Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:4 - ಪರಿಶುದ್ದ ಬೈಬಲ್‌

4 ಆ ಶಿಷ್ಯರು ಯೇಸುವಿಗೆ, “ಈ ಸಂಗತಿಗಳೆಲ್ಲಾ ಯಾವಾಗ ಸಂಭವಿಸುತ್ತವೆ? ಅವುಗಳು ನಡೆಯುವ ಕಾಲಕ್ಕೆ ಸೂಚನೆಯೇನು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇವರು ಪ್ರತ್ಯೇಕವಾಗಿ ಆತನಿಗೆ, “ಇವೆಲ್ಲಾ ಯಾವಾಗ ಆಗುವವು? ಇವೆಲ್ಲವು ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು” ಎಂದು ಆತನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಇವೆಲ್ಲವೂ ಸಂಭವಿಸುವುದು ಯಾವಾಗ? ಇವೆಲ್ಲವೂ ಸಂಭವಿಸುವ ಸಮಯ ಬಂತೆಂಬುದನ್ನು ನಾವು ತಿಳಿಯಲು ಪೂರ್ವಸೂಚನೆ ಏನು? ನಮಗೆ ತಿಳಿಸಿ,” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅದು ಯಾವಾಗ ಆಗುವದು? ಅದೆಲ್ಲಾ ನೆರವೇರುವದಕ್ಕಿರುವಾಗ ಯಾವ ಸೂಚನೆ ತೋರುವದು? ನಮಗೆ ಹೇಳು ಎಂದು ಆತನನ್ನು ಪ್ರತ್ಯೇಕವಾಗಿ ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಇವೆಲ್ಲಾ ಯಾವಾಗ ಆಗುವವು? ಇವೆಲ್ಲವೂ ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು,” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಜೆಜುಕ್ “ಹೆ ಸಗ್ಳೆ ಹೊತಲೊ ಎಳ್ ಕನ್ನಾ ಯೆತಾ, ಅನಿ ಕಾಯ್-ಕಾಯ್ ಹೊತಾ, ಹೆ ಸಗ್ಳೆ ಹೊವ್ಲಾ ಮನುಕ್ ವಳಕ್ ಕಾಯ್ ಮನುನ್ ಅಮ್ಕಾ ಸಾಂಗ್” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:4
8 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಆಲಿವ್ ಗುಡ್ಡದ ಮೇಲೆ ಕುಳಿತುಕೊಂಡಿದ್ದಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ! ನೀನು ಈ ಲೋಕಕ್ಕೆ ಮತ್ತೊಮ್ಮೆ ಬರುವಾಗ ಮತ್ತು ಲೋಕದ ಸಮಾಪ್ತಿಯ ಸಮಯ ಬಂದಾಗ ಸೂಚನೆಗಾಗಿ ಏನು ಸಂಭವಿಸುವುದು? ನಮಗೆ ತಿಳಿಸು!” ಎಂದು ಕೇಳಿದರು.


ಶಿಷ್ಯರಲ್ಲಿ ಕೆಲವರು ಯೇಸುವಿಗೆ, “ಗುರುವೇ, ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ? ಆ ಸಮಯವನ್ನು ಯಾವ ಸೂಚನೆಗಳಿಂದ ತಿಳಿದುಕೊಳ್ಳಬೇಕು?” ಎಂದು ಕೇಳಿದರು.


ನಾನು ಉತ್ತರವನ್ನು ಕೇಳಿದೆ, ಆದರೆ ನನಗೆ ಅದು ಅರ್ಥವಾಗಲಿಲ್ಲ. ಆದ್ದರಿಂದ ನಾನು, “ಸ್ವಾಮೀ, ಈ ಎಲ್ಲಾ ಸಂಗತಿಗಳು ಜರುಗಿದ ಮೇಲೆ ಏನು ಸಂಭವಿಸುವದು?” ಎಂದು ಕೇಳಿದೆ.


ನಾರುಮಡಿಯನ್ನು ಧರಿಸಿದ್ದವನೊಬ್ಬನು ನದಿಯಲ್ಲಿ ನೀರಿನ ಮೇಲೆ ನಿಂತಿದ್ದನು. ಅವರಿಬ್ಬರಲ್ಲಿ ಒಬ್ಬನು, “ಆ ಅದ್ಭುತ ಘಟನೆಗಳು ಸಂಭವಿಸುವದಕ್ಕೆ ಇನ್ನು ಎಷ್ಟು ಕಾಲ ಬೇಕು?” ಎಂದು ಅವನನ್ನು ಕೇಳಿದನು.


ನಂತರ ಯೇಸು ಆಲಿವ್ ಮರಗಳ ಗುಡ್ಡದ ಮೇಲೆ, ಪೇತ್ರ, ಯಾಕೋಬ, ಯೋಹಾನ ಮತ್ತು ಅಂದ್ರೆಯರ ಸಂಗಡ ಕುಳಿತಿದ್ದನು. ಅವರೆಲ್ಲರಿಗೂ ಅಲ್ಲಿಂದ ದೇವಾಲಯ ಕಾಣುತಿತ್ತು.


ಅದಕ್ಕೆ ಯೇಸು, “ಎಚ್ಚರಿಕೆಯಿಂದಿರಿ! ನಿಮಗೆ ಮೋಸ ಮಾಡಲು ಯಾರಿಗೂ ಆಸ್ಪದ ಕೊಡಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು