ಟನು.


ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಈಗ ಇಲ್ಲಿ ನಿಂತಿರುವ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದೊಡನೆ ಬರುವುದನ್ನು ನೋಡುವ ತನಕ ಸಾಯುವುದಿಲ್ಲ” ಎಂದು ಹೇಳಿದನು.


ಆಮೇಲೆ ಯೇಸು ಜನರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇಲ್ಲಿ ನಿಂತಿರುವ ನಿಮ್ಮಲ್ಲಿ ಕೆಲವು ಜನರು ತಾವು ಸಾಯುವುದಕ್ಕೆ ಮುಂಚೆ ದೇವರ ರಾಜ್ಯವು ಅಧಿಕಾರದೊಡನೆ ಬರುವುದನ್ನು ನೋಡುತ್ತಾರೆ” ಎಂದು ಹೇಳಿದನು.


ಆಗ ಮನುಷ್ಯಕುಮಾರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ನೋಡುವರು.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಶಕ್ತಿಯ ಕುರಿತಾಗಿ ಮತ್ತು ಆತನ ಬರುವಿಕೆಯ ಕುರಿತಾಗಿ ನಿಮಗೆ ತಿಳಿಸಿದ್ದೇವೆ. ಆ ಸಂಗತಿಗಳು ಜನರಿಂದ ಕಲ್ಪಿತವಾದ ಜಾಣ್ಮೆಯ ಕಥೆಗಳಲ್ಲ. ಯೇಸುವಿನ ಮಹಿಮೆಯನ್ನು ನಾವು ಕಣ್ಣಾರೆ ಕಂಡಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು