ಮಾರ್ಕ 14:3 - ಪರಿಶುದ್ದ ಬೈಬಲ್3 ಬೆಥಾನಿಯದಲ್ಲಿ ಯೇಸು ಕುಷ್ಠರೋಗಿ ಸಿಮೋನನ ಮನೆಯಲ್ಲಿ ಊಟಮಾಡುತ್ತಿದ್ದಾಗ ಸ್ತ್ರೀಯೊಬ್ಬಳು ಆತನ ಬಳಿಗೆ ಬಂದಳು. ಆಕೆಯ ಬಳಿ ಅತ್ಯಂತ ಬೆಲೆಬಾಳುವ ಪರಿಮಳದ್ರವ್ಯದ ಭರಣಿ ಇತ್ತು. ಈ ಪರಿಮಳದ್ರವ್ಯವನ್ನು ಶುದ್ಧವಾದ ನಾರ್ಡ್ ತೈಲದಿಂದ ಮಾಡಲಾಗಿತ್ತು. ಆ ಸ್ತ್ರೀಯು ಭರಣಿಯನ್ನು ತೆರೆದು, ಆ ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನು ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಯೇಸುಸ್ವಾಮಿ ಬೆಥಾನಿಯದಲ್ಲಿ, ಕುಷ್ಠರೋಗಿ ಸಿಮೋನನ ಮನೆಯಲ್ಲಿ ಇದ್ದರು. ಅಲ್ಲಿ ಊಟಕ್ಕೆ ಕುಳಿತಿದ್ದಾಗ, ಮಹಿಳೆಯೊಬ್ಬಳು ಅಮೃತಶಿಲೆಯ ಭರಣಿಯ ತುಂಬ ಅತ್ಯಮೂಲ್ಯವಾದ ಜಟಮಾಂಸಿ ಸುಗಂಧತೈಲವನ್ನು ತೆಗೆದುಕೊಂಡು ಬಂದು, ಭರಣಿಯನ್ನು ಒಡೆದು, ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆತನು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಇದ್ದು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಆ ಭರಣಿಯನ್ನು ಒಡೆದು ತೈಲವನ್ನು ಆತನ ತಲೆಯ ಮೇಲೆ ಹೊಯಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ಮೂಲಿಕೆಯ ಸುಗಂಧ ತೈಲದ ಭರಣಿಯನ್ನು ತೆಗೆದುಕೊಂಡು ಬಂದು, ಅದನ್ನು ಒಡೆದು, ಯೇಸುವಿನ ತಲೆಯ ಮೇಲೆ ಸುರಿಸಿದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಬೆಥನಿ ಮನ್ತಲ್ಯಾ ಗಾಂವಾತ್ ಎಕ್ ಕಾಲಾತ್ ಕುಸ್ಟ್ ರೊಗ್ ಲಾಗ್ಲುನ್ ಗುನ್ ಹೊಲ್ಲ್ಯಾ ಸಿಮಾವಾಚ್ಯಾ ಘರಾತ್ ಜೆಜು ಜೆವಾನ್ ಕರುಕ್ ಲಾಗಲ್ಲೊ, ತನ್ನಾ ಲೈ ಮ್ಹಾಗ್ರೆ ಬರ್‍ಯಾ ವಾಸೆಚೆ ತೆಲ್ ಘೆವ್ನ್ ಎಕ್ ಬಾಯ್ಕೊಮನುಸ್ ಥೈ ಯೆಲಿ, ಅನಿ ಭರ್‍ನಿ ಉಗ್ಡುನ್ ತೆ ಸುಗಂದ್ತೆಲ್ ಜೆಜುಚ್ಯಾ ಟಕ್ಲ್ಯಾ ವರ್‍ತಿ ವೊತ್ಲಿನ್. ಅಧ್ಯಾಯವನ್ನು ನೋಡಿ |