Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:1 - ಪರಿಶುದ್ದ ಬೈಬಲ್‌

1 ಪಸ್ಕ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬಕ್ಕೆ ಕೇವಲ ಎರಡು ದಿನಗಳಿದ್ದವು. ಮಹಾಯಾಜಕರು ಹಾಗೂ ಧರ್ಮೋಪದೇಶಕರು ಯಾವುದಾದರೊಂದು ಸುಳ್ಳು ಅಪವಾದವನ್ನು ಕಂಡುಹಿಡಿದು ಯೇಸುವನ್ನು ಬಂಧಿಸಿ ಆತನನ್ನು ಕೊಲ್ಲಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪಾಸ್ಕಹಬ್ಬವು, ಅಂದರೆ ಹುಳಿರಹಿತ ರೊಟ್ಟಿಯ ಹಬ್ಬವು ಬರುವುದಕ್ಕೆ ಇನ್ನು ಎರಡು ದಿನಗಳು ಮಾತ್ರ ಇದ್ದವು. ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಉಪಾಯದಿಂದ ಹಿಡಿದು ಕೊಲ್ಲಿಸುವುದಕ್ಕೆ ಹವಣಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮಹಾಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿವಸಗಳಿದ್ದಾಗ, ಮುಖ್ಯಯಾಜಕರೂ ನಿಯಮ ಬೋಧಕರೂ ಉಪಾಯದಿಂದ ಯೇಸುವನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಮಾರ್ಗ ಹುಡುಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪಾಸ್ಕ್ ಮನ್ತಲ್ಯಾ ಅನಿ ಇಸ್ಟ್ ಘಾಲಿನಸ್ತಾನಾ ಕರಲ್ಲ್ಯಾ ಭಾಕ್ರಿಚ್ಯಾ ಸನಾಕ್ ಅನಿ ಖಾಲಿ ದೊನ್ ದಿಸಾ ಹುರಲ್ಲಿ, ತನ್ನಾ ಮುಖ್ಯ ಯಾಜಕಾನಿ ಅನಿ ಖಾಯ್ದೆ ಸಿಕ್ವುತಲ್ಯಾನಿ ಜೆಜುಕ್ ಘುಟಾನಿ ಧರುನ್ ಜಿವಾನಿ ಮಾರುಚೆ ಮನುನ್ ಯವ್ಜುನ್ ಘೆವ್ನ್ ಹೊತ್ತ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:1
23 ತಿಳಿವುಗಳ ಹೋಲಿಕೆ  

ಯೆಹೂದ್ಯರ ಪಸ್ಕಹಬ್ಬವು ಬಹು ಸಮೀಪವಾಗಿತ್ತು. ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುವ ಸಮಯ ಬಂದಿರುವುದಾಗಿ ಯೇಸುವಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತನ್ನವರನ್ನು ಆತನು ಯಾವಾಗಲೂ ಪ್ರೀತಿಸುತ್ತಿದ್ದನು. ಈಗಲಾದರೋ ಅವರ ಮೇಲೆ ತನಗಿರುವ ಅಪಾರ ಪ್ರೀತಿಯನ್ನು ತೋರಿಸುವ ಕಾಲ ಆತನಿಗೆ ಬಂದಿತ್ತು.


ಆಗ ಮಹಾಯಾಜಕರು ಮತ್ತು ಫರಿಸಾಯರು ಯೆಹೂದ್ಯರ ಆಲೋಚನಾಸಭೆಯನ್ನು ಕರೆದು, “ನಾವು ಏನು ಮಾಡಬೇಕು? ಈ ಮನುಷ್ಯನು (ಯೇಸು) ಅನೇಕ ಸೂಚಕಕಾರ್ಯಗಳನ್ನು ಮಾಡುತ್ತಿದ್ದಾನೆ.


ಆದರೆ ಫರಿಸಾಯರು ಹೊರಟುಹೋಗಿ, ಯೇಸುವನ್ನು ಕೊಲ್ಲಲು ಉಪಾಯಗಳನ್ನು ಮಾಡಿಕೊಂಡರು.


“ನೀವು ಬಡಜನರಿಗೆ ಮಾಡುವ ದಾನವನ್ನು ಪ್ರಕಟಿಸಬೇಡಿ. ನೀವು ಕಪಟಿಗಳಂತೆ ಮಾಡಕೂಡದು. ತಾವು ಮಾಡುವ ದಾನವನ್ನು ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಗಳಲ್ಲಿ ತುತ್ತೂರಿ ಊದಿಸುತ್ತಾರೆ. ಜನರಿಂದ ಗೌರವ ಪಡೆಯಬೇಕೆಂಬುದೇ ಅವರ ಉದ್ದೇಶ.


ಸಾಮಾನ್ಯ ಜನರು ಕೇವಲ ಉಸಿರಷ್ಟೇ. ಶ್ರೇಷ್ಠರು ಕೇವಲ ಕ್ಷಣಕಾಲವಷ್ಟೇ. ತೂಗಿನೋಡಿದರೆ ಅವರು ಕೇವಲ ಶೂನ್ಯ; ಉಸಿರಿಗಿಂತಲೂ ಹಗುರ.


ನನ್ನನ್ನು ಉನ್ನತಸ್ಥಾನದಿಂದ ಕೆಳಗಿಳಿಸಬೇಕೆಂದು ಅವರು ಕುತಂತ್ರ ಮಾಡುತ್ತಿದ್ದಾರೆ. ನನ್ನ ಕುರಿತು ಸುಳ್ಳಾಡುವುದು ಅವರಿಗೆ ಸಂತೋಷ. ಬಾಯಿಂದ ಆಶೀರ್ವದಿಸಿ, ಹೃದಯದಲ್ಲಿ ಶಪಿಸುವರು.


ಒಳ್ಳೆಯದಕ್ಕಿಂತಲೂ ಕೆಟ್ಟದ್ದನ್ನೇ ನೀನು ಹೆಚ್ಚು ಪ್ರೀತಿಸುವೆ. ನಿನಗೆ ಸತ್ಯಕ್ಕಿಂತಲೂ ಸುಳ್ಳೇ ಇಷ್ಟ.


ಯೋಸೇಫನನ್ನು ಬಹುದೂರದಿಂದಲೇ ಕಂಡ ಅವನ ಅಣ್ಣಂದಿರು ಅವನನ್ನು ಕೊಲ್ಲಲು ಒಂದು ಉಪಾಯ ಮಾಡಿದರು.


ಮೋಶೆ ಆರೋನರು ಇನ್ನೂ ಈಜಿಪ್ಟಿನಲ್ಲಿದ್ದಾಗ ಯೆಹೋವನು ಅವರೊಡನೆ ಮಾತಾಡಿ,


“ಆದರೆ ಹಬ್ಬದ ಸಮಯದಲ್ಲಿ ನಾವು ಯೇಸುವನ್ನು ಬಂಧಿಸಲು ಸಾಧ್ಯವಿಲ್ಲ. ಜನರು ಕೋಪಗೊಂಡು, ಗಲಭೆ ಎಬ್ಬಿಸುವ ಸಾಧ್ಯತೆಯಿದೆ” ಎಂದು ಅವರು ಮಾತಾಡಿಕೊಂಡರು.


ಅಂದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನವಾಗಿತ್ತು. ಯೆಹೂದಿಗಳು ಯಾವಾಗಲೂ ಪಸ್ಕಹಬ್ಬದ ಕುರಿಮರಿಗಳನ್ನು ಯಜ್ಞಮಾಡುವ ಸಮಯ ಇದಾಗಿತ್ತು. ಯೇಸುವಿನ ಶಿಷ್ಯರು ಆತನ ಬಳಿಗೆ ಬಂದು, “ನಾವು ಪಸ್ಕಹಬ್ಬದ ಊಟವನ್ನು ನಿನಗಾಗಿ ಎಲ್ಲಿ ಸಿದ್ಧಪಡಿಸೋಣ?” ಎಂದು ಕೇಳಿದರು.


ಹದಿನಾರು ಮಂದಿ ಸಿಪಾಯಿಗಳು ಪೇತ್ರನನ್ನು ಕಾಯುತ್ತಿದ್ದರು. ಪಸ್ಕಹಬ್ಬದ ಕಾಲ ಮುಗಿದೊಡನೆ ಪೇತ್ರನನ್ನು ಜನರ ಮುಂದೆ ನಿಲ್ಲಿಸಬೇಕೆಂದಿದ್ದನು.


ನೀವು ಅದನ್ನು ಚೂರುಚೂರುಗಳಾಗಿ ಮುರಿದು ಅದರ ಮೇಲೆ ಎಣ್ಣೆ ಹೊಯ್ಯಬೇಕು. ಅದು ಧಾನ್ಯನೈವೇದ್ಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು