ಮಾರ್ಕ 15:43 - ಪರಿಶುದ್ದ ಬೈಬಲ್43 ಅರಿಮಥಾಯ ಊರಿನ ಯೋಸೇಫ ಎಂಬವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಧೈರ್ಯದಿಂದ ಕೇಳಿದನು. ಯೋಸೇಫನು ಯೆಹೂದ್ಯರ ಸಮಿತಿಯಲ್ಲಿ ಒಬ್ಬ ಮುಖ್ಯ ಸದಸ್ಯನಾಗಿದ್ದನು. ದೇವರರಾಜ್ಯ ಬರಲೆಂದು ಬಯಸಿದ ಜನರಲ್ಲಿ ಇವನೂ ಒಬ್ಬನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬುವನು ಅಲ್ಲಿಗೆ ಬಂದನು. ಅವನು ಯೆಹೂದ್ಯರ ಹಿರೀಸಭೆಯ ಗೌರವಸ್ಥನಾದ ಸದ್ಯಸನೂ, ದೇವರ ರಾಜ್ಯವನ್ನು ಎದುರುನೋಡುತ್ತಿದ್ದವನು ಆಗಿದ್ದನು. ಅವನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ತನಗೆ ಕೊಡಿಸಬೇಕೆಂದು ಪಿಲಾತನನ್ನು ಕೇಳಿಕೊಂಡನು. ದೇವರ ಸಾಮ್ರಾಜ್ಯದ ಆಗಮನವನ್ನು ನಿರೀಕ್ಷಿಸುತ್ತಿದ್ದ ಈತನು ಯೆಹೂದ್ಯರ ನ್ಯಾಯಸಭೆಯ ಸನ್ಮಾನಿತ ಸದಸ್ಯನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬವನು ಬಂದು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು. ಇವನು ಹಿರೀಸಭೆಯವರಲ್ಲಿ ಘನವಂತನು, ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಗೌರವವುಳ್ಳವನೂ ಆಲೋಚನಾಸಭೆಯ ಸದಸ್ಯನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ತಸೆ ಮನುನ್ ಅರೆಮಾಥಿಯಾ ಮನ್ತಲ್ಯಾ ಗಾಂವಾಚೊ ಜುಜೆ ಯೆಲೊ,ತೊ ಜುದೆವಾಂಚ್ಯಾ ಮಂತ್ರಿ ಮಂಡಳಾಚೊ ಮರ್ಯಾದಿಚೊ ಸದಸ್ಯಾ, ತೊ ದೆವಾಚ್ಯಾ ರಾಜ್ ಯೆತಲೆ ವಾಟ್ ಬಗುನ್ಗೆತ್ ಹೊತ್ತೊ, ತೊ ಧಯ್ರೊ ಕರುನ್ ಪಿಲಾತಾಕ್ಡೆ ಗೆಲೊ ಅನಿ ಜೆಜುಚೆ ಮಡೆ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |
ತರುವಾಯ, ಅರಿಮಥಾಯ ಊರಿನ ಯೋಸೇಫ ಎಂಬವನು ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಪಿಲಾತನನ್ನು ಕೇಳಿಕೊಂಡನು. (ಯೋಸೇಫನು ಯೇಸುವಿನ ಒಬ್ಬ ಅನುಯಾಯಿ ಆಗಿದ್ದನು. ಆದರೆ ಅವನು ಯೆಹೂದ್ಯರಿಗೆ ಹೆದರಿಕೊಂಡಿದ್ದರಿಂದ ಅದರ ಬಗ್ಗೆ ಜನರಿಗೆ ಹೇಳಿಕೊಳ್ಳಲಿಲ್ಲ.) ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗಲು ಪಿಲಾತನು ಅವನಿಗೆ ಅಪ್ಪಣೆಕೊಟ್ಟನು. ಆದ್ದರಿಂದ ಅವನು ಬಂದು ಯೇಸುವಿನ ದೇಹವನ್ನು ತೆಗೆದುಕೊಂಡು ಹೋದನು.