1 ಮುಂಜಾನೆ ನಸುಕಿನಲ್ಲೇ, ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಧರ್ಮೋಪದೇಶಕರು ಮತ್ತು ಯೆಹೂದ್ಯ ಸಮಿತಿಯವರು ಸಭೆಸೇರಿ ಯೇಸುವಿಗೆ ಮಾಡಬೇಕಾದದ್ದನ್ನು ನಿರ್ಧರಿಸಿದರು. ಅವರು ಯೇಸುವನ್ನು ಬಂಧಿಸಿ, ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದುಕೊಂಡು ಹೋಗಿ ಅವನಿಗೆ ಒಪ್ಪಿಸಿದರು.
1 ಬೆಳಗಾದ ಕೂಡಲೆ, ಮುಖ್ಯಯಾಜಕರೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಹಾಗು ನ್ಯಾಯಸಭೆಯ ಇತರ ಸದಸ್ಯರೂ ಒಟ್ಟುಗೂಡಿ ಸಮಾಲೋಚನೆ ನಡೆಸಿದರು. ಯೇಸುಸ್ವಾಮಿಗೆ ಬೇಡಿಹಾಕಿ ಪಿಲಾತನ ಬಳಿಗೆ ಕರೆದೊಯ್ದು ಆತನ ವಶಕ್ಕೊಪ್ಪಿಸಿದರು.
ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.
ಆದರೆ ನಾನು ನಿಮಗೆ ಹೇಳುವುದೇನೆಂದರೆ ಯಾರ ಮೇಲೂ ಕೋಪಗೊಳ್ಳಬೇಡಿ. ಪ್ರತಿಯೊಬ್ಬನೂ ನಿಮ್ಮ ಸಹೋದರ. ನೀವು ಬೇರೆಯವರ ಮೇಲೆ ಕೋಪಗೊಂಡರೆ ನ್ಯಾಯತೀರ್ಪಿಗೆ ಗುರಿಯಾಗುವಿರಿ. ನೀವು ಯಾರಿಗಾದರೂ ಕೆಟ್ಟ ಮಾತುಗಳನ್ನಾಡಿದರೆ, ಯೆಹೂದ್ಯರ ನ್ಯಾಯಸಭೆಯ ವಿಚಾರಣೆಗೆ ಗುರಿಯಾಗುವಿರಿ. ನೀವು ಯಾರನ್ನಾದರೂ ‘ಮೂರ್ಖ’ ಎಂದು ಕರೆದರೆ, ಅಗ್ನಿನರಕಕ್ಕೆ ಸೇರುವ ಅಪಾಯದಲ್ಲಿದ್ದೀರಿ.