ಮಾರ್ಕ 14:45 - ಪರಿಶುದ್ದ ಬೈಬಲ್45 ಆದ್ದರಿಂದ ಯೂದನು ಯೇಸುವಿನ ಬಳಿಗೆ ಹೋಗಿ, “ಗುರುವೇ!” ಎಂದು ಹೇಳಿ ಯೇಸುವಿಗೆ ಮುದ್ದಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಅದರಂತೆಯೇ ಯೂದನು ಅಲ್ಲಿಗೆ ಬಂದಕೂಡಲೇ ಅವನು ಯೇಸುವಿನ ಬಳಿಗೆ ಹೋಗಿ, “ಗುರುವೇ” ಎಂದು ಹೇಳಿ ಆತನಿಗೆ ಮುದ್ದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಅದರಂತೆಯೇ ಅವನು ಅಲ್ಲಿಗೆ ಬಂದಕೂಡಲೆ ಯೇಸುವಿನ ಹತ್ತಿರಕ್ಕೆ ನೇರವಾಗಿ ಹೋಗಿ, ‘ಗುರುದೇವಾ’, ಎಂದು ಹೇಳುತ್ತಾ ಅವರಿಗೆ ಮುದ್ದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಅಲ್ಲಿಗೆ ಬಂದ ಕೂಡಲೆ ಅವನು ಯೇಸುವಿನ ಬಳಿಗೆ ಹೋಗಿ - ಗುರುವೇ ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಯೂದನು ಬಂದ ಕೂಡಲೇ ನೇರವಾಗಿ ಯೇಸುವಿನ ಕಡೆಗೆ ಹೋಗಿ, “ಗುರುವೇ,” ಎಂದು ಹೇಳಿ ಅವರಿಗೆ ಮುದ್ದಿಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ಯೆಲ್ಲ್ಯಾ ತನ್ನಾಚ್ ಜುದಾಸ್ ಜೆಜುಕ್ಡೆ ಗೆಲೊ ಅನಿ ಗುರುಜಿ! ಮಟ್ಲ್ಯಾನ್ ಅನಿ ಜೆಜುಚಿ ಉಪ್ಪಾ ಘೆಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಫರಿಸಾಯರು ಮತ್ತು ಹೆರೋದ್ಯರು ಯೇಸುವಿನ ಬಳಿಗೆ ಬಂದು, ಆತನಿಗೆ, “ಉಪದೇಶಕನೇ, ನೀನು ಯಥಾರ್ಥನೆಂಬುದು ನಮಗೆ ತಿಳಿದಿದೆ. ನಿನ್ನ ಬಗ್ಗೆ ಜನರು ಏನು ಯೋಚಿಸುತ್ತಾರೆಂಬುದರ ಬಗ್ಗೆ ನಿನಗೆ ಹೆದರಿಕೆಯಿಲ್ಲ. ಜನರೆಲ್ಲರೂ ನಿನಗೆ ಒಂದೇ. ಮತ್ತು ನೀನು ದೇವರ ಮಾರ್ಗವನ್ನು ಕುರಿತು ಸತ್ಯವನ್ನೇ ಉಪದೇಶಿಸುತ್ತಿರುವೆ ಎಂದು ನಮಗೆ ಗೊತ್ತಿದೆ. ಆದ್ದರಿಂದ ನಮಗೆ ಹೇಳು: ಸೀಸರನಿಗೆ ತೆರಿಗೆ ಕೊಡುವುದು ಸರಿಯೋ? ಅಥವಾ ತಪ್ಪೋ? ನಾವು ತೆರಿಗೆಗಳನ್ನು ಕೊಡಬೇಕೇ ಅಥವಾ ಕೊಡಬಾರದೇ?” ಎಂದರು.
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.