Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:16 - ಪರಿಶುದ್ದ ಬೈಬಲ್‌

16 ಯೇಸುವು ಈ ಹನ್ನೆರಡು ಮಂದಿಯನ್ನು ಆರಿಸಿಕೊಂಡನು: ಸೀಮೋನ (ಯೇಸು ಅವನಿಗೆ ಪೇತ್ರನೆಂದು ಹೆಸರನ್ನಿತ್ತನು),

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೇಸುವಿನಿಂದ ನೇಮಿಸಲ್ಪಟ್ಟ ಹನ್ನೆರಡು ಮಂದಿ ಇವರೇ: ಸೀಮೋನನೆಂಬವನಿಗೆ ಪೇತ್ರನೆಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸಿಮೋನ (ಯೇಸು ಈತನಿಗೆ ‘ಪೇತ್ರ’ ಎಂದು ಹೆಸರಿಟ್ಟರು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸೀಮೋನನೆಂಬವನಿಗೆ ಪೇತ್ರನೆಂದು ಹೆಸರನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೇಸು ನೇಮಿಸಿದ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಇಂತಿವೆ: ಸೀಮೋನನಿಗೆ ಯೇಸು “ಪೇತ್ರ” ಎಂಬ ಹೆಸರನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಜೆಜುನ್ ಎಚುನ್ ಕಾಡಲ್ಲ್ಯಾ ಬಾರಾ ಜಾನಾಂಚಿ ನಾವಾ ಹಿ - ಸಿಮಾವ್ ಹೆಕಾ ಜೆಜುನ್, ಪೆದ್ರು ಮನುನ್ ನಾವ್ ದಿಲ್ಯಾನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:16
14 ತಿಳಿವುಗಳ ಹೋಲಿಕೆ  

ಅವನು ಸೀಮೋನನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಸೀಮೋನನ ಕಡೆಗೆ ನೋಡಿ, “ಯೋಹಾನನ ಮಗನಾದ ನಿನ್ನ ಹೆಸರು ಸೀಮೋನ. ನೀನು ಕೇಫನೆಂದು ಕರೆಸಿಕೊಳ್ಳುವೆ” ಎಂದು ಹೇಳಿದನು. (“ಕೇಫ” ಅಂದರೆ “ಪೇತ್ರ” ಎಂದರ್ಥ).


ಅಪೊಸ್ತಲರು ಪಟ್ಟಣವನ್ನು ಪ್ರವೇಶಿಸಿ ತಾವು ವಾಸವಾಗಿದ್ದಲ್ಲಿಗೆ ಹೋದರು. ಅದು ಮೇಲಂತಸ್ತಿನಲ್ಲಿತ್ತು. ಆ ಅಪೊಸ್ತಲರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಯಾಕೋಬ (ಅಲ್ಫಾಯನ ಮಗ), ದೇಶಾಭಿಮಾನಿಯಾದ ಸಿಮೋನ ಮತ್ತು ಯೂದ (ಯಾಕೋಬನ ಮಗ).


ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ಆ ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ.


ಕ್ರಿಸ್ತ ವಿಶ್ವಾಸಿಯಾದ ಹೆಂಡತಿಯನ್ನು ನಮ್ಮೊಂದಿಗೆ ಪ್ರಯಾಣದಲ್ಲಿ ಕರೆದುಕೊಂಡು ಹೋಗಲು ಉಳಿದ ಅಪೊಸ್ತಲರಂತೆ, ಪ್ರಭುವಿನ ಸಹೋದರರಂತೆ ಮತ್ತು ಕೇಫನಂತೆ ನಮಗೆ ಹಕ್ಕಿಲ್ಲವೇ?


ಪೌಲ, ಅಪೊಲ್ಲೋಸ್ ಮತ್ತು ಕೇಫ ನಿಮ್ಮವರಾಗಿದ್ದಾರೆ. ಜಗತ್ತು, ಜೀವ, ಮರಣ ಮತ್ತು ವರ್ತಮಾನ ಹಾಗೂ ಭವಿಷ್ಯತ್ ಕಾಲಗಳ ಸಂಗತಿಗಳು ನಿಮ್ಮವೇ.


ಅಂದರೆ, ನಿಮ್ಮಲ್ಲಿ ಒಬ್ಬನು, “ನಾನು ಪೌಲನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ; ಮತ್ತೊಬ್ಬನು, “ನಾನು ಅಪೊಲ್ಲೋಸನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಇನ್ನೊಬ್ಬನು, “ನಾನು ಕೇಫನನ್ನು (ಪೇತ್ರನನ್ನು) ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಮತ್ತೊಬ್ಬನು, “ನಾನು ಕ್ರಿಸ್ತನನ್ನು ಹಿಂಬಾಲಿಸುತ್ತೇನೆ.” ಎಂದು ಹೇಳುತ್ತಾನೆ.


ಯೇಸು ಗಲಿಲಾಯ ಸರೋವರದ ಬಳಿ ನಡೆದುಹೋಗುತ್ತಿದ್ದಾಗ ಸೀಮೋನನನ್ನು ಮತ್ತು ಸೀಮೋನನ ಸಹೋದರನಾದ ಅಂದ್ರೆಯನನ್ನು ಕಂಡನು. ಇವರಿಬ್ಬರೂ ಬೆಸ್ತರಾಗಿದ್ದರು. ಇವರು ಮೀನುಗಳನ್ನು ಹಿಡಿಯಲು ಸರೋವರದೊಳಕ್ಕೆ ಬಲೆಯನ್ನು ಬೀಸುತ್ತಿದ್ದರು.


ಅಲ್ಲದೆ ದೆವ್ವಗಳಿಂದ ಪೀಡಿತರಾಗಿರುವ ಜನರನ್ನು ಅವುಗಳಿಂದ ಬಿಡಿಸುವುದಕ್ಕೆ ಅವರಿಗೆ ಅಧಿಕಾರ ಕೊಡಬೇಕೆಂಬುದು ಆತನ ಅಪೇಕ್ಷೆಯಾಗಿತ್ತು.


ಜಿಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನ (ಯೇಸು ಅವರಿಗೆ ಬೊವನೆರ್ಗೆಸ್ ಎಂಬ ಹೆಸರನ್ನಿತ್ತನು. ಈ ಹೆಸರಿಗೆ “ಸಿಡಿಲಿನ ಜನರು” ಎಂದರ್ಥ.)


ಮರುದಿನ ಬೆಳಿಗ್ಗೆ, ಯೇಸು ತನ್ನ ಶಿಷ್ಯರನ್ನು ಕರೆದನು. ಅವರಲ್ಲಿ ಹನ್ನೆರಡು ಮಂದಿಯನ್ನು ಆತನು ಆರಿಸಿಕೊಂಡನು. ಯೇಸು ಈ ಹನ್ನೆರಡು ಜನರಿಗೆ, “ಅಪೊಸ್ತಲರು” ಎಂದು ಹೆಸರಿಟ್ಟನು. ಅವರು ಯಾರೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು