Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:67 - ಪರಿಶುದ್ದ ಬೈಬಲ್‌

67 ಪೇತ್ರನು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಅವಳು ಕಂಡು, ಪೇತ್ರನನ್ನು ಹತ್ತಿರದಿಂದ ದಿಟ್ಟಿಸಿ ನೋಡಿ, “ನೀನು ನಜರೇತಿನವನಾದ ಯೇಸುವಿನ ಜೊತೆ ಇದ್ದವನಲ್ಲವೇ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

67 ಅವನನ್ನು ದೃಷ್ಟಿಸಿ ನೋಡಿ, “ನೀನು ಸಹ ಆ ನಜರೇತಿನ ಯೇಸುವಿನೊಂದಿಗೆ ಇದ್ದವನು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

67 ಚಳಿಕಾಯಿಸಿಕೊಳ್ಳುತ್ತಿದ್ದ ಪೇತ್ರನನ್ನು ಆಕೆ ದಿಟ್ಟಿಸಿ ನೋಡಿ, “ನೀನು ಸಹ ಆ ನಜರೇತಿನ ಯೇಸುವಿನ ಸಂಗಡ ಇದ್ದವನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

67 ಅವನು ಚಳಿಕಾಯಿಸಿಕೊಳ್ಳುತ್ತಿರುವದನ್ನು ಕಂಡು ಅವನನ್ನು ನೋಡಿ - ನೀನು ಸಹ ಆ ನಜರೇತಿನವನಾದ ಯೇಸುವಿನ ಕೂಡ ಇದ್ದವನು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

67 ಪೇತ್ರನು ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಆಕೆಯು ಕಂಡು ಅವನನ್ನು ದೃಷ್ಟಿಸಿ ನೋಡಿ, “ನೀನು ಸಹ ಆ ನಜರೇತಿನ ಯೇಸುವಿನೊಂದಿಗೆ ಇದ್ದವನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

67 ತೆನಿ ಪೆದ್ರು ಆಗಿಕ್ಡೆ ಬಸುನ್ ಆಗ್ ಶೆಕ್ತಲೆ ಬಗಟ್ಲಿನ್,ತೆನಿ ಬರೆ ಕರುನ್ ಪೆದ್ರುಕ್ ಬಗುನ್ “ತಿಯಾಬಿ ನಜರೆತಾಚ್ಯಾ ಜೆಜುಚ್ಯಾ ವಾಂಗ್ಡಾ ಹೊತ್ತೆ ನ್ಹಯ್?” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:67
9 ತಿಳಿವುಗಳ ಹೋಲಿಕೆ  

ಪೇತ್ರನು ಯೇಸುವನ್ನು ದೂರದಲ್ಲಿ ಹಿಂಬಾಲಿಸುತ್ತಾ ಪ್ರಧಾನಯಾಜಕನ ಮನೆಯ ಅಂಗಳದೊಳಕ್ಕೆ ಹೋಗಿ, ಕಾವಲುಗಾರರೊಡನೆ ಕುಳಿತುಕೊಂಡು ಬೆಂಕಿಯಿಂದ ಚಳಿಕಾಯಿಸಿಕೊಳ್ಳತೊಡಗಿದನು.


ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.


ಪಿಲಾತನು ಒಂದು ಫಲಕವನ್ನು ಬರೆದು ಶಿಲುಬೆಯ ಮೇಲೆ ಹಚ್ಚಿದನು. ಆ ಫಲಕದಲ್ಲಿ, “ನಜರೇತಿನ ಯೇಸು, ಯೆಹೂದ್ಯರ ರಾಜನು” ಎಂದು ಬರೆದಿತ್ತು.


ನಜರೇತಿನ ಯೇಸು ಆ ಮಾರ್ಗವಾಗಿ ಹೋಗುತ್ತಿದ್ದಾನೆಂದು ಅವನು ಕೇಳಿ, “ಯೇಸುವೇ, ದಾವೀದನ ಕುಮಾರನೇ, ದಯವಿಟ್ಟು ನನ್ನನ್ನು ಕರುಣಿಸು!” ಎಂದು ಗಟ್ಟಿಯಾಗಿ ಕೂಗಿದನು.


“ನಜರೇತಿನ ಯೇಸುವೇ! ನಮ್ಮಿಂದ ನಿನಗೆ ಏನಾಗಬೇಕಾಗಿದೆ? ನಮ್ಮನ್ನು ನಾಶಗೊಳಿಸಲು ಬಂದಿರುವೆಯಾ? ನೀನು ದೇವರಿಂದ ಬಂದ ಪರಿಶುದ್ಧನೆಂದು ನನಗೆ ಗೊತ್ತಿದೆ!” ಎಂದು ಕೂಗಿಕೊಂಡನು.


ಯೇಸುವನ್ನು ಹಿಂಬಾಲಿಸುತ್ತಿದ್ದ ಅನೇಕ ಜನರು, “ಈತನೇ ಯೇಸು. ಈತನು ಗಲಿಲಾಯ ಪ್ರಾಂತ್ಯದಲ್ಲಿರುವ ನಜರೇತ್ ಎಂಬ ಊರಿನ ಪ್ರವಾದಿ” ಎಂದು ಉತ್ತರಕೊಟ್ಟರು.


ನಜರೇತ್ ಎಂಬ ಊರಲ್ಲಿ ವಾಸಿಸಿದನು. “ಕ್ರಿಸ್ತನನ್ನು ‘ನಜರೇತಿನವನು’ ಎಂದು ಕರೆಯುತ್ತಾರೆ” ಎಂದು ದೇವರು ಪ್ರವಾದಿಗಳ ಮೂಲಕ ಹೇಳಿದ್ದು ಹೀಗೆ ನೆರವೇರಿತು.


ಆಗ ಚಳಿಯಿದ್ದುದರಿಂದ ಕಾವಲುಗಾರರು ಬೆಂಕಿ ಹಾಕಿ ಅದರ ಸುತ್ತಲೂ ನಿಂತುಕೊಂಡು ತಮ್ಮನ್ನು ಬೆಚ್ಚಗೆ ಮಾಡಿಕೊಳ್ಳುತ್ತಿದ್ದರು. ಪೇತ್ರನು ಅವರೊಂದಿಗೆ ನಿಂತುಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು