ಮಾರ್ಕ 3:2 - ಪರಿಶುದ್ದ ಬೈಬಲ್2 ಅಲ್ಲಿದ್ದ ಕೆಲವು ಯೆಹೂದ್ಯರು, ಯೇಸುವನ್ನು ದೂಷಿಸುವುದಕ್ಕಾಗಿ ಆತನಲ್ಲಿ ಏನಾದರೂ ತಪ್ಪನ್ನು ಕಂಡುಹಿಡಿಯಲು ಎದುರು ನೋಡುತ್ತಿದ್ದರು. ಸಬ್ಬತ್‌ದಿನದಂದು ಆ ಮನುಷ್ಯನನ್ನು ಯೇಸು ಗುಣಪಡಿಸಬಹುದೆಂದು ಅವರು ಆತನ ಸಮೀಪದಲ್ಲಿಯೇ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಕೆಲವರು ಯೇಸುವಿನ ಮೇಲೆ ತಪ್ಪುಹೊರಿಸುವುದಕ್ಕೆ, ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚುಹಾಕಿ ನೋಡುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನನ್ನು ಸಬ್ಬತ್‍ದಿನದಲ್ಲಿ ಗುಣಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪುಹೊರಿಸಬಹುದೆಂಬ ಉದ್ದೇಶದಿಂದ ಕೆಲವರು ಹೊಂಚುಹಾಕುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವರು ಆತನ ಮೇಲೆ ತಪ್ಪುಹೊರಿಸಬೇಕೆಂದು ಆಲೋಚಿಸಿ ಸಬ್ಬತ್‍ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚಿನೋಡುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಕೆಲವರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು, ಸಬ್ಬತ್ ದಿನದಲ್ಲಿ ಅವನನ್ನು ಯೇಸು ಗುಣಪಡಿಸುವರೋ ಏನೋ ಎಂದು ಲಕ್ಷವಿಟ್ಟು ನೋಡುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಥೈ ಹೊತ್ತಿ ಜುದೆವಾಂಚಿ ಉಲ್ಲಿ ಮಾನ್ಸಾ, ಜೆಜು ತ್ಯಾ ಅಕಡಲ್ಲ್ಯಾ ಹಾತಾಚ್ಯಾ ಮಾನ್ಸಾಕ್ ಸಬ್ಬತಾಚ್ಯಾ ದಿಸಿ, ಗುನ್ ಕರ್‍ತಾ ಕಾಯ್ ಬಗುವಾ? ಅನಿ ಗುನ್ ಕರ್‍ಲ್ಯಾನ್ ತರ್, ತೆಚೆ ವರ್‍ತಿ ಎಕ್ ಝುಟೆ ಅಪ್ವಾದ್ ಘಾಲುವಾ, ಮನುನ್ ರಾಕುನ್ಗೆತ್ ಹೊತ್ತಿ. ಅಧ್ಯಾಯವನ್ನು ನೋಡಿ |
ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಆ ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.)
ಆದರೆ ಬೇರೆ ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಈ ಸಮಾಚಾರವನ್ನು ತಿಳಿದು ಹೊಟ್ಟೆಕಿಚ್ಚುಪಟ್ಟರು. ಅವರು ದಾನಿಯೇಲನ ಮೇಲೆ ದೋಷಾರೋಪಣೆ ಮಾಡಲು ಕಾರಣಗಳನ್ನು ಹುಡುಕಲಾರಂಭಿಸಿದರು. ದಾನಿಯೇಲನು ಮಾಡುವ ರಾಜ್ಯದ ಎಲ್ಲ ಕೆಲಸಗಳ ಮೇಲೆ ಅವರು ಕಣ್ಣಿಟ್ಟರು. ಆದರೆ ದಾನಿಯೇಲನಲ್ಲಿ ಯಾವ ತಪ್ಪೂ ಅವರಿಗೆ ಸಿಕ್ಕಲಿಲ್ಲ. ಆದ್ದರಿಂದ ಅವರು ಅವನ ಮೇಲೆ ಯಾವ ದೋಷಾರೋಪಣೆಯನ್ನೂ ಮಾಡಲಾಗಲಿಲ್ಲ. ದಾನಿಯೇಲನು ಪ್ರಾಮಾಣಿಕನೂ ವಿಶ್ವಾಸಪಾತ್ರನೂ ಆಗಿದ್ದನು. ಅವನು ಬಹಳ ಕಷ್ಟಪಟ್ಟು ಕೆಲಸ ಮಾಡುತ್ತಿದ್ದನು; ಅರಸನಿಗೆ ಯಾವ ರೀತಿಯಲ್ಲೂ ವಂಚನೆ ಮಾಡುತ್ತಿರಲಿಲ್ಲ.
ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.