28-30 ಇದಲ್ಲದೆ ಅವರು - ಇವನಿಗೆ ದೆವ್ವ ಹಿಡಿದದೆ ಎಂದು ಹೇಳಿದ್ದರಿಂದ ಆತನು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಎಷ್ಟು ದೂಷಿಸಿದಾಗ್ಯೂ ಅವರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಉಂಟಾಗುವದು, ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದನು; ಅವನು ಶಾಶ್ವತ ಪಾಪದೊಳಗೆ ಸೇರಿದವನಾದನು ಎಂದು ಹೇಳಿದನು.
ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.
ಯಾವನಾದರೂ ಯೆಹೋವನ ನಾಮದ ವಿರುದ್ಧ ಮಾತಾಡಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಜನರೆಲ್ಲರೂ ಅವನಿಗೆ ಕಲ್ಲೆಸೆದು ಕೊಲ್ಲಬೇಕು. ಯೆಹೋವನ ನಾಮವನ್ನು ನಿಂದಿಸುವ ಪರದೇಶಸ್ಥರಿಗೂ ಅದೇ ರೀತಿಯ ಶಿಕ್ಷೆಯಾಗಬೇಕು. ಯೆಹೋವನ ನಾಮವನ್ನು ನಿಂದಿಸುವವನಿಗೆ ಮರಣಶಿಕ್ಷೆಯಾಗಬೇಕು.