Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:15 - ಪರಿಶುದ್ದ ಬೈಬಲ್‌

15 ಅಂದು ಸ್ವಲ್ಪ ಹೊತ್ತಾದ ಬಳಿಕ ಯೇಸು ಲೇವಿಯ ಮನೆಯಲ್ಲಿ ಊಟಮಾಡುತ್ತಿದ್ದನು. ಅಲ್ಲಿ ಅನೇಕ ಸುಂಕದ ಅಧಿಕಾರಿಗಳು ಮತ್ತು ಇತರ ಕೆಟ್ಟ ಜನರು ಸಹ ಯೇಸು ಮತ್ತು ಆತನ ಶಿಷ್ಯರ ಸಂಗಡ ಊಟಮಾಡುತ್ತಿದ್ದರು. ಈ ಜನರಲ್ಲಿ ಅನೇಕರು ಯೇಸುವಿನ ಹಿಂಬಾಲಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅನಂತರ ಯೇಸುವು ಆ ಲೇವಿಯನ ಮನೆಯೊಳಗೆ ಊಟಮಾಡುತ್ತಿರುವಾಗ, ಬಹು ಮಂದಿ ಸುಂಕದವರೂ, ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತದನಂತರ ಯೇಸು ಲೇವಿಯ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ಸುಂಕದವರು, ಪಾಪಿಷ್ಠರು, ಅಲ್ಲಿಗೆ ಬಂದರು. ಇವರೆಲ್ಲರೂ ಯೇಸು ಮತ್ತು ಅವರ ಶಿಷ್ಯರ ಪಂಕ್ತಿಯಲ್ಲೇ ಊಟಕ್ಕೆ ಕುಳಿತರು. ಇಂಥವರು ಬಹುಮಂದಿ ಯೇಸುವನ್ನು ಹಿಂಬಾಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅನಂತರ ಆತನು ಅವನ ಮನೆಯೊಳಗೆ ಊಟಕ್ಕೆ ಕೂತಿರುವಲ್ಲಿ, ಬಹು ಮಂದಿ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಪಂಙ್ತಿಯಲ್ಲೇ ಕೂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೇಸು ಲೇವಿಯ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಬಹುಮಂದಿ ಸುಂಕದವರೂ ತಿರಸ್ಕಾರ ಹೊಂದಿದ ಪಾಪಿಗಳೂ ಬಂದು ಯೇಸುವಿನೊಂದಿಗೂ ಅವರ ಶಿಷ್ಯರೊಂದಿಗೂ ಕುಳಿತುಕೊಂಡರು. ಬಹುಜನರು ಅವರನ್ನು ಹಿಂಬಾಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಹೆಚ್ಯಾ ಮಾನಾ, ಜೆಜು ಲೆವಿಚ್ಯಾ ಘರಾತ್ ಜೆವಾನ್ ಕರುಕ್ ಲಾಗಲ್ಲೊ. ಥೈ ಸುಮಾರ್ ತೆರ್‍ಗಿ ವಸುಲಿ ಕರ್‍ತಲಿ ಲೊಕಾ ಅನಿ ಪಾಪಿ ಲೊಕಾ ಜೆಜುಚ್ಯಾ ಫಾಟ್ನಾ ಹೊತ್ತಿ. ತ್ಯಾತುರ್‍ಲಿ ಉಲ್ಲಿ ಲೊಕಾ, ಜೆಜು ಅನಿ ತೆಚ್ಯಾ ಶಿಸಾಂಚ್ಯಾ ವಾಂಗ್ಡಾ ಜೆವ್ನಾಚ್ಯಾ ಪಂಗ್ತಿರ್ ಬಸುನ್ ಜೆವಾನ್ ಕರುಕ್ ಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:15
8 ತಿಳಿವುಗಳ ಹೋಲಿಕೆ  

ಅನೇಕ ಸುಂಕವಸೂಲಿಗಾರರು ಮತ್ತು ಪಾಪಿಗಳು ಯೇಸುವಿನ ಉಪದೇಶವನ್ನು ಕೇಳಲು ಬಂದಿದ್ದರು.


ಯೇಸು ಮತ್ತು ಅಪೊಸ್ತಲರು ಬೆಟ್ಟದಿಂದಿಳಿದು ಸಮತಟ್ಟಾದ ಸ್ಥಳಕ್ಕೆ ಬಂದರು. ಆತನ ಹಿಂಬಾಲಕರ ಒಂದು ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮಿನಿಂದಲೂ ಜನಸಮೂಹವು ಅಲ್ಲಿಗೆ ಬಂದಿತ್ತು.


ನಿಮ್ಮನ್ನು ಪ್ರೀತಿಸುವ ಜನರನ್ನೇ ನೀವು ಪ್ರೀತಿಸಿದರೆ, ಅದರಿಂದ ನಿಮಗೇನು ಪ್ರತಿಫಲ ದೊರೆಯುವುದು? ಸುಂಕದವರು ಸಹ ಹಾಗೆ ಮಾಡುತ್ತಾರೆ.


ಯೇಸು ಸರೋವರದ ತೀರದಲ್ಲಿ ನಡೆದು ಹೋಗುತ್ತಿದ್ದಾಗ ಸುಂಕವಸೂಲಿ ಮಾಡುತ್ತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡನು. ಲೇವಿಯು ಸುಂಕದಕಟ್ಟೆಯಲ್ಲಿ ಕುಳಿತಿದ್ದನು. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಆಗ ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.


ಈ ಸುಂಕದ ಅಧಿಕಾರಿಗಳೊಂದಿಗೆ ಮತ್ತು ಇತರ ಕೆಟ್ಟ ಜನರೊಂದಿಗೆ ಯೇಸು ಊಟಮಾಡುತ್ತಿರುವುದನ್ನು ಧರ್ಮೋಪದೇಶಕರು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ, “ಯೇಸು ಪಾಪಿಗಳೊಂದಿಗೆ ಮತ್ತು ಸುಂಕದ ಅಧಿಕಾರಿಗಳೊಂದಿಗೆ ಏಕೆ ಊಟ ಮಾಡುತ್ತಾನೆ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು