Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:3 - ಪರಿಶುದ್ದ ಬೈಬಲ್‌

3 ಯೇಸು ಕೈಬತ್ತಿದ್ದ ಆ ಮನುಷ್ಯನಿಗೆ, “ಎದ್ದುನಿಲ್ಲು, ಜನರೆಲ್ಲರೂ ನಿನ್ನನ್ನು ನೋಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಕೈಬತ್ತಿದ್ದವನಿಗೆ, “ಎದ್ದು ನಡುವೆ ನಿಂತುಕೋ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೇಸು ಬತ್ತಿದ ಕೈಯುಳ್ಳವನಿಗೆ, “ಎದ್ದು ಮುಂದಕ್ಕೆ ಬಾ,” ಎಂದರು. ಬಳಿಕ ಅಲ್ಲಿದ್ದವರನ್ನು ಉದ್ದೇಶಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಕೈಬತ್ತಿದ್ದವನಿಗೆ - ಎದ್ದು ನಡುವೆ ಬಾ ಎಂದು ಹೇಳಿ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೇಸು ಕೈಬತ್ತಿದವನಿಗೆ, “ಎದ್ದು ಮುಂದೆ ಬಾ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜೆಜುನ್ ತ್ಯಾ ಅಕಡಲ್ಲ್ಯಾ ಹಾತಾಚ್ಯಾಕ್ “ಉಟುನ್ ಫಿಡೆ ಯೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:3
12 ತಿಳಿವುಗಳ ಹೋಲಿಕೆ  

ಕ್ರಿಸ್ತನು ದೇಹಾರೂಢನಾಗಿದ್ದಾಗ ಸಂಕಟಪಟ್ಟನು. ಆದ್ದರಿಂದ ಕ್ರಿಸ್ತನಲ್ಲಿದ್ದ ಮನೋಭಾವವನ್ನೇ ನೀವೂ ಹೊಂದಿದವರಾಗಿ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ಶಾರೀರಿಕವಾಗಿ ಸಂಕಟವನ್ನು ಅನುಭವಿಸಿದ ವ್ಯಕ್ತಿಯು ಪಾಪದಿಂದ ಮುಕ್ತನಾಗಿದ್ದಾನೆ.


ನಾನಿನ್ನೂ ಸೆರೆಮನೆಯಲ್ಲಿದ್ದೇನೆ. ಆದರೆ ನನ್ನ ಈ ಸ್ಥಿತಿಯಿಂದ ಅನೇಕ ವಿಶ್ವಾಸಿಗಳು ಪ್ರೋತ್ಸಾಹಿತರಾಗಿ ಕ್ರಿಸ್ತನ ವಿಷಯವಾದ ಸಂದೇಶವನ್ನು ಮತ್ತಷ್ಟು ಧೈರ್ಯದಿಂದ ಜನರಿಗೆ ಹೇಳುತ್ತಿದ್ದಾರೆ.


ನಾವು ಒಳ್ಳೆಯ ಕಾರ್ಯ ಮಾಡುವುದರಲ್ಲಿ ಬೇಸರಗೊಳ್ಳಬಾರದು. ತಕ್ಕ ಸಮಯದಲ್ಲಿ ನಾವು ನಿತ್ಯಜೀವವೆಂಬ ಸುಗ್ಗಿಯನ್ನು ಪಡೆಯುವೆವು. ಆದ್ದರಿಂದ ಒಳ್ಳೆಯ ಕಾರ್ಯ ಮಾಡುವುದನ್ನು ನಾವು ಬಿಟ್ಟುಬಿಡಬಾರದು.


ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ.


ನನ್ನನ್ನು ಕಳುಹಿಸಿದಾತನ ಕಾರ್ಯವನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬರುತ್ತದೆ. ಆಗ ಯಾವನೂ ಕೆಲಸ ಮಾಡಲಾರನು.


ಆದರೆ ಅವರ ಆಲೋಚನೆಯು ಯೇಸುವಿಗೆ ತಿಳಿದಿತ್ತು. ಯೇಸುವು ಕೈಬತ್ತಿಹೋಗಿದ್ದ ಮನುಷ್ಯನಿಗೆ, “ಬಂದು ಇಲ್ಲಿ ನಿಂತುಕೊ” ಎಂದು ಹೇಳಿದನು. ಅವನು ಎದ್ದುಬಂದು ನಿಂತನು.


ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.


ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಆತನು ಬಲಹೀನನಾಗುವದಿಲ್ಲ; ಮುಗ್ಗರಿಸುವುದೂ ಇಲ್ಲ. ದೂರದೇಶದಲ್ಲಿರುವವರು ಸಹ ಆತನ ಬೋಧನೆಯನ್ನು ನಂಬುವರು.”


ಆ ಸಭಾಮಂದಿರದಲ್ಲಿ ಒಬ್ಬನ ಕೈ ಊನವಾಗಿತ್ತು. ಯೆಹೂದ್ಯರಲ್ಲಿ ಕೆಲವರು ಯೇಸುವಿನ ಮೇಲೆ ತಪ್ಪು ಹೊರಿಸುವುದಕ್ಕಾಗಿ ಕಾರಣ ಹುಡುಕುತ್ತಿದ್ದರು. ಆದ್ದರಿಂದ ಅವರು ಯೇಸುವಿಗೆ “ಸಬ್ಬತ್‌ದಿನದಲ್ಲಿ ಗುಣಪಡಿಸುವುದು ಸರಿಯೇ?” ಎಂದು ಕೇಳಿದರು.


ಅಲ್ಲಿದ್ದ ಕೆಲವು ಯೆಹೂದ್ಯರು, ಯೇಸುವನ್ನು ದೂಷಿಸುವುದಕ್ಕಾಗಿ ಆತನಲ್ಲಿ ಏನಾದರೂ ತಪ್ಪನ್ನು ಕಂಡುಹಿಡಿಯಲು ಎದುರು ನೋಡುತ್ತಿದ್ದರು. ಸಬ್ಬತ್‌ದಿನದಂದು ಆ ಮನುಷ್ಯನನ್ನು ಯೇಸು ಗುಣಪಡಿಸಬಹುದೆಂದು ಅವರು ಆತನ ಸಮೀಪದಲ್ಲಿಯೇ ಇದ್ದರು.


ನಂತರ ಯೇಸು ಜನರಿಗೆ, “ಸಬ್ಬತ್‌ದಿನದಂದು ಯಾವ ಕಾರ್ಯಗಳನ್ನು ಮಾಡಬೇಕು? ಒಳ್ಳೆಯ ಕಾರ್ಯವನ್ನೇ? ಕೆಟ್ಟಕಾರ್ಯವನ್ನೇ? ಒಂದು ಜೀವವನ್ನು ರಕ್ಷಿಸಬೇಕೇ? ಅಥವಾ ನಾಶಪಡಿಸಬೇಕೇ?” ಎಂದು ಕೇಳಿದನು. ಆಗ ಅವರು ಏನೂ ಉತ್ತರ ಕೊಡಲಾರದೆ ಮೌನವಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು