Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:31 - ಪರಿಶುದ್ದ ಬೈಬಲ್‌

31 ನಂತರ ಯೇಸುವಿನ ತಾಯಿ ಮತ್ತು ಆತನ ಸಹೋದರರು ಅಲ್ಲಿಗೆ ಬಂದರು. ಅವರು ಹೊರಗೆ ನಿಂತುಕೊಂಡು ಯೇಸುವಿಗೆ ಬರಬೇಕೆಂದು ಒಬ್ಬನ ಮೂಲಕ ಹೇಳಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಜನರು ಯೇಸುವಿನ ಸುತ್ತಲು ಕುಳಿತುಕೊಂಡಿದ್ದಾಗ ಆತನ ತಾಯಿಯೂ, ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೆಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಯೇಸುಸ್ವಾಮಿಯ ತಾಯಿ ಮತ್ತು ಸಹೋದರರು ಅಲ್ಲಿಗೆ ಬಂದರು. ಒಳಗೆ ಜನರು ಯೇಸುವಿನ ಸುತ್ತಲೂ ಗುಂಪಾಗಿ ಕುಳಿತಿದ್ದರು. ಆದುದರಿಂದ ಅವರು ಹೊರಗೇ ನಿಂತು, ಯೇಸುವಿಗೆ ಬರಬೇಕೆಂದು ಹೇಳಿಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಜನರು ಆತನ ಸುತ್ತಲು ಕೂತುಕೊಂಡಿದ್ದಾಗ ಆತನ ತಾಯಿಯೂ ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಗ ಯೇಸುವಿನ ತಾಯಿ ಮತ್ತು ಸಹೋದರರು ಬಂದು ಹೊರಗೆ ನಿಂತುಕೊಂಡು, ಯೇಸುವನ್ನು ಕರೆಯಲು ಹೇಳಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತವ್ಡ್ಯಾಕ್ ಮಟ್ಲ್ಯಾರ್, ಜೆಜುಚಿ ಬಾಯ್, ಅನಿ ಭಾವಾ, ಥೈ ಯೆವ್ನ್ ಪಾವ್ಲ್ಯಾನಿ. ತೆನಿ ಘರಾಚ್ಯಾ ಭಾಯ್ರ್ ಇಬೆ ರ್‍ಹಾವ್ನ್, ಜೆಜುಚ್ಯಾ ವಿಶಯಾತ್ ಖಬರ್ ಘೆವ್ನ್ ಯೆವ್ಕ್ ಸಾಂಗುನ್ ಧಾಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:31
5 ತಿಳಿವುಗಳ ಹೋಲಿಕೆ  

ಯೇಸುವಿನ ಕುಟುಂಬದವರಿಗೆ ಈ ವಿಷಯಗಳೆಲ್ಲ ತಿಳಿದವು. ಯೇಸುವಿಗೆ ಹುಚ್ಚು ಹಿಡಿದಿದೆಯೆಂದು ಕೆಲವರು ಹೇಳಿದ್ದರಿಂದ ಆತನ ಕುಟುಂಬದವರು ಆತನನ್ನು ಕರೆದೊಯ್ಯಲು ಅಲ್ಲಿಗೆ ಬಂದರು.


“ಇವನಿಗೆ ದೆವ್ವಹಿಡಿದಿದೆ” ಎಂದು ಧರ್ಮೋಪದೇಶಕರು ಆರೋಪಿಸಿದ್ದರಿಂದ ಯೇಸು ಹೀಗೆ ಹೇಳಬೇಕಾಯಿತು.


ಅನೇಕ ಜನರು ಯೇಸುವಿನ ಸುತ್ತಲೂ ಕುಳಿತಿದ್ದರು. ಅವನು ಯೇಸುವಿಗೆ, “ನಿನ್ನ ತಾಯಿ ಮತ್ತು ಸಹೋದರರು ನಿನಗಾಗಿ ಹೊರಗಡೆ ಕಾಯುತ್ತಿದ್ದಾರೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು