ಮಾರ್ಕ 16:19 - ಪರಿಶುದ್ದ ಬೈಬಲ್19 ಪ್ರಭುವಾದ ಯೇಸು ಈ ಸಂಗತಿಗಳನ್ನು ಶಿಷ್ಯರಿಗೆ ಹೇಳಿದ ಮೇಲೆ, ಸ್ವರ್ಗದೊಳಗೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೇಸುಸ್ವಾವಿುಯು ಅವರ ಕೂಡ ಮಾತಾಡಿದ ಮೇಲೆ ಆಕಾಶಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಕರ್ತ ಯೇಸು ಅವರೊಂದಿಗೆ ಮಾತನಾಡಿದ ನಂತರ, ಅವರು ಪರಲೋಕಕ್ಕೆ ಏರಿ ದೇವರ ಬಲಪಾರ್ಶ್ವದಲ್ಲಿ ಕುಳಿತುಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಜೆಜು ತೆಂಕಾ ಅಶೆ ಹೆ ಸಗ್ಳೆ ಸಾಂಗುನ್ ಹೊಲ್ಲ್ಯಾ ಮಾನಾ ತೆಕಾ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ ಅನಿ ತೊ ದೆವಾಚ್ಯಾ ಉಜ್ವ್ಯಾ ಬಾಜುಕ್ ಬಸ್ಲೊ. ಅಧ್ಯಾಯವನ್ನು ನೋಡಿ |
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.