Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:39 - ಪರಿಶುದ್ದ ಬೈಬಲ್‌

39 ಶಿಲುಬೆಯ ಮುಂದೆ ನಿಂತಿದ್ದ ಸೈನ್ಯದ ಅಧಿಕಾರಿಯು ಯೇಸು ಪ್ರಾಣಬಿಟ್ಟಾಗ ನಡೆದದ್ದನ್ನು ನೋಡಿ, “ಈ ಮನುಷ್ಯನು ನಿಜವಾಗಿಯೂ ದೇವರ ಮಗನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರಿಗೆ ನಿಂತು ನೋಡುತ್ತಿದ್ದ ಶತಾಧಿಪತಿಯು, “ನಿಜವಾಗಿ ಈ ಮನುಷ್ಯನು ದೇವಕುಮಾರನೇ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರುನಿಂತು ನೋಡುತ್ತಿದ್ದ ಶತಾಧಿಪತಿ, “ಸತ್ಯವಾಗಿಯೂ ಈ ಮನುಷ್ಯ ದೇವರ ಪುತ್ರ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆತನು ಹೀಗೆ ಪ್ರಾಣಬಿಟ್ಟದ್ದನ್ನು ಆತನ ಹತ್ತಿರ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ - ನಿಜವಾಗಿ ಈ ಮನುಷ್ಯನು ದೇವಕುಮಾರನಾಗಿದ್ದನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಯೇಸು ಹೀಗೆ ಕೂಗಿ ಪ್ರಾಣಬಿಟ್ಟಿದ್ದನ್ನು ಅವರ ಎದುರಿಗೆ ನಿಂತಿದ್ದ ಶತಾಧಿಪತಿಯು ಕಂಡು, “ನಿಜವಾಗಿಯೂ ಈ ಮನುಷ್ಯನು ದೇವಪುತ್ರ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತನ್ನಾ ಕುರ್ಸಾಚ್ಯಾ ಫಿಡ್ಯಾತ್ ಇಬೆ ಹೊತ್ತ್ಯಾ ಸೈನಿಕಾಂಚ್ಯಾ ತಾಂಡ್ಯಾಚ್ಯಾ ಮುಖಂಡಾನ್ ಜೆಜು ಜಿವ್ ಸೊಡ್ತಾನಾ ಕಾಯ್-ಕಾಯ್ ಹೊಲ್ಲೆ ಬಗುನ್ “ಹ್ಯೊ ಮಾನುಸ್ ಖರೆಚ್ ದೆವಾಚೊ ಲೆಕ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:39
8 ತಿಳಿವುಗಳ ಹೋಲಿಕೆ  

ಯೇಸುವನ್ನು ಕಾಯುತ್ತಿದ್ದ ಸೇನಾಧಿಪತಿ ಮತ್ತು ಸೈನಿಕರು ಭೂಕಂಪವನ್ನು ಮತ್ತು ನಡೆದದ್ದನ್ನು ಕಂಡು ಬಹಳವಾಗಿ ಹೆದರಿ, “ಈತನು ನಿಜವಾಗಿಯೂ ದೇವರ ಮಗನಾಗಿದ್ದನು!” ಎಂದು ಹೇಳಿದರು.


ಇವನು ದೇವರನ್ನು ನಂಬಿದ್ದನು. ಈಗ ದೇವರಿಗೆ ನಿಜವಾಗಿಯೂ ಇವನು ಬೇಕಿದ್ದರೆ, ದೇವರೇ ಇವನನ್ನು ಕಾಪಾಡಲಿ. ‘ನಾನು ದೇವರ ಮಗನು’ ಎಂದು ಇವನೇ ಹೇಳಿಕೊಂಡನಲ್ಲಾ” ಎಂದು ಅವರು ಹೇಳಿದರು.


ಸೆಜರೇಯ ಪಟ್ಟಣದಲ್ಲಿ ಕೊರ್ನೇಲಿಯ ಎಂಬವನಿದ್ದನು. ರೋಮಿನ ಸೈನ್ಯಕ್ಕೆ ಸೇರಿದ “ಇಟಲಿಯ ದಳ”ದಲ್ಲಿ ಅವನು ಅಧಿಕಾರಿಯಾಗಿದ್ದನು.


ಆದರೆ ಸೇನಾಧಿಕಾರಿಯಾದ ಜೂಲಿಯಸನು ಪೌಲನನ್ನು ಉಳಿಸಲಪೇಕ್ಷಿಸಿ ಕೈದಿಗಳನ್ನು ಕೊಲ್ಲಲು ಸೈನಿಕರಿಗೆ ಅಪ್ಪಣೆ ಕೊಡಲಿಲ್ಲ. ಈಜು ಬಲ್ಲವರೆಲ್ಲರು ನೀರಿಗೆ ಧುಮುಕಿ ಈಜಿಕೊಂಡು ದಡಕ್ಕೆ ಹೋಗಬೇಕೆಂದು ಜೂಲಿಯಸನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು