ಮಾರ್ಕ 14:41 - ಪರಿಶುದ್ದ ಬೈಬಲ್41 ಯೇಸು ಮೂರನೆಯ ಸಾರಿ ಪ್ರಾರ್ಥಿಸಿದ ಮೇಲೆ, ತನ್ನ ಶಿಷ್ಯರ ಬಳಿಗೆ ಹಿಂತಿರುಗಿ, “ನೀವು ಇನ್ನೂ ನಿದ್ರಿಸುತ್ತಾ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೀರಾ? ಪಾಪಿಗಳ ಕೈಗೆ ಮನುಷ್ಯಕುಮಾರನನ್ನು ಒಪ್ಪಿಸುವ ಸಮಯ ಬಂದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಆತನು ಮೂರನೆಯ ಸಾರಿ ಅವರ ಬಳಿಗೆ ಬಂದು, “ನೀವು ಇನ್ನು ನಿದ್ರಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವಿರಾ? ಸಾಕು, ಆ ಗಳಿಗೆ ಸಮೀಪಿಸಿದೆ; ಮನುಷ್ಯಕುಮಾರನು ಪಾಪಿಗಳ ಕೈಗೆ ಒಪ್ಪಿಸಲ್ಪಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಯೇಸು ಮೂರನೆಯ ಸಾರಿ ಅವರ ಬಳಿಗೆ ಬಂದು, “ನೀವು ಇನ್ನೂ ನಿದ್ರಿಸಿ ವಿಶ್ರಮಿಸುತ್ತಿರುವಿರಾ? ಸಾಕು, ಸಮಯವು ಸಮೀಪಿಸಿತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಆತನು ಮೂರನೆಯ ಸಾರಿ ಹೋಗಿ ಬಂದು ಅವರಿಗೆ - ನೀವು ಇನ್ನೂ ನಿದ್ದೆಮಾಡಿ ದಣುವಾರಿಸಿಕೊಳ್ಳಿರಿ; ಸಾಕು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಯೇಸು ಮೂರನೆಯ ಸಾರಿ ಬಂದು ಅವರಿಗೆ, “ಇನ್ನೂ ವಿಶ್ರಮಿಸುತ್ತಿದ್ದೀರಾ? ಸಾಕು! ಸಮಯವು ಸಮೀಪಿಸಿದೆ; ಮನುಷ್ಯಪುತ್ರನಾದ ನಾನು ಪಾಪಿಗಳ ಕೈವಶವಾಗಲಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ತೊ ತಿನ್ವೆ ಫಾಟಿ ಪರ್ತುನ್ ತೆಂಚೆಕ್ಡೆ ಯೆವ್ನ್ “ತುಮಿ ಅಜುನ್ಬಿ ನಿಜುನ್ ಆರಾಮ್ ಘೆವ್ಲ್ಯಾಶಿ? ಫಿರೆ, ಮಾನ್ಸಾಚ್ಯಾ ಲೆಕಾಕ್ ಧರುನ್ ಪಾಪಿ ಲೊಕಾಂಚ್ಯಾ ಹಾತಾತ್ನಿ ದಿತಲೊ ಎಳ್ ಯೆಲೊ. ಅಧ್ಯಾಯವನ್ನು ನೋಡಿ |
ಎಲೀಷನು ಇಸ್ರೇಲಿನ ರಾಜನಿಗೆ, “ನನ್ನಿಂದ ನಿನಗೆ ಏನು ಬೇಕಾಗಿದೆ? ನಿನ್ನ ತಂದೆತಾಯಿಯರ ಪ್ರವಾದಿಗಳ ಬಳಿಗೆ ಹೋಗು!” ಎಂದು ಹೇಳಿದನು. ಇಸ್ರೇಲಿನ ರಾಜನು ಎಲೀಷನಿಗೆ, “ಇಲ್ಲ, ನಾವು ನಿನ್ನನ್ನು ನೋಡಲೆಂದು ಇಲ್ಲಿಗೆ ಬಂದಿದ್ದೇವೆ, ಏಕೆಂದರೆ ಯೆಹೋವನು ಮೂವರು ರಾಜರನ್ನು ಒಟ್ಟಿಗೆ ಬರಮಾಡಿ, ನಮ್ಮನ್ನು ಮೋವಾಬ್ಯರು ಸೋಲಿಸುವಂತೆ ಮಾಡಿದ್ದಾನೆ. ನಾವು ನಿನ್ನ ಸಹಾಯವನ್ನು ಬಯಸಿದ್ದೇವೆ” ಎಂದನು.
ನಂತರ ರಾಜನಾದ ಅಹಾಬನ ಎದುರಿನಲ್ಲಿ ಮೀಕಾಯೆಹು ನಿಂತುಕೊಂಡನು. ರಾಜನು ಅವನನ್ನು, “ಮೀಕಾಯೆಹುವೇ, ರಾಜನಾದ ಯೆಹೋಷಾಫಾಟನು ಮತ್ತು ನಾನು ನಮ್ಮ ಸೈನ್ಯಗಳನ್ನು ಒಟ್ಟುಗೂಡಿಸಬಹುದೇ? ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ನಾವೀಗ ಹೋಗಬೇಕೇ?” ಎಂದು ಕೇಳಿದನು. ಮೀಕಾಯೆಹು, “ಆಗಲಿ, ಈಗ ನೀವು ಹೋಗಿ, ಅವರ ವಿರುದ್ಧ ಯುದ್ಧಮಾಡಿ. ಯೆಹೋವನು ನಿಮಗೆ ಜಯವನ್ನು ಕೊಡುತ್ತಾನೆ” ಎಂದನು.
ಮಧ್ಯಾಹ್ನವಾದಾಗ ಎಲೀಯನು ಅವರನ್ನು ಅಪಹಾಸ್ಯ ಮಾಡಲಾರಂಭಿಸಿದನು. ಎಲೀಯನು, “ಬಾಳನು ನಿಜವಾದ ದೇವರಾಗಿದ್ದರೆ, ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ! ಬಹುಶಃ ಅವನು ಯೋಚನಾನಿರತನಾಗಿರಬಹುದು! ಅಥವಾ ಕಾರ್ಯನಿರತನಾಗಿರಬಹುದು! ಅಥವಾ ಸಂಚಾರನಿರತನಾಗಿರಬಹುದು! ಅಥವಾ ನಿದ್ರಾಮಗ್ನನಾಗಿರಬಹುದು! ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ, ಅವನನ್ನು ಎಚ್ಚರಗೊಳಿಸಿ!” ಎಂದು ಹೇಳಿದನು.