ಮಾರ್ಕ 16:6 - ಪರಿಶುದ್ದ ಬೈಬಲ್6 ಆದರೆ ಅವನು, “ಭಯಪಡಬೇಡಿ! ಶಿಲುಬೆಗೇರಿಸಲ್ಪಟ್ಟ ನಜರೇತಿನ ಯೇಸುವನ್ನು ನೀವು ಹುಡುಕುತ್ತಿದ್ದೀರಲ್ಲವೇ? ಆತನು ಜೀವಂತನಾಗಿ ಎದ್ದಿದ್ದಾನೆ. ಆತನು ಇಲ್ಲಿಲ್ಲ. ನೋಡಿರಿ, ಆತನ ದೇಹವನ್ನು ಇಟ್ಟಿದ್ದ ಸ್ಥಳ ಇದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆತನು, “ಭಯಪಡಬೇಡಿ, ಶಿಲುಬೆಗೇರಿಸಿದ್ದ ನಜರೇತಿನ ಯೇಸುವನ್ನು ನೀವು ಹುಡುಕುತ್ತಾ ಇದ್ದೀರೆಂದು ನನಗೆ ತಿಳಿದಿದೆ. ಅವರು ಇಲ್ಲಿಲ್ಲ. ಪುನರುತ್ಥಾನ ಹೊಂದಿದ್ದಾರೆ. ನೋಡಿ, ಇದೇ ಅವರನ್ನು ಇಟ್ಟ ಸ್ಥಳ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವನು ಅವರಿಗೆ - ಬೆರಗಾಗಬೇಡಿರಿ. ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತೀರಲ್ಲವೇ. ಆತನು ಜೀವಿತನಾಗಿ ಎದ್ದಿದ್ದಾನೆ; ಇಲ್ಲಿ ಇಲ್ಲ. ಆತನನ್ನು ಇಟ್ಟಿದ್ದ ಸ್ಥಳವು ಇದೇ, ನೋಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲಾದ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರೊ? ಅವರು ಜೀವಿತರಾಗಿ ಎದ್ದಿದ್ದಾರೆ! ಇಲ್ಲಿ ಇಲ್ಲ; ಅವರನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತೆನಿ ತೆಂಕಾ “ಭಿಂವುನಕಾಶಿ, ಮಾಕಾ ಗೊತ್ತ್ ಹಾಯ್, ತುಮಿ ಹುಡಕ್ತಲೆ ಕುರ್ಸಾರ್ ಮಾರಲ್ಲ್ಯಾ ನಜರೆತಾಚ್ಯಾ ಜೆಜುಕ್, ತೊ ಹಿತ್ತೆ ನಾ, ತೊ ಝಿತ್ತೊ ಹೊವ್ನ್ ಉಟ್ಲಾ, ಹಿತ್ತೆ ಬಗಾ ತೆಕಾ ಥವಲ್ಲೊ ಜಾಗೊ. ಅಧ್ಯಾಯವನ್ನು ನೋಡಿ |
ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದ ಈ ಮನುಷ್ಯನಿಗೆ ಗುಣವಾಯಿತೆಂಬುದನ್ನು ನೀವು ಮತ್ತು ಯೆಹೂದ್ಯರೆಲ್ಲರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ! ನೀವು ಯೇಸುವನ್ನು ಶಿಲುಬೆಗೇರಿಸಿದಿರಿ. ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಈ ಮನುಷ್ಯನು ಕುಂಟನಾಗಿದ್ದನು, ಆದರೆ ಈಗ ಇವನು ಗುಣಹೊಂದಿದ್ದಾನೆ ಮತ್ತು ಯೇಸುವಿನ ಹೆಸರಿನಿಂದ ನಿಮ್ಮ ಮುಂದೆ ನಿಂತುಕೊಳ್ಳಲು ಶಕ್ತನಾಗಿದ್ದಾನೆ!