Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:14 - ಪರಿಶುದ್ದ ಬೈಬಲ್‌

14 ಅವನು ಒಂದು ಮನೆಯೊಳಗೆ ನಡೆದು ಹೋಗುತ್ತಾನೆ. ನೀವು ಆ ಮನೆಯ ಯಜಮಾನನಿಗೆ, ‘ನಮ್ಮ ಗುರುವು ತನ್ನ ಶಿಷ್ಯರ ಸಂಗಡ ಪಸ್ಕ ಹಬ್ಬದ ಊಟ ಮಾಡಲು ಒಂದು ಕೋಣೆಯನ್ನು ತೋರಿಸಬೇಕೆಂದು ಕೇಳುತ್ತಾನೆ’ ಎಂದು ಹೇಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ಯಾವ ಮನೆಯೊಳಗೆ ಹೋಗುವನೋ ಆ ಮನೆಯ ಯಜಮಾನನಿಗೆ, ‘ನಮ್ಮ ಗುರು, ತನ್ನ ಶಿಷ್ಯರ ಸಂಗಡ ಪಸ್ಕದ ಭೋಜನ ಮಾಡಲು ಕೊಠಡಿ ಎಲ್ಲಿದೆ?’ ಎಂಬುದಾಗಿ ಕೇಳುತ್ತಿದ್ದಾನೆ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನ ಹಿಂದೆಯೇ ಹೋಗಿ, ಅವನು ಯಾವ ಮನೆಗೆ ಹೋಗುತ್ತಾನೋ ಆ ಮನೆಯ ಯಜಮಾನನಿಗೆ, “ನಮ್ಮ ಗುರು, ‘ನನ್ನ ಶಿಷ್ಯರ ಜೊತೆಯಲ್ಲಿ ಪಾಸ್ಕಭೋಜನ ಮಾಡಲು ನನಗೆ ಕೊಠಡಿ ಎಲ್ಲಿ?’ ಎಂದು ಕೇಳುತ್ತಾರೆ,” ಎಂದು ವಿಚಾರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನು ಯಾವ ಮನೆಗೆ ಹೋಗುವನೋ ಆ ಮನೆಯ ಯಜಮಾನನಿಗೆ - ನಮ್ಮ ಬೋಧಕನು ತನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವದಕ್ಕೆ ತನಗೆ ಭೋಜನಶಾಲೆ ಎಲ್ಲಿ ಎಂದು ಕೇಳುತ್ತಾನೆ ಎಂಬದಾಗಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ಯಾವ ಮನೆಯೊಳಗೆ ಹೋಗುತ್ತಾನೋ ಆ ಮನೆಯ ಯಜಮಾನನಿಗೆ, ‘ನಾನು ನನ್ನ ಶಿಷ್ಯರೊಂದಿಗೆ ಪಸ್ಕಭೋಜನ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ? ಎಂದು ಬೋಧಕರು ನಿನ್ನನ್ನು ಕೇಳುತ್ತಾರೆ,’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅನಿ ತೊ ಖಲ್ಯಾ ಘರಾತ್ ಜಾವ್ನ್ ಗುಸ್ತಾ ಕಿ, ತ್ಯಾ ಘರಾತ್ ಜಾಂವಾ, ಅನಿ ತ್ಯಾ ಘರ್‍ಚ್ಯಾ ವಡ್ಲಾಕ್, ಅಮ್ಚ್ಯಾ ಗುರುಜಿನ್; ಅಪ್ನಾಚ್ಯಾ ಶಿಸಾಂಚ್ಯಾ ವಾಂಗ್ಡಾ ಪಾಸ್ಕಾಚೆ ಜೆವಾನ್ ಕರ್‍ತಲಿ ಖೊಲಿ ಖೈ ಹಾಯ್ ಮನುನ್ ಇಚಾರ್ಲಾನ್ಯಾಯ್?” ಮನುನ್ ಸಾಂಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:14
8 ತಿಳಿವುಗಳ ಹೋಲಿಕೆ  

ಇಗೋ, ನಾನು ಬಾಗಿಲ ಬಳಿ ನಿಂತುಕೊಂಡು ತಟ್ಟುತ್ತಿದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ, ನಾನು ಒಳಗೆ ಬಂದು ಅವನೊಂದಿಗೆ ಊಟ ಮಾಡುತ್ತೇನೆ ಮತ್ತು ಅವನು ನನ್ನೊಂದಿಗೆ ಊಟ ಮಾಡುತ್ತಾನೆ.


ನೀವು ನನ್ನನ್ನು, ‘ಗುರುವೇ, ಪ್ರಭುವೇ’ ಎಂದು ಕರೆಯುತ್ತೀರಿ. ನೀವು ಹಾಗೆ ಕರೆಯುವುದು ಸರಿ. ಏಕೆಂದರೆ ನಾನು ಗುರುವೂ ಹೌದು, ಪ್ರಭುವೂ ಹೌದು.


ಮಾರ್ಥಳು ಹೀಗೆ ಹೇಳಿದ ಮೇಲೆ, ತನ್ನ ಸಹೋದರಿಯಾದ ಮರಿಯಳ ಬಳಿಗೆ ಹಿಂತಿರುಗಿ ಹೋದಳು. ಮಾರ್ಥಳು ಮರಿಯಳೊಂದಿಗೆ ಪ್ರತ್ಯೇಕವಾಗಿ ಮಾತಾಡಿ, “ಗುರುವು (ಯೇಸು) ನಿನ್ನನ್ನು ಕರೆಯುತ್ತಿದ್ದಾನೆ” ಎಂದು ತಿಳಿಸಿದಳು.


ಯಾವನಾದರೂ ‘ಆ ಕತ್ತೆಯನ್ನು ಏಕೆ ತೆಗೆದುಕೊಂಡು ಹೋಗುತ್ತಿದ್ದೀರಿ’ ಎಂದು ನಿಮ್ಮನ್ನು ಕೇಳಿದರೆ, ‘ಒಡೆಯನಿಗೆ ಈ ಕತ್ತೆ ಬೇಕಾಗಿದೆ. ಆತನು ಇದನ್ನು ಬೇಗನೆ ಕಳುಹಿಸಿಕೊಡುವನು’ ಎಂದು ಅವನಿಗೆ ಹೇಳಿರಿ” ಎಂದನು.


ಯೇಸು ಅಲ್ಲಿಂದ ಹೊರಡಬೇಕೆಂದಿದ್ದಾಗ ಒಬ್ಬನು ಓಡಿಬಂದು, ಆತನ ಮುಂದೆ ತನ್ನ ಮೊಣಕಾಲೂರಿ, “ಒಳ್ಳೆಯ ಉಪದೇಶಕನೇ, ನಿತ್ಯಜೀವವನ್ನು ಪಡೆಯಲು ನಾನು ಏನು ಮಾಡಬೇಕು?” ಎಂದು ಕೇಳಿದನು.


ಯೇಸು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ನೀವು ಪಟ್ಟಣದೊಳಕ್ಕೆ ಹೋದಾಗ, ಒಬ್ಬ ಮನುಷ್ಯನು ನೀರಿನ ಕೊಡವನ್ನು ಹೊತ್ತುಕೊಂಡು ನಿಮ್ಮ ಎದುರಿಗೆ ಬರುವನು. ಅವನನ್ನೇ ಹಿಂಬಾಲಿಸಿರಿ.


ಆ ಯಜಮಾನನು ಮೇಲಂತಸ್ತಿನಲ್ಲಿ ಸಿದ್ಧವಾಗಿರುವ ಒಂದು ದೊಡ್ಡ ಕೋಣೆಯನ್ನು ತೋರಿಸುತ್ತಾನೆ. ಅಲ್ಲಿ ನಮಗಾಗಿ ಊಟವನ್ನು ಸಿದ್ಧಪಡಿಸಿರಿ” ಎಂದನು.


ಆ ಮನೆಯ ಯಜಮಾನನಿಗೆ, ‘ಗುರುವು ತನ್ನ ಶಿಷ್ಯರೊಂದಿಗೆ ಯಾವ ಕೋಣೆಯಲ್ಲಿ ಪಸ್ಕದ ಊಟವನ್ನು ಮಾಡಬೇಕೆಂಬುದನ್ನು ದಯಮಾಡಿ ತೋರಿಸು’ ಎಂದು ಹೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು