Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:22 - ಪರಿಶುದ್ದ ಬೈಬಲ್‌

22 ಅವರು ಊಟಮಾಡುತ್ತಿರುವಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಅದನ್ನು ಮುರಿದು, ತನ್ನ ಶಿಷ್ಯರಿಗೆ ಕೊಟ್ಟನು. ಯೇಸು ಅವರಿಗೆ, “ಈ ರೊಟ್ಟಿಯನ್ನು ತೆಗೆದುಕೊಂಡು ತಿನ್ನಿರಿ. ಈ ರೊಟ್ಟಿಯು ನನ್ನ ದೇಹ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ “ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರೆಲ್ಲರೂ ಊಟಮಾಡುತ್ತಿರುವಾಗ, ಯೇಸುಸ್ವಾಮಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತುತಿಮಾಡಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದನ್ನು ಸ್ವೀಕರಿಸಿರಿ, ಇದು ನನ್ನ ಶರೀರ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರು ಊಟಮಾಡುತ್ತಿರುವಾಗ ಆತನು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು - ತಕ್ಕೊಳ್ಳಿರಿ; ಇದು ನನ್ನ ದೇಹ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ, ಮುರಿದು, ಅವರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ಇದು ನನ್ನ ದೇಹ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೆನಿ ಜೆವಾನ್ ಕರ್‍ತಾನಾ ಜೆಜುನ್ ಭಾಕ್ರಿ ಹಾತಿತ್ ಘೆವ್ನ್, ಧನ್ಯಾವಾದಾಚಿ ಮಾಗ್ನಿ ಕರುನ್ ಅಪ್ನಾಚ್ಯಾ ಶಿಸಾಕ್ನಿ ದಿವ್ನ್ “ಹೆ ಮಾಜೆ ಶರಿರ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:22
18 ತಿಳಿವುಗಳ ಹೋಲಿಕೆ  

ಯೇಸು, “ಇದು ನನ್ನ ರಕ್ತ. ಒಡಂಬಡಿಕೆಯ ರಕ್ತ. ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ಯೇಸು ಅವರ ಸಂಗಡ ಕುಳಿತುಕೊಂಡು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ಆಹಾರಕ್ಕಾಗಿ ದೇವರಿಗೆ ಸೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟನು.


ಆದರೆ ಅಷ್ಟರಲ್ಲಿಯೇ, ಕೆಲವು ದೋಣಿಗಳು ತಿಬೇರಿಯಾದಿಂದ ಬಂದವು. ಅವರು ಊಟ ಮಾಡಿದ ಸ್ಥಳಕ್ಕೆ ಸಮೀಪದ ದಡದಲ್ಲಿಯೇ ಆ ದೋಣಿಗಳು ನಿಂತುಕೊಂಡವು. ಪ್ರಭುವು ಸ್ತೋತ್ರ ಮಾಡಿದ ಮೇಲೆ ಅವರು ರೊಟ್ಟಿಯನ್ನು ಆ ಸ್ಥಳದಲ್ಲೇ ತಿಂದಿದ್ದರು.


ಯೇಸು ಐದು ರೊಟ್ಟಿಗಳನ್ನು ಮತ್ತು ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ, ರೊಟ್ಟಿಗಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿದನು. ಬಳಿಕ ರೊಟ್ಟಿಯನ್ನು ಮುರಿದು, ಅದನ್ನು ಶಿಷ್ಯರಿಗೆ ಕೊಟ್ಟು ಜನರಿಗೆಲ್ಲ ಹಂಚಲು ತಿಳಿಸಿದನು. ಅಂತೆಯೇ ಎರಡು ಮೀನುಗಳನ್ನು ಮುರಿದು ಜನರಿಗೆ ಹಂಚಬೇಕೆಂದು ಶಿಷ್ಯರಿಗೆ ಕೊಟ್ಟನು.


ಬಳಿಕ ಆತನು ಜನರಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಐದು ರೊಟ್ಟಿ ಮತ್ತು ಎರಡು ಮೀನುಗಳನ್ನು ತೆಗೆದುಕೊಂಡು, ಆಕಾಶದ ಕಡೆಗೆ ನೋಡಿ, ಅವುಗಳಿಗಾಗಿ ದೇವರಿಗೆ ಸ್ತೋತ್ರಸಲ್ಲಿಸಿ, ರೊಟ್ಟಿಯನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು. ಶಿಷ್ಯರು ರೊಟ್ಟಿಯನ್ನು ಜನರಿಗೆ ಹಂಚಿದರು.


ಸೀಸದಿಂದ ಮಾಡಲ್ಪಟ್ಟ ಒಂದು ಮುಚ್ಚಳವನ್ನು ಆ ಬುಟ್ಟಿಯಿಂದ ತೆಗೆಯಲಾಯಿತು. ಆಗ ಅದರೊಳಗೆ ಒಬ್ಬ ಹೆಂಗಸು ಇರುವುದನ್ನು ಕಂಡೆನು.


ಒಳ್ಳೆಯ ಏಳು ಹಸುಗಳೇ ಏಳು ವರ್ಷಗಳು. ಒಳ್ಳೆಯ ಏಳು ತೆನೆಗಳೇ ಏಳು ವರ್ಷಗಳು. ಎರಡು ಕನಸುಗಳೂ ಒಂದೇ ಅರ್ಥವನ್ನು ಹೊಂದಿವೆ.


ಆದ್ದರಿಂದ ಹಾಗರಳು ಅರೇಬಿಯಾದಲ್ಲಿರುವ ಸೀನಾಯಿ ಪರ್ವತದಂತಿದ್ದಾಳೆ. ಯೆಹೂದ್ಯರ ನಗರವಾದ ಜೆರುಸಲೇಮಿಗೆ ಆಕೆಯು ಅನುರೂಪವಾಗಿದ್ದಾಳೆ. ಈ ನಗರವು ಗುಲಾಮಗಿರಿಯಲ್ಲಿದೆ ಮತ್ತು ಅದರ ಜನರೆಲ್ಲರೂ ಧರ್ಮಶಾಸ್ತ್ರಕ್ಕೆ ಗುಲಾಮರಾಗಿದ್ದಾರೆ.


ತಮ್ಮೊಂದಿಗಿದ್ದ ಆತ್ಮಿಕ ಬಂಡೆಯ ನೀರನ್ನು ಕುಡಿದರು. ಆ ಬಂಡೆಯೇ ಕ್ರಿಸ್ತನು.


ನಂತರ ಯೇಸು ಮಕ್ಕಳನ್ನು ತನ್ನ ಕೈಗಳಿಂದ ಅಪ್ಪಿಕೊಂಡು ಅವರ ಮೇಲೆ ತನ್ನ ಕೈಗಳನ್ನಿಟ್ಟು ಆಶೀರ್ವದಿಸಿದನು.


ಮನುಷ್ಯಕುಮಾರನು ಹಿಂಸಿಸಲ್ಪಟ್ಟನು. ಪವಿತ್ರ ಗ್ರಂಥದಲ್ಲಿಯೂ ಅದನ್ನು ಬರೆಯಲಾಗಿದೆ. ಆದರೆ ಮನುಷ್ಯಕುಮಾರನನ್ನು ಕೊಲ್ಲಲು ಹಿಡಿದುಕೊಡುವ ವ್ಯಕ್ತಿಯ ಸ್ಥಿತಿ ಬಹಳ ಭೀಕರವಾಗಿರುತ್ತದೆ. ಅವನು ಹುಟ್ಟದೇ ಇದ್ದಿದ್ದರೆ ಅವನಿಗೆ ಒಳ್ಳೆಯದಾಗುತ್ತಿತ್ತು” ಎಂದನು.


ನಂತರ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಅದನ್ನು ತನ್ನ ಶಿಷ್ಯರಿಗೆ ಕೊಟ್ಟನು. ಶಿಷ್ಯರೆಲ್ಲರೂ ಅದರಲ್ಲಿ ಕುಡಿದರು.


ಬಳಿಕ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರ ಮಾಡಿದನು. ಬಳಿಕ ಆತನು, “ಈ ಪಾತ್ರೆಯಲ್ಲಿರುವ ದ್ರಾಕ್ಷಾರಸವನ್ನು ನೀವೆಲ್ಲರೂ ಹಂಚಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು