Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:57 - ಪರಿಶುದ್ದ ಬೈಬಲ್‌

57 ನಂತರ ಕೆಲವು ಜನರು ನಿಂತುಕೊಂಡು, ಯೇಸುವಿನ ವಿರುದ್ಧ ಕೆಲವು ಅಪವಾದಗಳನ್ನು ಹೊರಿಸುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57-58 ತರುವಾಯ ಕೆಲವರು ಎದ್ದು ನಿಂತು, “‘ಇವನು ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದು ಆಲಯವನ್ನು ಮೂರು ದಿನಗಳಲ್ಲಿ ಕಟ್ಟುವೆನು’ ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ” ಎಂಬುದಾಗಿ ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

57-58 ಕೆಲವರು ಎದ್ದುನಿಂತು, “ ‘ಕೈಗಳಿಂದ ಕಟ್ಟಿರುವ ಈ ಮಹಾದೇವಾಲಯವನ್ನು ನಾನು ಕೆಡವಿ, ಕೈಗಳಿಂದ ಕಟ್ಟದ ಇನ್ನೊಂದನ್ನು ಮೂರು ದಿನಗಳಲ್ಲಿ ನಿರ್ಮಿಸುತ್ತೇನೆ,’ ಎಂದು ಇವನು ಹೇಳಿದ್ದನ್ನು ಕೇಳಿದ್ದೇವೆ,” ಎಂಬುದಾಗಿ ಸುಳ್ಳುಸಾಕ್ಷಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57-58 ತರುವಾಯ ಕೆಲವರು ಎದ್ದು ನಿಂತು - ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು ಎಂದು ಇವನು ಹೇಳಿದ್ದನ್ನು ನಾವು ಕೇಳಿದ್ದೇವೆ ಎಂಬದಾಗಿ ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ತರುವಾಯ ಕೆಲವರು ಎದ್ದು ಯೇಸುವಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

57 ಮಾನಾ ಎಕ್ ಉಲ್ಲಿ ಲೊಕಾ ಇಬೆ ರ್‍ಹಾವ್ನ್ ಜೆಜುಚ್ಯಾ ವಿರೊದ್ ಝುಟೆ ಸಾಂಗುಕ್ ಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:57
9 ತಿಳಿವುಗಳ ಹೋಲಿಕೆ  

ಅಲ್ಲಿ ನಡೆದುಹೋಗುತ್ತಿದ್ದವರು ತಮ್ಮ ತಲೆಯಾಡಿಸುತ್ತಾ, “ನೀನು ದೇವಾಲಯವನ್ನು ಕೆಡವಿ, ಅದನ್ನು ಮತ್ತೆ ಮೂರು ದಿನಗಳಲ್ಲಿ ಕಟ್ಟುತ್ತೇನೆಂದು ಹೇಳಿದೆ.


“ನೀನು ದೇವಾಲಯವನ್ನು ಕೆಡವಿ, ಅದನ್ನು ಮತ್ತೆ ಮೂರು ದಿನಗಳಲ್ಲಿ ನಿರ್ಮಿಸುತ್ತೇನೆಂದು ಹೇಳುತ್ತಿದ್ದೆ. ಆದರೆ ಈಗ ನಿನ್ನನ್ನು ನೀನೇ ರಕ್ಷಿಸಿಕೊ! ನೀನು ನಿಜವಾಗಿಯೂ ದೇವರ ಮಗನಾಗಿದ್ದರೆ, ಶಿಲುಬೆಯಿಂದ ಕೆಳಗಿಳಿದು ಬಾ!” ಎಂದು ಹಾಸ್ಯಮಾಡಿದರು.


ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’


ಅನೇಕ ಜನರು ಬಂದು, ಯೇಸುವಿನ ವಿರುದ್ಧ ಸುಳ್ಳು ಸಂಗತಿಗಳನ್ನು ಹೇಳಿದರು. ಆದರೆ ಅವರೆಲ್ಲರು ಒಂದಕ್ಕೊಂದು ಹೊಂದಾಣಿಕೆಯಾಗದಂತಹ ಬೇರೆಬೇರೆ ಸಂಗತಿಗಳನ್ನು ಹೇಳಿದರು.


“ಈ ಮನುಷ್ಯನು, ‘ಕೈಯಿಂದ ಕಟ್ಟಿದ ಈ ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕೈಯಿಂದ ಕಟ್ಟಿಲ್ಲದ ಇನ್ನೊಂದು ದೇವಾಲಯವನ್ನು ಕಟ್ಟುತ್ತೇನೆ’ ಎಂದು ಹೇಳಿದ್ದನ್ನು ನಾವು ಕೇಳಿದೆವು” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು