Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:20 - ಪರಿಶುದ್ದ ಬೈಬಲ್‌

20 ಶಿಷ್ಯರು ಪ್ರಪಂಚದ ಎಲ್ಲಾ ಕಡೆಗೆ ಹೋಗಿ, ಜನರಿಗೆ ಸುವಾರ್ತೆಯನ್ನು ಸಾರಿದರು. ಪ್ರಭುವು ಅವರೊಂದಿಗೆ ಕಾರ್ಯಸಾಧಿಸುತ್ತಾ, ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇತ್ತ ಶಿಷ್ಯರು ಹೊರಟುಹೋಗಿ, ಎಲ್ಲೆಡೆಗಳಲ್ಲಿಯೂ ಶುಭಸಂದೇಶವನ್ನು ಬೋಧಿಸತೊಡಗಿದರು. ಪ್ರಭು ಯೇಸು ಅವರೊಂದಿಗೆ ಕಾರ್ಯಸಾಧಿಸುತ್ತಾ, ಮಹತ್ಕಾರ್ಯಗಳಿಂದ ಶುಭಸಂದೇಶವನ್ನು ಸಮರ್ಥಿಸುತ್ತಾ ಇದ್ದರು. (ಆ ಮಹಿಳೆಯರು ಹೋಗಿ ತಾವು ಕೇಳಿದ್ದೆಲ್ಲವನ್ನೂ ಪೇತ್ರನಿಗೂ ಆತನ ಸಂಗಡಿಗರಿಗೂ ಸಂಕ್ಷಿಪ್ತವಾಗಿ ತಿಳಿಸಿದರು. ಅನಂತರ ಯೇಸುಸ್ವಾಮಿ ಸ್ವತಃ ತಮ್ಮ ಶುಭಸಂದೇಶವನ್ನು ಶಿಷ್ಯರ ಮೂಲಕ ಜಗತ್ತಿನೆಲ್ಲೆಡೆ ಹರಡುವಂತೆ ಮಾಡಿದರು. ಶಾಶ್ವತ ಜೀವೋದ್ಧಾರವನ್ನೀಯುವ ಈ ಶುಭಸಂದೇಶವು ಪವಿತ್ರ ಹಾಗೂ ಚಿರಂತನವಾದುದು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇತ್ತಲಾಗಿ ಅವರು ಹೊರಟುಹೋಗಿ ಎಲ್ಲೆಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಕೂಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸುತ್ತಾ ಇದ್ದನು.]

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಶಿಷ್ಯರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು. ಕರ್ತನು ಅವರ ಜೊತೆಯಲ್ಲಿ ಕೆಲಸ ಮಾಡುತ್ತಾ, ಸೂಚಕಕಾರ್ಯಗಳಿಂದ ತಮ್ಮ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಶಿಸಾನಿ ಸಗ್ಳ್ಯಾಕ್ಡೆ ಜಾವ್ನ್ ಬರಿ ಖಬರ್ ಸಾಂಗ್ಲ್ಯಾನಿ ಅನಿ ದೆವಾನ್ ತೆಂಚ್ಯಾ ವಾಂಗ್ಡಾ ಕಾಮ್ ಕರುನ್ ಸುಮಾರ್ ವಿಚಿತ್ರಾ ಕರ್ತಲ್ಯಾಚ್ಯಾ ವೈನಾ ಹೆನಿ ಸಾಂಗ್ತಲಿ ಬರಿ ಖಬರ್ ಖರಿ ಹಾಯ್ ಮನುನ್ ದಾಕ್ವುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:20
15 ತಿಳಿವುಗಳ ಹೋಲಿಕೆ  

ಆದರೆ ಪೌಲ ಬಾರ್ನಬರು ಇಕೋನಿಯಾದಲ್ಲಿ ಬಹುಕಾಲವಿದ್ದು ಪ್ರಭುವಿನ ಕುರಿತು ಧೈರ್ಯದಿಂದ ಮಾತಾಡಿದರು. ಪ್ರಭುವು ಅವರ ಮೂಲಕ ಸೂಚಕಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡಿ ತನ್ನ ಕೃಪಾಸಂದೇಶವನ್ನು ನಿರೂಪಿಸಿದನು.


ಇದಲ್ಲದೆ, ದೇವರು ಅದ್ಭುತಕಾರ್ಯಗಳಿಂದ, ಸೂಚಕಕಾರ್ಯಗಳಿಂದ, ನಾನಾ ವಿಧವಾದ ಮಹತ್ಕಾರ್ಯಗಳಿಂದ ಮತ್ತು ಪವಿತ್ರಾತ್ಮನ ವರಗಳನ್ನು ತನ್ನ ಇಷ್ಟಾನುಸಾರವಾಗಿ ದಯಪಾಲಿಸುವುದರ ಮೂಲಕ ಅದನ್ನು ಸ್ಥಿರಪಡಿಸಿದನು.


ಅದ್ಭುತಕಾರ್ಯಗಳ ಶಕ್ತಿಯನ್ನು ಮತ್ತು ಮಹಾಕಾರ್ಯಗಳನ್ನು ನೋಡಿದ್ದರಿಂದಲೂ ಪವಿತ್ರಾತ್ಮನ ಶಕ್ತಿಯ ನಿಮಿತ್ತದಿಂದಲೂ ಅವರು ದೇವರಿಗೆ ವಿಧೇಯರಾದರು. ನಾನು ಜೆರುಸಲೇಮಿನಿಂದ ಇಲ್ಲುರಿಕ ಪ್ರಾಂತ್ಯದವರೆಗೂ ಸುವಾರ್ತೆಯನ್ನು ಬೋಧಿಸಿ, ನನ್ನ ಆ ಕರ್ತವ್ಯವನ್ನು ಪೂರೈಸಿದ್ದೇನೆ.


ಅಪೊಸ್ತಲರು ಅನೇಕ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿದರು. ಜನರೆಲ್ಲರೂ ಆ ಕಾರ್ಯಗಳನ್ನು ನೋಡಿದರು. ಅಪೊಸ್ತಲರು ಒಟ್ಟಾಗಿ ಸೊಲೊಮೋನನ ಮಂಟಪದಲ್ಲಿರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು.


ನಿನ್ನ ಕೈಚಾಚಿ ಯೇಸುವಿನ ಹೆಸರಿನ ಮೂಲಕ ರೋಗಿಗಳನ್ನು ಗುಣಪಡಿಸು; ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡು” ಎಂದು ಅವರು ಪ್ರಾರ್ಥಿಸಿದರು.


ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ.


ಪ್ರಭುವಾದ ಯೇಸು ಈ ಸಂಗತಿಗಳನ್ನು ಶಿಷ್ಯರಿಗೆ ಹೇಳಿದ ಮೇಲೆ, ಸ್ವರ್ಗದೊಳಗೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಸನ್ಮಾನ್ಯ ಥೆಯೊಫಿಲನೇ, ನಮ್ಮ ಮಧ್ಯದಲ್ಲಿ ಸಂಭವಿಸಿದ ಸಂಗತಿಗಳ ಚರಿತ್ರೆಯನ್ನು ತಿಳಿಸುವುದಕ್ಕೆ ಅನೇಕರು ಪ್ರಯತ್ನಿಸಿದ್ದಾರೆ.


ಪ್ರಾರಂಭದಿಂದಲೂ ಆ ಸಂಗತಿಗಳನ್ನು ಕಣ್ಣಾರೆ ಕಂಡು ದೇವರ ಸಂದೇಶವನ್ನು ಸಾರಿದವರಿಂದ ನಾವು ಕೇಳಿದ ಸಂಗತಿಗಳನ್ನೇ ಅವರು ಬರೆದಿದ್ದಾರೆ.


ನಮಗೆ ದಯಪಾಲಿಸಲ್ಪಟ್ಟ ಈ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ದಂಡನೆಯಂತೂ ಖಂಡಿತ. ಇದು ಪ್ರಭುವಿನಿಂದ ಮೊದಲು ಹೇಳಲ್ಪಟ್ಟಿತು. ಆತನಿಂದ ಕೇಳಿದವರೇ ಈ ರಕ್ಷಣೆಯ ಕುರಿತಾಗಿ ನಮಗೆ ಸ್ಥಿರಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು