Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:7 - ಪರಿಶುದ್ದ ಬೈಬಲ್‌

7 ಈಗ ಹೋಗಿ ಆತನ ಶಿಷ್ಯರಿಗೆ ತಿಳಿಸಿರಿ. ಪೇತ್ರನಿಗಂತೂ ಖಂಡಿತವಾಗಿ ತಿಳಿಸಿರಿ. ನೀವು ಅವರಿಗೆ, ‘ಯೇಸು ಗಲಿಲಾಯಕ್ಕೆ ಹೋಗುತ್ತಿದ್ದಾನೆ. ಆತನು ನಿಮಗಿಂತ ಮುಂಚೆ ಅಲ್ಲಿರುತ್ತಾನೆ. ಆತನು ನಿಮಗೆ ಮೊದಲೇ ಹೇಳಿದಂತೆ ನೀವು ಆತನನ್ನು ಅಲ್ಲಿ ನೋಡುವಿರಿ’ ಎಂದು ಹೇಳಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈಗ ನೀವು ಹೋಗಿ ಪೇತ್ರನಿಗೂ ಮಿಕ್ಕ ಶಿಷ್ಯರಿಗೂ, ‘ಯೇಸು ನಿಮಗೆ ಮೊದಲೇ ತಿಳಿಸಿದಂತೆ, ನಿಮಗಿಂತ ಮುಂಚಿತವಾಗಿ ಗಲಿಲೇಯಕ್ಕೆ ಹೋಗುವರು. ಅವರನ್ನು ಅಲ್ಲೇ ಕಾಣುವಿರಿ,’ ಎಂದು ತಿಳಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ - ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ನೀವು ಹೊರಟುಹೋಗಿ ಯೇಸು ನಿಮಗೆ ಹೇಳಿದಂತೆ, ‘ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುತ್ತಾರೆ, ಅಲ್ಲಿ ನೀವು ಯೇಸುವನ್ನು ಕಾಣುವಿರಿ’ ಎಂದು ಅವರ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅತ್ತಾ ತುಮಿ ಜಾವಾ ಅನಿ ಹಿ ಖಬರ್ ತೆಚ್ಯಾ ಶಿಸಾಕ್ನಿ ಸಾಂಗಾ ಅನಿ ಪೆದ್ರುಕ್ಬಿ, ತೆನಿ ಅದ್ದಿಚ್ ಸಾಂಗಲ್ಲ್ಯಾ ಸರ್ಕೆ ತೊ ತುಮ್ಚ್ಯಾನ್ಕಿ ಅದ್ದಿ ಗಾಲಿಲಿಯಾಕ್ ಜಾತಾ, ಥೈ ತೆಕಾ ತುಮಿ ಬಗ್ತ್ಯಾಸಿ”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:7
12 ತಿಳಿವುಗಳ ಹೋಲಿಕೆ  

ಆದರೆ ನಾನು ಸತ್ತು ಪುನರುತ್ಥಾನ ಹೊಂದಿದ ಮೇಲೆ ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುತ್ತೇನೆ” ಎಂದನು.


ಆದರೆ ನಾನು ಸತ್ತಮೇಲೆ ಜೀವಂತನಾಗಿ ಎದ್ದುಬರುವೆನು. ನಂತರ ನಾನು ಗಲಿಲಾಯಕ್ಕೆ ಹೋಗುವೆನು. ನೀವು ಅಲ್ಲಿಗೆ ಹೋಗುವುದಕ್ಕಿಂತ ಮುಂಚೆಯೇ ನಾನು ಅಲ್ಲಿರುವೆನು” ಎಂದು ಹೇಳಿದನು.


ಯೇಸು ಆ ಸ್ತ್ರೀಯರಿಗೆ, “ಹೆದರಬೇಡಿ, ನನ್ನ ಸಹೋದರರ ಬಳಿಗೆ ಹೋಗಿ ಗಲಿಲಾಯಕ್ಕೆ ಬರಲು ತಿಳಿಸಿರಿ. ಅವರು ನನ್ನನ್ನು ಅಲ್ಲಿ ಕಾಣುವರು” ಎಂದು ಹೇಳಿದನು.


ಬೇಗನೆ ಹೋಗಿ ಆತನ ಶಿಷ್ಯರಿಗೆ, ‘ಯೇಸು ಪುನರುತ್ಥಾನ ಹೊಂದಿದ್ದಾನೆ. ಆತನು ಗಲಿಲಾಯಕ್ಕೆ ಹೋಗುತ್ತಿದ್ದಾನೆ. ನಿಮಗಿಂತ ಮುಂಚೆಯೇ ಆತನು ಅಲ್ಲಿರುತ್ತಾನೆ. ನೀವು ಆತನನ್ನು ಅಲ್ಲಿ ನೋಡುತ್ತೀರಿ’ ಎಂದು ಹೇಳಿರಿ. ನಾನು ನಿಮಗೆ ತಿಳಿಸಬೇಕಾದ ಸಮಾಚಾರ ಇದೇ, ಮರೆಯದಿರಿ” ಎಂದನು.


ತರುವಾಯ, ಯೇಸು ತನ್ನ ಶಿಷ್ಯರಿಗೆ ತಿಬೇರಿಯ (ಗಲಿಲಾಯ) ಸರೋವರದ ಬಳಿ ಕಾಣಿಸಿಕೊಂಡನು. ಅದು ಹೀಗೆ ನಡೆಯಿತು:


ಬಳಿಕ ಕ್ರಿಸ್ತನು ಪೇತ್ರನಿಗೆ ಕಾಣಿಸಿಕೊಂಡನು. ಅನಂತರ ಹನ್ನೆರಡು ಮಂದಿ ಅಪೊಸ್ತಲರಿಗೆ ಕಾಣಿಸಿಕೊಂಡನು.


ಇದಾದ ಮೇಲೆ ಗಲಿಲಾಯದಿಂದ ಯೇಸುವಿನೊಂದಿಗೆ ಜೆರುಸಲೇಮಿಗೆ ಬಂದಿದ್ದವರು, ಅನೇಕ ದಿನಗಳವರೆಗೆ ಆತನನ್ನು ನೋಡಿದರು. ಈಗ ಅವರೇ ಜನರಿಗೆ ಸಾಕ್ಷಿಗಳಾಗಿದ್ದಾರೆ.


ಆಗ ಯೇಸುವಿನ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ಆದರೆ ಈಗ ನೀವು ಅವನನ್ನು ಕ್ಷಮಿಸಬೇಕು ಮತ್ತು ಸಂತೈಸಬೇಕು. ಆಗ ಅವನು ಅತೀವ ದುಃಖದಿಂದ ಸಂಪೂರ್ಣವಾಗಿ ಸೋತುಹೋಗಲು ಸಾಧ್ಯವಾಗುವುದಿಲ್ಲ.


ಆ ಸ್ತ್ರೀಯರು ಬಹಳ ಭಯದಿಂದ ಗಲಿಬಿಲಿಗೊಂಡು, ಸಮಾಧಿಯನ್ನು ಬಿಟ್ಟು ಓಡಿಹೋದರು. ಅವರು ಬಹಳ ಭಯಗೊಂಡಿದ್ದರಿಂದ ಈ ವಿಷಯವನ್ನು ಯಾರಿಗೂ ಹೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು