Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:32 - ಪರಿಶುದ್ದ ಬೈಬಲ್‌

32 ಅವನು ನಿಜವಾಗಲೂ ಇಸ್ರೇಲರ ರಾಜನಾದ ಕ್ರಿಸ್ತನಾಗಿದ್ದರೆ, ಈಗ ಶಿಲುಬೆಯಿಂದ ಕೆಳಗಿಳಿದು ಬಂದು ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ. ಆಗ ನಾವು ಅವನನ್ನು ನಂಬುತ್ತೇವೆ” ಎಂದು ಅಪಹಾಸ್ಯ ಮಾಡಿದರು. ಯೇಸುವಿನ ಪಕ್ಕದ ಶಿಲುಬೆಗಳಿಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಆತನನ್ನು ಗೇಲಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದು ಬಂದರೆ ನಾವು ನೋಡಿ ನಂಬುತ್ತೇವೆ” ಎಂದು ತಮ್ಮತಮ್ಮೊಳಗೆ ಅಣಕಿಸುತ್ತಾ ಮಾತನಾಡುತ್ತಿದ್ದರು. ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಇಸ್ರಯೇಲರ ಅರಸನಾದ ಈ ಕ್ರಿಸ್ತನು ಶಿಲುಬೆಯಿಂದ ಇಳಿದುಬರಲಿ; ಆಗ ನೋಡಿ ನಂಬುತ್ತೇವೆ,” ಎಂದು ಪರಸ್ಪರ ಮಾತನಾಡಿಕೊಂಡರು. ಯೇಸುವಿನೊಡನೆ ಶಿಲುಬೆಗೇರಿಸಲಾಗಿದ್ದವರು ಸಹ ಅವರನ್ನು ಹಂಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇಸ್ರಾಯೇಲ್ಯರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದುಬಂದರೆ ನಾವು ನೋಡಿ ನಂಬೇವು ಎಂದು ತಮ್ಮತಮ್ಮೊಳಗೆ ಹಾಸ್ಯದಿಂದ ಮಾತಾಡುತ್ತಿದ್ದರು. ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ಕಂಡು ನಂಬುತ್ತೇವೆ,” ಎಂದು ತಮ್ಮಲ್ಲಿ ಪರಸ್ಪರ ಮಾತನಾಡಿಕೊಂಡರು. ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಗಿದ್ದವರೂ ಅವರನ್ನು ನಿಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಮೆಸ್ಸಿಯಾ, ಇಸ್ರಾಯೆಲಾಚೊ ರಾಜಾ ಅತ್ತಾ ಕುರ್ಸಾ ವೈನಾ ಉತ್ರುನ್ ಯೆಂವ್ದಿ ಬಗುವಾ, ತನ್ನಾ ತೆಚ್ಯಾ ವರ್‍ತಿ ಅಮಿ ವಿಶ್ವಾಸ್ ಥವ್ತಾವ್”. ಮಟ್ಲ್ಯಾನಿ, ಜೆಜುಚ್ಯಾ ಅಜು-ಬಾಜುಕ್ ಕುರ್ಸಾರ್ ಮಾರಲ್ಲ್ಯಾ ಚೊರಾನಿಬಿ ತಸೆಚ್ ಎಡ್ಸಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:32
16 ತಿಳಿವುಗಳ ಹೋಲಿಕೆ  

ಅದೇ ರೀತಿಯಲ್ಲಿ ಯೇಸುವಿನ ಎಡಬಲಗಳಲ್ಲಿ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಆತನನ್ನು ನಿಂದಿಸಿದರು.


ಅವರು ಸತ್ಯೋಪದೇಶವನ್ನು ತಿರಸ್ಕರಿಸಿದರು. ಎಲ್ಲಾ ಜನರಿಗೆ ಉಂಟಾಗುವ ಪುನರುತ್ಥಾನವು ಈಗಾಗಲೇ ಆಗಿ ಹೋಗಿದೆಯೆಂದು ಅವರು ಹೇಳುತ್ತಾರೆ. ಅವರಿಬ್ಬರು ಕೆಲವು ಜನರ ನಂಬಿಕೆಯನ್ನು ಹಾಳುಮಾಡುತ್ತಿದ್ದಾರೆ.


ಅಬ್ರಹಾಮನಿಂದಿಡಿದು ದಾವೀದನವರೆಗೆ ಹದಿನಾಲ್ಕು ತಲೆಮಾರುಗಳು. ದಾವೀದನಿಂದಿಡಿದು ಬಾಬಿಲೋನಿಗೆ ಸೆರೆಯೊಯ್ದ ಸಮಯದವರೆಗೆ ಹದಿನಾಲ್ಕು ತಲೆಮಾರುಗಳು. ಬಾಬಿಲೋನಿಗೆ ಸೆರೆಹಿಡಿದುಕೊಂಡು ಹೋದಂದಿನಿಂದ ಕ್ರಿಸ್ತನು ಹುಟ್ಟುವವರೆಗೆ ಹದಿನಾಲ್ಕು ತಲೆಮಾರುಗಳು.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ಯಾಕೆಂದರೆ ನಿನ್ನ ಯೆಹೋವನು ನಿನ್ನ ಶಿಕ್ಷೆಯನ್ನು ನಿಲ್ಲಿಸಿದ್ದಾನೆ. ನಿನ್ನ ವೈರಿಗಳ ಬಲವಾದ ಬುರುಜುಗಳನ್ನು ನಾಶಮಾಡಿದ್ದಾನೆ. ಇಸ್ರೇಲಿನ ರಾಜನೇ, ನಿನ್ನ ದೇವರು ನಿನ್ನೊಂದಿಗಿದ್ದಾನೆ. ನಿನಗೆ ಕೆಟ್ಟದ್ದು ಸಂಭವಿಸುತ್ತದೆಂದು ನೀನು ಚಿಂತಿಸದಿರು.


ಯೆಹೋವನು ಇಸ್ರೇಲರ ಅರಸನಾಗಿದ್ದಾನೆ. ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ರಕ್ಷಿಸುತ್ತಾನೆ. ಆತನು ಹೇಳುವುದೇನೆಂದರೆ: “ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.


ಕೆಲವು ಯೆಹೂದ್ಯರು ದೇವರಿಗೆ ನಂಬಿಗಸ್ತರಾಗಿರಲಿಲ್ಲ ಎಂಬುದೇನೊ ಸತ್ಯ. ಆದರೆ ದೇವರು ತಾನು ಮಾಡಿದ ವಾಗ್ದಾನವನ್ನು ನೆರವೇರಿಸದಂತೆ ಅದು ಮಾಡುತ್ತದೆಯೇ?


ಜನರು ಖರ್ಜೂರದ ಗರಿಗಳನ್ನು ತೆಗೆದುಕೊಂಡು ಯೇಸುವನ್ನು ಎದುರುಗೊಳ್ಳಲು ಹೋದರು. “ಆತನಿಗೆ ಸ್ತೋತ್ರವಾಗಲಿ! ‘ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ದೇವರಾಶೀರ್ವಾದವಾಗಲಿ!’ ಇಸ್ರೇಲ್ ರಾಜನಿಗೆ ದೇವರಾಶೀರ್ವಾದವಾಗಲಿ!” ಎಂದು ಜನರು ಕೂಗಿದರು.


ಆಗ ನತಾನಿಯೇಲನು ಯೇಸುವಿಗೆ, “ಗುರುವೇ, ನೀನೇ ದೇವರ ಮಗನು. ನೀನೇ ಇಸ್ರೇಲರ ರಾಜ” ಎಂದು ಹೇಳಿದನು.


ಯೇಸುವಿನ ವಿರುದ್ಧ ಮಾಡಲಾದ ಆಪಾದನೆಯನ್ನು ಅಂದರೆ “ಯೆಹೂದ್ಯರ ರಾಜ” ಎಂದು ಶಿಲುಬೆಯ ಮೇಲೆ ಬರೆಯಲಾಗಿತ್ತು.


“ಇವನು ಬೇರೆಯವರನ್ನು ರಕ್ಷಿಸಿದನು. ಆದರೆ ತನ್ನನ್ನು ರಕ್ಷಿಸಿಕೊಳ್ಳಲಾರ! ಇಸ್ರೇಲರ ರಾಜ ಎಂದು ಜನ ಹೇಳುತ್ತಾರೆ. ಇವನು ರಾಜನಾಗಿದ್ದರೆ ಶಿಲುಬೆಯಿಂದ ಕೆಳಗಿಳಿದು ಬರಲಿ. ಆಗ ನಾವು ಇವನನ್ನು ನಂಬುತ್ತೇವೆ.


ಅಲ್ಲದೆ ಅವರು ಯೇಸುವಿನ ಪಕ್ಕದಲ್ಲಿ ಇಬ್ಬರು ಕಳ್ಳರನ್ನು ಶಿಲುಬೆಗೆ ಹಾಕಿದರು. ಅವರು ಒಬ್ಬ ಕಳ್ಳನನ್ನು ಯೇಸುವಿನ ಬಲಗಡೆಯಲ್ಲಿಯೂ ಇನ್ನೊಬ್ಬ ಕಳ್ಳನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು