Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:5 - ಪರಿಶುದ್ದ ಬೈಬಲ್‌

5 ಅದಕ್ಕೆ ಯೇಸು, “ಎಚ್ಚರಿಕೆಯಿಂದಿರಿ! ನಿಮಗೆ ಮೋಸ ಮಾಡಲು ಯಾರಿಗೂ ಆಸ್ಪದ ಕೊಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೇಸು ಅವರಿಗೆ ಹೇಳಿದ್ದೇನಂದರೆ, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅದಕ್ಕೆ ಯೇಸು ಹೀಗೆಂದರು: “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಜಾಗರೂಕರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೇಸು ಅವರಿಗೆ ಹೇಳಿದ್ದೇನಂದರೆ - ಯಾರಾದರೂ ನಿಮ್ಮನ್ನು ಮೋಸಗೊಳಿಸಾರು ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೇಸು ಅವರಿಗೆ ಹೀಗೆಂದನು, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ಜೆಜುನ್ ತೆಂಕಾ “ಕೊನ್ಬಿ ತುಮ್ಕಾ ಮೊಸ್ ಕರಿನಸಿ ಸರ್ಕೆ ಉಶಾರ್ಕಿನ್ ರ್‍ಹಾವಾ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:5
11 ತಿಳಿವುಗಳ ಹೋಲಿಕೆ  

ಯಾರೂ ನಿಮ್ಮನ್ನು ಮೋಸಕರವಾದ ಮತ್ತು ನಿರರ್ಥಕವಾದ ತತ್ವಜ್ಞಾನ ಬೋಧನೆಯಿಂದ ತಪ್ಪು ದಾರಿಗೆ ನಡೆಸದಂತೆ ಜಾಗ್ರತೆಯಿಂದಿರಿ. ಆ ತತ್ವಜ್ಞಾನಗಳು ಜನರಿಂದ ಬಂದುವೇ ಹೊರತು ಕ್ರಿಸ್ತನಿಂದಲ್ಲ. ಅವು ಈ ಲೋಕದ ಜನರ ನಿರರ್ಥಕ ತತ್ವಗಳು.


ಅಸತ್ಯವಾದ ಸಂಗತಿಗಳನ್ನು ಹೇಳಿ ನಿಮ್ಮನ್ನು ಮೋಸಪಡಿಸಲು ಯಾರಿಗೂ ಅವಕಾಶ ಕೊಡಬೇಡಿ. ಆ ಕೆಟ್ಟಸಂಗತಿಗಳ ನಿಮಿತ್ತ ದೇವರ ಕೋಪವು ಆತನಿಗೆ ವಿಧೇಯರಾಗದ ಜನರ ಮೇಲೆ ಬರುತ್ತದೆ.


ಇಸ್ರೇಲರ ದೇವರೂ, ಸರ್ವಶಕ್ತನೂ ಆಗಿರುವ ಯೆಹೋವನು, ಹೀಗೆನ್ನುತ್ತಾನೆ: “ನಿಮ್ಮ ಪ್ರವಾದಿಗಳು ಮತ್ತು ಮಾಟಮಂತ್ರಗಾರರು ನಿಮ್ಮನ್ನು ಮರುಳುಗೊಳಿಸದಿರಲಿ. ಅವರು ನೋಡುವ ಕನಸುಗಳಿಗೆ ಕಿವಿಗೊಡಬೇಡಿ.


ನನ್ನ ಪ್ರಿಯ ಸ್ನೇಹಿತರೇ, ಈಗ ಲೋಕದಲ್ಲಿ ಅನೇಕ ಸುಳ್ಳುಪ್ರವಾದಿಗಳಿದ್ದಾರೆ. ಆದ್ದರಿಂದ ಪ್ರತಿಯೊಂದು ಆತ್ಮವನ್ನು ನಂಬಬೇಡಿ. ಆದರೆ ಆ ಆತ್ಮಗಳು ದೇವರಿಂದ ಬಂದವುಗಳೇ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಿರಿ.


ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸಲು ಅವಕಾಶ ನೀಡದಿರಿ. ಜನರು ದೇವರಿಗೆ ವಿಮುಖರಾಗದ ಹೊರತು, ಅಧರ್ಮಸ್ವರೂಪನು ಕಾಣಿಸಿಕೊಳ್ಳದ ಹೊರತು ಆ ದಿನವು ಬರುವುದಿಲ್ಲ.


ಮೋಸ ಹೋಗಬೇಡಿರಿ. “ದುರ್ಜನರ ಸಹವಾಸ ಸದಾಚಾರದ ಭಂಗ.”


ಯೇಸು ಅವರಿಗೆ, “ಎಚ್ಚರಿಕೆಯಾಗಿರಿ! ಮೋಸ ಹೋಗಬೇಡಿರಿ. ನನ್ನ ಹೆಸರನ್ನು ಹೇಳುತ್ತಾ ಅನೇಕರು ಬರುವರು. ಅವರು, ‘ನಾನೇ ಕ್ರಿಸ್ತನು’ ಎಂದೂ, ‘ಸರಿಯಾದ ಸಮಯ ಬಂದಿದೆ’ ಎಂದೂ ಹೇಳುವರು. ಆದರೆ ಅವರನ್ನು ಹಿಂಬಾಲಿಸಬೇಡಿರಿ.


ಆ ಶಿಷ್ಯರು ಯೇಸುವಿಗೆ, “ಈ ಸಂಗತಿಗಳೆಲ್ಲಾ ಯಾವಾಗ ಸಂಭವಿಸುತ್ತವೆ? ಅವುಗಳು ನಡೆಯುವ ಕಾಲಕ್ಕೆ ಸೂಚನೆಯೇನು?” ಎಂದು ಕೇಳಿದರು.


ಅನೇಕ ಜನರು ಬಂದು, ‘ನಾನೇ ಕ್ರಿಸ್ತನು; ನಾನೇ ಕ್ರಿಸ್ತನು’ ಎನ್ನುತ್ತಾ ಅನೇಕ ಜನರನ್ನು ಮೋಸಗೊಳಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು