Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:28 - ಪರಿಶುದ್ದ ಬೈಬಲ್‌

28 ಆದರೆ ನಾನು ಸತ್ತು ಪುನರುತ್ಥಾನ ಹೊಂದಿದ ಮೇಲೆ ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದರೂ ನಾನು ಸತ್ತು ಜೀವಿತನಾಗಿ ಎದ್ದಮೇಲೆ ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಾನಾದರೋ, ಪುನರುತ್ಥಾನಹೊಂದಿ ನಿಮಗಿಂತ ಮುಂದಾಗಿ ಗಲಿಲೇಯಕ್ಕೆ ಹೋಗುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದಾಗ್ಯೂ ನಾನು ಜೀವಿತನಾಗಿ ಎದ್ದ ಮೇಲೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 “ಖರೆ ಮಿಯಾ ಮರುನ್ ದೆವಾನ್ ಮಾಕಾ ಝಿತ್ತೊ ಕರುನ್ ಉಟ್ವಲ್ಲ್ಯಾ ತನ್ನಾ ಮಿಯಾ ತುಮ್ಚ್ಯೆನ್ಕಿ ಅದ್ದಿ ಗಾಲಿಲಿಯಾಕ್ ಜಾತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:28
9 ತಿಳಿವುಗಳ ಹೋಲಿಕೆ  

ಈಗ ಹೋಗಿ ಆತನ ಶಿಷ್ಯರಿಗೆ ತಿಳಿಸಿರಿ. ಪೇತ್ರನಿಗಂತೂ ಖಂಡಿತವಾಗಿ ತಿಳಿಸಿರಿ. ನೀವು ಅವರಿಗೆ, ‘ಯೇಸು ಗಲಿಲಾಯಕ್ಕೆ ಹೋಗುತ್ತಿದ್ದಾನೆ. ಆತನು ನಿಮಗಿಂತ ಮುಂಚೆ ಅಲ್ಲಿರುತ್ತಾನೆ. ಆತನು ನಿಮಗೆ ಮೊದಲೇ ಹೇಳಿದಂತೆ ನೀವು ಆತನನ್ನು ಅಲ್ಲಿ ನೋಡುವಿರಿ’ ಎಂದು ಹೇಳಿರಿ” ಎಂದನು.


ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೊರಟು ಯೇಸು ತಿಳಿಸಿದ್ದ ಬೆಟ್ಟಕ್ಕೆ ಬಂದರು.


ಯೇಸು ಆ ಸ್ತ್ರೀಯರಿಗೆ, “ಹೆದರಬೇಡಿ, ನನ್ನ ಸಹೋದರರ ಬಳಿಗೆ ಹೋಗಿ ಗಲಿಲಾಯಕ್ಕೆ ಬರಲು ತಿಳಿಸಿರಿ. ಅವರು ನನ್ನನ್ನು ಅಲ್ಲಿ ಕಾಣುವರು” ಎಂದು ಹೇಳಿದನು.


ಬೇಗನೆ ಹೋಗಿ ಆತನ ಶಿಷ್ಯರಿಗೆ, ‘ಯೇಸು ಪುನರುತ್ಥಾನ ಹೊಂದಿದ್ದಾನೆ. ಆತನು ಗಲಿಲಾಯಕ್ಕೆ ಹೋಗುತ್ತಿದ್ದಾನೆ. ನಿಮಗಿಂತ ಮುಂಚೆಯೇ ಆತನು ಅಲ್ಲಿರುತ್ತಾನೆ. ನೀವು ಆತನನ್ನು ಅಲ್ಲಿ ನೋಡುತ್ತೀರಿ’ ಎಂದು ಹೇಳಿರಿ. ನಾನು ನಿಮಗೆ ತಿಳಿಸಬೇಕಾದ ಸಮಾಚಾರ ಇದೇ, ಮರೆಯದಿರಿ” ಎಂದನು.


ಆದರೆ ನಾನು ಸತ್ತಮೇಲೆ ಜೀವಂತನಾಗಿ ಎದ್ದುಬರುವೆನು. ನಂತರ ನಾನು ಗಲಿಲಾಯಕ್ಕೆ ಹೋಗುವೆನು. ನೀವು ಅಲ್ಲಿಗೆ ಹೋಗುವುದಕ್ಕಿಂತ ಮುಂಚೆಯೇ ನಾನು ಅಲ್ಲಿರುವೆನು” ಎಂದು ಹೇಳಿದನು.


ತರುವಾಯ, ಯೇಸು ತನ್ನ ಶಿಷ್ಯರಿಗೆ ತಿಬೇರಿಯ (ಗಲಿಲಾಯ) ಸರೋವರದ ಬಳಿ ಕಾಣಿಸಿಕೊಂಡನು. ಅದು ಹೀಗೆ ನಡೆಯಿತು:


ಆ ಸಮಯದಲ್ಲಿ ಯೇಸು ತಾನು ಜೆರುಸಲೇಮಿಗೆ ಹೋಗಬೇಕೆಂದು ಮತ್ತು ಅಲ್ಲಿ ಯೆಹೂದ್ಯರ ಹಿರಿಯ ನಾಯಕರಿಂದಲೂ ಮಹಾಯಾಜಕರಿಂದಲೂ ಮತ್ತು ಧರ್ಮೋಪದೇಶಕರಿಂದಲೂ ತಾನು ಅನೇಕ ಕಷ್ಟಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಜೀವಂತವಾಗಿ ಎದ್ದುಬರಬೇಕಾಗಿದೆ ಎಂದು ತನ್ನ ಶಿಷ್ಯರಿಗೆ ವಿವರಿಸಿ ಹೇಳಿದನು.


ಪೇತ್ರನು, “ಉಳಿದ ಶಿಷ್ಯರೆಲ್ಲರು ಭಯಗೊಂಡು ಹಿಂಜರಿದರೂ ನಾನು ಹಿಂಜರಿಯುವುದಿಲ್ಲ” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು