Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:3 - ಪರಿಶುದ್ದ ಬೈಬಲ್‌

3 ನಂತರ ಯೇಸು ಆಲಿವ್ ಮರಗಳ ಗುಡ್ಡದ ಮೇಲೆ, ಪೇತ್ರ, ಯಾಕೋಬ, ಯೋಹಾನ ಮತ್ತು ಅಂದ್ರೆಯರ ಸಂಗಡ ಕುಳಿತಿದ್ದನು. ಅವರೆಲ್ಲರಿಗೂ ಅಲ್ಲಿಂದ ದೇವಾಲಯ ಕಾಣುತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬಳಿಕ ಆತನು ಎಣ್ಣೆ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ ಹಾಗೂ ಅಂದ್ರೆಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೇಸುಸ್ವಾಮಿ ದೇವಾಲಯಕ್ಕೆ ಎದುರಾಗಿ ಓಲಿವ್ ಗುಡ್ಡದ ಮೇಲೆ ಕುಳಿತಿದ್ದಾಗ ಪೇತ್ರ, ಯಕೋಬ, ಯೊವಾನ್ನ ಹಾಗೂ ಅಂದ್ರೆಯ ಪ್ರತ್ಯೇಕವಾಗಿ ಅವರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬಳಿಕ ಆತನು ಎಣ್ಣೇಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೇಸು ಓಲಿವ್ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ ಇವರು ಪ್ರತ್ಯೇಕವಾಗಿ ಯೇಸುವಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜೆಜು ದೆವಾಚ್ಯಾ ಗುಡಿಚ್ಯಾ ಇದ್ರಾಕ್ ಅಸಲ್ಲ್ಯಾ ಒಲಿವ್ ಮನ್ತಲ್ಯಾ ಮಡ್ಡಿ ವೈರ್ ಬಸಲ್ಲ್ಯಾ ತನ್ನಾ, ಪೆದ್ರು, ಜಾಕೊಬ್, ಜುವಾಂವ್ ಅನಿ ಅಂದ್ರು, ಎಗ್ಳೆಚ್ ಯೆವ್ನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:3
13 ತಿಳಿವುಗಳ ಹೋಲಿಕೆ  

ಯೇಸುವು ಜನರಿಗೆ ಯಾವಾಗಲೂ ಸಾಮ್ಯಗಳ ಮೂಲಕ ಉಪದೇಶಿಸಿದನು. ಆದರೆ ತನ್ನ ಶಿಷ್ಯರು ಮಾತ್ರ ಇರುವಾಗ ಎಲ್ಲವನ್ನೂ ಅವರಿಗೆ ವಿವರಿಸಿ ತಿಳಿಸುತ್ತಿದ್ದನು.


ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮಿನತ್ತ ಪ್ರಯಾಣ ಮಾಡುತ್ತಾ ಆಲಿವ್ ಗುಡ್ಡದ ಸಮೀಪದಲ್ಲಿದ್ದ ಬೆತ್ಛಗೆಯನ್ನು ಸಮೀಸಿದರು.


ಪೇತ್ರನನ್ನು, ಯಾಕೋಬನನ್ನು ಮತ್ತು ಯೋಹಾನನನ್ನು ತನ್ನ ಜೊತೆ ಕರೆದುಕೊಂಡು ಹೋದನು. ನಂತರ ಯೇಸು ಬಹಳ ಗಲಿಬಿಲಿಗೊಂಡು, ದುಃಖದಿಂದ ತುಂಬಿದವನಾದನು.


ನಂತರ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಯೇಸುವಿನ ಬಳಿಗೆ ಬಂದು, “ಗುರುವೇ, ನಮ್ಮ ಒಂದು ಕೋರಿಕೆಯನ್ನು ನೀನು ನಡೆಸಿಕೊಡಬೇಕು” ಎಂದರು.


ಆರು ದಿನಗಳ ನಂತರ ಪೇತ್ರ, ಯಾಕೋಬ ಮತ್ತು ಯೋಹಾನರನ್ನು ಕರೆದುಕೊಂಡು ಯೇಸು ಎತ್ತರವಾದ ಬೆಟ್ಟದ ಮೇಲೆ ಹೋದನು. ಅಲ್ಲಿ ಅವರು ಮಾತ್ರ ಇದ್ದರು. ಈ ಶಿಷ್ಯರು ಯೇಸುವನ್ನು ನೋಡುತ್ತಿರಲು, ಇದ್ದಕ್ಕಿದ್ದಂತೆ ಆತನು ರೂಪಾಂತರ ಹೊಂದಿದನು.


ಯೇಸು ಪೇತ್ರನನ್ನು, ಯಾಕೋಬನನ್ನು ಮತ್ತು ಯಾಕೋಬನ ತಮ್ಮನಾದ ಯೋಹಾನನನ್ನು ಮಾತ್ರ ತನ್ನ ಜೊತೆಯಲ್ಲಿ ಕರೆದೊಯ್ದನು.


ಬಳಿಕ ಯೇಸು ಆಲಿವ್ ಗುಡ್ಡದ ಮೇಲೆ ಕುಳಿತುಕೊಂಡಿದ್ದಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ! ನೀನು ಈ ಲೋಕಕ್ಕೆ ಮತ್ತೊಮ್ಮೆ ಬರುವಾಗ ಮತ್ತು ಲೋಕದ ಸಮಾಪ್ತಿಯ ಸಮಯ ಬಂದಾಗ ಸೂಚನೆಗಾಗಿ ಏನು ಸಂಭವಿಸುವುದು? ನಮಗೆ ತಿಳಿಸು!” ಎಂದು ಕೇಳಿದರು.


ಆರು ದಿನಗಳ ತರುವಾಯ, ಪೇತ್ರನನ್ನು, ಯಾಕೋಬನನ್ನು ಮತ್ತು ಯಾಕೋಬನ ಸಹೋದರನಾದ ಯೋಹಾನನನ್ನು ಕರೆದುಕೊಂಡು ಯೇಸು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು. ಅವರಲ್ಲದೆ ಬೇರೆ ಯಾರೂ ಅಲ್ಲಿರಲಿಲ್ಲ.


ನಂತರ ಯೇಸು ಜನರನ್ನು ಬಿಟ್ಟು ಮನೆಯೊಳಕ್ಕೆ ಹೋದನು. ಆತನ ಶಿಷ್ಯರು ಆತನ ಬಳಿಗೆ ಬಂದು, “ಹೊಲದಲ್ಲಿರುವ ಹಣಜಿಯನ್ನು ಕುರಿತಾದ ಸಾಮ್ಯದ ಅರ್ಥವನ್ನು ನಮಗೆ ವಿವರಿಸು” ಅಂದರು.


ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀನು ಸಾಮ್ಯಗಳ ಮೂಲಕ ಜನರಿಗೆ ಉಪದೇಶಿಸುವುದೇಕೆ?” ಎಂದು ಕೇಳಿದರು.


ಆ ಶಿಷ್ಯರು ಯೇಸುವಿಗೆ, “ಈ ಸಂಗತಿಗಳೆಲ್ಲಾ ಯಾವಾಗ ಸಂಭವಿಸುತ್ತವೆ? ಅವುಗಳು ನಡೆಯುವ ಕಾಲಕ್ಕೆ ಸೂಚನೆಯೇನು?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು